ರಾಜ್ಯಾದ್ಯಂತ ಇಂದು ರಂಜಾನ್ ಹಬ್ಬ ;ಗಣ್ಯರ ಶುಭಾಶಯಗಳು
Team Udayavani, Jun 26, 2017, 3:45 AM IST
ಬೆಂಗಳೂರು: ಇಸ್ಲಾಮಿಕ್ ಕ್ಯಾಲೆಂಡರ್‌ನ ಶವ್ವಾಲ್ ತಿಂಗಳ ಮೊದಲ ದಿನದ ಚಂದ್ರದರ್ಶನ ಭಾನುವಾರ ಸಂಜೆ ಆಗಿದ್ದು, ಅದರಂತೆ ಸೋಮವಾರ (ಜೂ.26) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಈದ್ ಉಲ್ ಫಿತ್ರ (ರಂಜಾನ್ ಹಬ್ಬ) ಆಚರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಚಂದ್ರದರ್ಶನ ಸಮಿತಿ ಪ್ರಕಟಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾನುವಾರವೇ ಈದ್ ಉಲ್ ಫಿತ್ರ ಆಚರಿಸಲಾಯಿತು. ಸೋಮವಾರ ರಾಜ್ಯದ ಉಳಿದ ಎಲ್ಲ ಭಾಗಗಳಲ್ಲಿ ಈದ್ ಆಚರಿಸಲಾಗುವುದು ಎಂದು ಸಮಿತಿ ಸದಸ್ಯ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ಮಾಹಿತಿ ನೀಡಿದ್ದಾರೆ.
ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ದಾವಣಗೆರೆ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕ ಕೇಂದ್ರಗಳು ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ನಡೆಯುವ ವಿಶೇಷ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ.
ಇದಲ್ಲದೇ ಬೆಂಗಳೂರಿನ ಮಿಲ್ಲರ್ಸ್ ಖುದ್ದೂಸ್ ಸಾಬ್ ಈದ್ಗಾ, ಬನ್ನೇರುಘಟ್ಟ ರಸ್ತೆಯ ಹಜರತ್ ಬಿಲಾಲ್ ಈದ್ಗಾ, ಮೈಸೂರು ರಸ್ತೆಯ ಚಾಮರಾಜಪೇಟೆ ಈದ್ಗಾ, ಜಯನಗರ 4ನೇ ಬ್ಲಾಕ್‌ನ ಈದ್ಗಾ, ಶಿವಾಜಿನಗರದ ಛೋಟಾ ಮೈದಾನ, ನಾಗವಾರದ ಸಬೀಲುರ್ರಶಾದ್ ಅರೆಬಿಕ್ ಕಾಲೇಜು ಮೈದಾನ ಸೇರಿದಂತೆ ವಿವಿಧ ಕಡೆ ಈದ್ ಪ್ರಾರ್ಥನೆ ನಡೆಯಲಿದೆ.
ನಾಗವಾರದ ಸಬೀಲುರ್ರಶಾದ್ ಅರೆಬಿಕ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈದ್ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ. ಮುಸ್ಲಿಮರು ಪವಿತ್ರ ಈದ್ ಉಲ್ ಫಿತ್ರ ಹಬ್ಬಕ್ಕೆ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ರಾಜಕೀಯ ಮುಖಂಡರು, ಗಣ್ಯರು ಶುಭಾಷಯ ಕೋರಿದ್ದಾರೆ.
