ಇಂದು ಸಿಎಂ, ದೇವೇಗೌಡರಿಂದ ಪ್ರಧಾನಿ ಭೇಟಿ
Team Udayavani, Sep 10, 2018, 6:00 AM IST
ಬೆಂಗಳೂರು: ಭಾರೀ ಮಳೆಯಿಂದ ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ವಿಕೋಪದಿಂದ ಉಂಟಾಗಿರುವ ಹಾನಿಗೆ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದ ನಿಯೋಗ ಸೋಮವಾರ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ.
ನೆರೆ ಪರಿಹಾರ ಕೋರಿ ಅ. 30ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ದೆಹಲಿಗೆ ತೆರಳಿದ್ದಾಗ ಪ್ರಧಾನಿಯವರು ವಿದೇಶ ಪ್ರವಾಸದಲ್ಲಿದ್ದರು. ಹೀಗಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಮಳೆಹಾನಿಯಿಂದ 3435.80 ಕೋಟಿ ರೂ. ನಷ್ಟವಾಗಿದ್ದು, ತಕ್ಷಣದ ಪರಿಹಾರವಾಗಿ 2000 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಪ್ರಧಾನಿ ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ಚರ್ಚಿಸಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದರೂ ಯಾವುದೇ ನೆರವು ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಪ್ರಧಾನಿಯವರನ್ನು ಖುದ್ದು ಭೇಟಿಯಾಗಲು ಮುಂದಾಗಿದ್ದ ಕುಮಾರಸ್ವಾಮಿ ಸೆ. 10ರಂದು ಸಮಯ ನಿಗದಿಪಡಿಸುವಂತೆ ಪ್ರಧಾನಿ ಕಚೇರಿಯನ್ನು ಕೋರಿದ್ದರು. ಅದರಂತೆ ಸಮಯ ನಿಗದಿಯಾಗಿದ್ದು, ಸೋಮಮವಾರ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಎಚ್.ಡಿ.ದೇವೇಗೌಡ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೃಷಿ ಸಚಿವ ಕೃಷ್ಣ ಬೈರೇಗೌಡ ಮತ್ತಿತರರು ಪ್ರಧಾನಿಯವರನ್ನು ಭೇಟಿಯಾಗಿ ತಕ್ಷಣ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.