ಇಂದಿನಿಂದ ಕಾಂಗ್ರೆಸ್ ಪರ್ಯಾಯ ಯಾತ್ರೆ ಶುರು
Team Udayavani, Dec 21, 2017, 6:35 AM IST
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ “ಸಾಧನಾ-ಸಂಭ್ರಮ’ ಯಾತ್ರೆಗೆ ಪರ್ಯಾಯ ಎಂದೇ ಬಿಂಬಿತವಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ 100 ಕ್ಷೇತ್ರಗಳ ಯಾತ್ರೆ ಗುರುವಾರದಿಂದ ಪ್ರಾರಂಭವಾಗಲಿದೆ.
ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಾತ್ರೆಗೆ ಪ್ರಾರಂಭವಾಗಲಿದ್ದು, ಡಿ.21 ಮತ್ತು 22 ರಂದು ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಮುಳಬಾಗಿಲು, ಕೆಜಿಎಫ್, ಕೋಲಾರ ಹಾಗೂ ಮಾಲೂರು ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ.
ನಂತರ ಡಿ.29 ಮತ್ತು 30 ರಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಹೊಸಕೋಟೆ ಕ್ಷೇತ್ರಗಳಲ್ಲಿ ಯಾತ್ರೆ ಆಯೋಜಿಸಲಾಗಿದೆ.
ಪ್ರತಿ ಕ್ಷೇತ್ರದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಸರ್ಕಾರದ ಕಾರ್ಯಕ್ರಮಗಳು ಹಾಗೂ ಪ್ರತಿಪಕ್ಷಗಳ ಆರೋಪಗಳಿಗೆ ರಾಜಕೀಯವಾಗಿಯೇ ತಿರುಗೇಟು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮೊದಲ ಹಂತದ ನಂತರ ಎರಡನೇ ಹಂತದಲ್ಲಿ ಜನವರಿ 4 ಮತ್ತು 5 ರಂದು ಬೆಂಗಳೂರು ಗ್ರಾಮಾಂತರ ಹಾಊ ತುಮಕೂರು ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಲಿದೆ.
ಎಐಸಿಸಿ ಉಸ್ತುವಾರಿ ವೇಣುಗೋಪಾಲ್, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್, ಬಿ.ಕೆ.ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್.ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಪಕ್ಷದ ಎಲ್ಲ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.