ಗಣ್ಯರ ಶುಭಾಶಯಗಳು
ಬೆಂಗಳೂರು: ಈದುಲ್ ಫಿತ್ರ ಎಂದು ಕರೆಯಲಾಗುವ ಮುಸ್ಲಿಮರ ಪವಿತ್ರ ರಂಜಾನ್ ಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ವ್ಯಕ್ತಿಯ ಮನಃಶುದ್ದಿ ಮತ್ತು ಆತ್ಮಶುದ್ಧಿಗಾಗಿ ಒಂದು ತಿಂಗಳು ಉಪವಾಸ ವೃತ ಆಚರಿಸಿ, ತಿಂಗಳ ಕೊನೆಗೆ ಆಚರಿಸುವ ಹಬ್ಬದ ಸಂದರ್ಭದಲ್ಲಿ ಬಡವರಿಗೆ ದಾನ ಮಾಡುವುದು ರಂಜಾನ್ ಹಬ್ಬದ ವಿಶೇಷತೆ. ದಾನದ ಈ ಸಂಪ್ರದಾಯ ತಾನೂ ಬದುಕುವುದರ ಜೊತೆಗೆ ಮತ್ತೂಬ್ಬರನ್ನು ಬದುಕಲು ಅವಕಾಶ ನೀಡಬೇಕು ಎಂಬ ಶ್ರೇಷ್ಠ ಸಂದೇಶ ಸಾರುತ್ತದೆ.
ಒಂದೆಡೆ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಕಂದರ ಸೃಷ್ಟಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೂಂದಡೆ ಧರ್ಮ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರಂಜಾನ್ ಹಬ್ಬವು ಎಲ್ಲಡೆ ಮತ್ತು ಎಲ್ಲರಲ್ಲೂ ಸಹೋದರತೆ ಮತ್ತು ಸೌಹಾರ್ದತೆ ಮೂಡಿಸಲು ಪ್ರೇರಣೆ ಮತ್ತು ಸ್ಪೂರ್ತಿ ನೀಡಲಿ ಎಂಬುದೇ ನನ್ನ ಮನದಾಳದ ಹಾರೈಕೆ ಎಂದು ಸಿದ್ದರಾಮಯ್ಯ ತಮ್ಮ ಶುಭಾಷಯ ಸಂದೇಶದಲ್ಲಿ ತಿಳಿಸಿದ್ದಾರೆ.
“ಪವಿತ್ರ ಈದ್ ಉಲ್ ಫಿತ್ರ ಹಬ್ಬದ ಪ್ರಯುಕ್ತ ಸಮಸ್ತ ಮುಸ್ಲಿಂ ಬಾಂಧವರಿಗೆ ಶುಭಾಷಯಗಳನ್ನು ತಿಳಿಸುತ್ತೇನೆ . ಹಬ್ಬವು ಸುಖ, ಆರೋಗ್ಯ ಮತ್ತು ಶಾಂತಿಯುತ ಜೀವನ ದಯಪಾಲಿಸಲಿ ಎಂದು ಹಾರೈಸುತ್ತೇನೆ’.
– ವಜುಭಾಯಿ ವಾಲಾ, ರಾಜ್ಯಪಾಲ.
“ಶಾಂತಿ ಮತ್ತು ಸಹೋದರ ಭಾವವನ್ನು ಸಂಭ್ರಮದಿಂದ ವ್ಯಕ್ತಪಡಿಸುವ ರೀತಿಯಲ್ಲಿ ಆಚರಿಸಲಾಗುವ ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಶುಭಾಷಯಗಳನ್ನು ತಿಳಿಸುತೇನೆ. ಎಲ್ಲ ಮತರ್ಧಮಗಳ ಜನರು ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಒಂದೇ ಕುಟುಂಬದ ರೀತಿ ಬದುಕಿ ವಿವಿಧತೆಯಲ್ಲಿ ಏಕತೆ ಕಾಣುವ ಭಾರತದ ಭಾವೈಕ್ಯತೆ ಬಲಗೊಳ್ಳಲಿ. ಜನರ ಬದುಕು ಹಸನಾಗಿ ಸುಖ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಹಾರೈಸುತ್ತೇನೆ’.
- ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ.
“ಸಹೋದರತ್ವದ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತಾ, ನಾಡಿನ ಸಮಸ್ತ ಜನತೆಗೆ ಸುಖ ಶಾಂತಿ ಸಮೃದ್ಧಿ ವೃದ್ಧಿಸಲೆಂದು ಹಾರೈಸುತ್ತೇನೆ’.
- ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.