ಇಂದು ವೈಶಾಲಿ, ಮೇಘನಾ ರಂಗ ಪ್ರವೇಶ
Team Udayavani, Jan 19, 2017, 12:14 PM IST
ಬೆಂಗಳೂರು: ಭರತನಾಟ್ಯ ಕ್ಷೇತ್ರದಲ್ಲಿ ತೀರಾ ಅಪರೂಪ ಎಂಬಂತೆ ತಾಯಿ ಹಾಗೂ ಮಗಳು ಇಬ್ಬರೂ ಒಂದೇ ವೇದಿಕೆಯಲ್ಲಿ, ಒಂದೇ ಬಾರಿಗೆ ಭರತನಾಟ್ಯ ರಂಗಪ್ರವೇಶ ಮಾಡಲಿರುವ ಅಪರೂಪದ ಕಾರ್ಯಕ್ರಮ ಶುಕ್ರವಾರ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ.
ಜ. 20 ರಂದು ವೈಶಾಲಿ (ವಿದ್ಯಾ) ಹಾಗೂ ಅವರ ಮಗಳು ಮೇಘನಾ ಇಬ್ಬರೂ ಮಲ್ಲೇಶ್ವರ ಚೌಡಯ್ಯ ಸ್ಮಾರಕ ಭವನದಲ್ಲಿ ಸಂಜೆ 6 ಗಂಟೆಗೆ ಹೇಮಾ ಕಲ್ಚರಲ್ ಅಕಾಡೆಮಿ ವತಿಯಿಂದ ಏರ್ಪಡಿಸಿರುವ “ಮೇಘ ವಿದ್ಯಾ ಸಮರ್ಪಣಂ’ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ರಂಗ ಪ್ರವೇಶ ಮಾಡಲಿದ್ದಾರೆ.
35 ವರ್ಷದ ವೈಶಾಲಿ ಅವರು ಭರತನಾಟ್ಯ ಅಭ್ಯಾಸ ಮಾಡಿ ನಡುವೆ ಕೆಲ ಕಾಲ ಬಿಡುವು ನೀಡಿದ್ದರು. ಬಳಿಕ ತಮ್ಮ ಮಗಳಾದ ಮೇಘನಾಗೆ 5ನೇ ವಯಸ್ಸಿನಿಂದಲೂ ಭರತನಾಟ್ಯ ತರಬೇತಿ ಕೊಡಿಸುತ್ತಿದ್ದರು. ಸತತ 8 ವರ್ಷಗಳ ಕಾಲ ಹೇಮಾ ಪ್ರಕಾಶ್ ಅವರ ಬಳಿ ಭರತನಾಟ್ಯ ಅಭ್ಯಾಸದ ಬಳಿಕ ಇದೀಗ ರಂಗ ಪ್ರವೇಶ ಮಾಡುತ್ತಿದ್ದಾರೆ.
ಇದೇ ವೇಳೆ ಹಲವು ವರ್ಷಗಳ ಕಾಲ ಬಿಡುವು ನೀಡಿದ್ದ ವೈಶಾಲಿ ಅವರು ಇತ್ತೀಚೆಗೆ ಅಭ್ಯಾಸ ಮುಂದುವರೆಸಿ ಮಗಳ ಜತೆಗೆ ರಂಗ ಪ್ರವೇಶಕ್ಕೆ ಸಿದ್ಧಗೊಂಡಿದ್ದಾರೆ. ಅಪರೂಪದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ವೈ.ಎ. ನಾರಾಯಣಸ್ವಾಮಿ, ರೇವಾ ವಿಶ್ವ ವಿದ್ಯಾಲಯದ ವಿಸಿ ಪಿ. ಶ್ಯಾಮರಾಜು, ಕಲಾವಿದರಾದ ಡಾ. ಶ್ರೀಧರ್, ಅನುರಾಧಾ ಶ್ರೀಧರ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.