ಇಂದು ವಿರಳ ಸಂಚಾರ ದಿನ
Team Udayavani, Feb 11, 2018, 12:02 PM IST
ಬೆಂಗಳೂರು: ವಾಯು ಮಾಲಿನ್ಯ ನಿಯಂತ್ರಿಸುವ ಜತೆಗೆ ಸಾರ್ವಜನಿಕ ಸಾರಿಗೆ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಘೋಷಿಸಿರುವ ವಿರಳ ಸಂಚಾರ ದಿನ ಆಚರಣೆಗೆ ಬೆಂಗಳೂರು ಸಜ್ಜಾಗಿದೆ.
ಪ್ರತಿ ತಿಂಗಳು ಎರಡನೇ ಭಾನುವಾರ ವಿರಳ ಸಂಚಾರ ದಿನ ನಡೆಯಲಿದೆ. ಸಾರಿಗೆ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರ ಸಂಚಾರ ಪೊಲೀಸ್ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಮೊದಲ ಆವೃತ್ತಿಗೆ ಭಾನುವಾರ ಚಾಲನೆ ದೊರೆಯಲಿದೆ.
ಇಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದ ಮುಖ್ಯ ದ್ವಾರದಲ್ಲಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾ ರೆಡ್ಡಿ, ರಮಾನಾಥ ರೈ, ಮೇಯರ್ ಆರ್. ಸಂಪತ್‌ರಾಜ್, ಶಾಸಕ ಕೆ. ಗೋವಿಂದರಾಜು, ಸಂಸದ ಪಿ.ಸಿ. ಮೋಹನ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಭಾಗವಹಿಸಲಿದ್ದಾರೆ.
ಇದೇ ವೇಳೆ ವಿಧಾನಸೌಧ ಮುಂಭಾಗದಿಂದ ಕಂಠೀರವ ಕ್ರೀಡಾಂಗಣದವರೆಗೆ ಬೈಸಿಕಲ್ ಮತ್ತು ಎಲೆಕ್ಟ್ರಿಕ್ ವಾಹನಗಳ ಜಾಥಾ ಹೊರಡಲಿದೆ. ವಿವಿಧ ಇಲಾಖೆ ಸಿಬ್ಬಂದಿ ಸೇರಿ ಜಾಥಾದಲ್ಲಿ ಸಾವಿರ ಜನ ಪಾಲ್ಗೊಳ್ಳಲಿದ್ದಾರೆ.
ಯೋಗರಾಜ ಭಟ್ಟರ ಕವನ: ವಿರಳ ಸಂಚಾರ ದಿನಾಚರಣೆಗೆ ನಟ ಯಶ್ ರಾಯಭಾರಿಯಾಗಿದ್ದು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಈ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಅಲ್ಲದೆ, ನಿರ್ದೇಶಕ ಯೋಗರಾಜ್ ಭಟ್ ಕವನ ರಚಿಸುವ ಮೂಲಕ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದ್ದಾರೆ. ವಿವಿಧ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳು, ಸರ್ಕಾರೇತರ ಸಂಘ-ಸಂಸ್ಥೆಗಳೂ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.
ನಗರದಲ್ಲಿರುವ 72 ಲಕ್ಷ ವಾಹನಗಳ ಪೈಕಿ 56 ಲಕ್ಷ ಖಾಸಗಿ ವಾಹನಗಳಿವೆ. ಒಂದು ದಿನದ ಮಟ್ಟಿಗೆ ಈ ವಾಹನಗಳು ರಸ್ತೆಗಿಳಿಯದಿದ್ದರೆ, ಸಾಕಷ್ಟು ಪ್ರಮಾಣದಲ್ಲಿ ವಾಯುಮಾಲಿನ್ಯ ತಗ್ಗಲಿದೆ. ಡೀಸೆಲ್ ಉಳಿತಾಯ ಆಗಲಿದೆ. ಸರ್ಕಾರದ ಈ ಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸ ಇದೆ ಎಂದು ಸಚಿವ ರೇವಣ್ಣ ತಿಳಿಸಿದ್ದಾರೆ.
ಪ್ರಯಾಣ ದರದಲ್ಲಿ ರಿಯಾಯ್ತಿ: ವಿರಳ ಸಂಚಾರ ದಿನದ ಪ್ರಯುಕ್ತ ಬಿಎಂಟಿಸಿ ದೈನಂದಿನ ಪಾಸು ಮತ್ತು “ನಮ್ಮ ಮೆಟ್ರೋ’ ಸ್ಮಾರ್ಟ್‌ಕಾರ್ಡ್ ಹೊಂದಿದವರಿಗೆ ಪ್ರಯಾಣ ದರದಲ್ಲಿ ರಿಯಾಯ್ತಿ ಕಲ್ಪಿಸಲಾಗಿದೆ. ವಿರಳ ಸಂಚಾರ ದಿನ ಪ್ರೋತ್ಸಾಹಿಸಲು ದೈನಂದಿನ ಪಾಸಿನ ದರದಲ್ಲಿ 5 ರೂ. ರಿಯಾಯಿತಿ ನೀಡಲಾಗುತ್ತಿದೆ. ಬಸ್ಸಿನ ಬೇಡಿಕೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ಮಾಡಲಿವೆ. ಇದು ಮೊದಲ ಆವೃತ್ತಿಯಾಗಿದ್ದು, ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ, “ನಮ್ಮ ಮೆಟ್ರೋ’ ರೈಲು ಪ್ರಯಾಣಿಕರು ಸಹ ರಿಯಾಯಿತಿ ದರದಲ್ಲಿ ಸಂಚರಿಸಬಹುದು. ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಶೇ.15ರ ಬದಲಿಗೆ ಶೇ. 25ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯಂತರ ಅವಧಿಯಲ್ಲಿ ಹೆಚ್ಚಿನ ಸಂಖ್ಯೆ ರೈಲುಗಳನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.