ಇಂದೇ ಫಸ್ಟ್ ಲಿಸ್? ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮ
Team Udayavani, Apr 8, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ದೆಹಲಿಗೆ ಶಿಫ್ಟ್ ಆಗಿದ್ದು ಇಂದು ರಾತ್ರಿ ಅಥವಾ ನಾಳೆಯೊಳಗೆ ಮೊದಲ ಹಂತದಲ್ಲಿ 125 ರಿಂದ 140 ಅಭ್ಯರ್ಥಿಗಳ ಪಟ್ಟಿ ಬಿಡುಗೆಯಾಗುವ ಸಾಧ್ಯತೆಯಿದೆ.
ಭಾನುವಾರ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ. ಸಂಭಾವ್ಯರ ಪಟ್ಟಿಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್‌ಕುಮಾರ್, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶನಿವಾರವೇ ದೆಹಲಿ ತಲುಪಿದ್ದಾರೆ.
ಸಂಸದೀಯ ಮಂಡಳಿ ಸಭೆಗೂ ಮುನ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು ರಾಜ್ಯ ಚುನಾವಣಾ ಸಮಿತಿಯು ರಾಜ್ಯದ 224 ಕ್ಷೇತ್ರಗಳ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿ ಪರಿಶೀಲಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಪಕ್ಷ ಹಾಗೂ ಆರ್‌ಎಸ್‌ಎಸ್ ವತಿಯಿಂದ ನಡೆಸಿರುವ ಸಮೀಕ್ಷಾ ವರದಿ ಹಾಗೂ ನಾಲ್ಕು ದಿನಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನೂ ಪರಿಗಣಿಸಿ ಸಂಭಾವ್ಯರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ರಾಜ್ಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಲ್ಕು ದಿನಗಳ ಕಾಲ ನಡೆಸಿದ ಅಭಿಪ್ರಾಯ ಸಂಗ್ರಹ ಕಸರತ್ತು ಶನಿವಾರ ಪೂರ್ಣಗೊಳಿಸಿತು.ಶನಿವಾರ ಕರಾವಳಿ, ಮಲೆನಾಡು ಭಾಗದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಕಾಂಕ್ಷಿಗಳು ಹಾಗೂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿತು.
ಬಿಎಸ್‌ವೈ, ಈಶ್ವರಪ್ಪ ಫೈನಲ್: ಹಾಲಿ ಸಂಸದರ ಪೈಕಿ ಯಡಿಯೂರಪ್ಪ, ಹಾಲಿ ವಿಧಾನಪರಿಷತ್ ಸದಸ್ಯರ ಪೈಕಿ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ಪರ್ಧೆಗೆ ಒಪ್ಪಿಗೆ ಸಿಕ್ಕಿದೆ.
ಸಂಸದ ಶ್ರೀರಾಮುಲು ಹಾಗೂ ಶೋಭಾ ಕರಂದ್ಲಾಜೆ ಅವರೂ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಕೇಳಿಬಂದಿತಾದರೂ ಅದನ್ನು ಕೇಂದ್ರದ ನಾಯಕರ ತೀರ್ಮಾನಕ್ಕೆ ಬಿಡಲಾಗಿದೆ. ನಾಯಕರ ಮಕ್ಕಳಿಗೆ ಟಿಕೆಟ್ ಕೊಡುವುದು ಎಂದಾದರೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಾಗೂ ವಿ.ಸೋಮಣ್ಣ ಪುತ್ರ ಡಾ.ಅರುಣ್‌ಸೋಮಣ್ಣ ಅವರಿಗೆ ಕ್ರಮವಾಗಿ ವರುಣಾ ಹಾಗೂ ಅರಸೀಕೆರೆಗೆ ಕ್ಷೇತ್ರದಿಂದ ಟಿಕೆಟ್ ಸಿಗಲಿದೆ. ಉಳಿದಂತೆ ವಿ.ಸೋಮಣ್ಣ ಸೇರಿ ಇತರೆ ವಿಧಾನಪರಿಷತ್ ಸದಸ್ಯ ಸ್ಪರ್ಧೆ ಬಗ್ಗೆಯೂ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಮತ್ತೂಬ್ಬ ಪ್ರಬಲ ಆಕಾಂಕ್ಷಿ
ರುದ್ರೇಗೌಡರನ್ನು ಸಮಾಧಾನಪಡಿಸುವ ಜವಾಬ್ದಾರಿ ಬಿ.ಎಸ್. ಯಡಿಯೂರಪ್ಪ ಅವರೇ ತೆಗೆದುಕೊಂಡರು ಎಂದು ಹೇಳಲಾಗಿದೆ.
ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹ ಮುಗಿದಿದ್ದು ಸಂಭಾವ್ಯರ ಪಟ್ಟಿಯೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ಎರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 150 ಅಭ್ಯರ್ಥಿಗಳ ಹೆಸರು ಘೋಷಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಳ್ಳಲಿದ್ದೇನೆ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು , ಜೆಡಿಎಸ್ ಇಕ್ಕಟ್ಟು ಇದೆ. ಆದರೆ, ಬಿಜೆಪಿಯಲ್ಲಿ ಒಗ್ಗಟ್ಟು ಇದೆ. ನಾವೆಲ್ಲರೂ ಒಟ್ಟಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಕ್ತವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
– ಅನಂತಕುಮಾರ್, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.