ಶೆಲ್ಟರ್‌ ಸಮೀಪವೇ ಶೌಚಾಲಯ!


Team Udayavani, Nov 7, 2017, 1:27 PM IST

BMTC-Bus-Shelter.jpg

ಬೆಂಗಳೂರು: ಬಿಎಂಟಿಸಿ ಬಸ್‌ಗಾಗಿ ಕಾಯುವ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ 2,212 ಕಡೆಗಳಲ್ಲಿ ಬಸ್‌ ಶೆಲ್ಟರ್‌ಗಳ ನಿರ್ಮಾಣಕ್ಕೆ ಮುಂದಾಗಿರುವ ಬಿಬಿಎಂಪಿ, ಹೀಗೆ ನಿರ್ಮಿಸುವ 300 ಶೆಲ್ಟರ್‌ಗಳ ಪಕ್ಕದಲ್ಲೇ ಶೌಚಗೃಹಗಳನ್ನು ನಿರ್ಮಿಸಲು ತೀರ್ಮಾನಿಸಿದೆ.

ನಗರದ ಬಹುತೇಕ ಬಸ್‌ ನಿಲುಗಡೆ ಸ್ಥಳಗಳಲ್ಲಿ ಸೂಕ್ತ ಸೂರಿಲ್ಲದೆ ಪ್ರಯಾಣಿಕರು ಬಿಸಿಲಲ್ಲಿ ಬೆಂದು, ಮಳೆಯಲ್ಲಿ ನೆನೆದು ತೊಂದರೆ ಅನುಭವಿಸುತ್ತಾರೆ. ಪ್ರಯಾಣಿಕರ ಈ ಪರದಾಟ ತಪ್ಪಿಸಲು ಪಾಲಿಕೆಯ ಅಧಿಕಾರಿಗಳು ನಗರದಾದ್ಯಂತ 2,212 ಕಡೆಗಳಲ್ಲಿ ಬಸ್‌ ಶೆಲ್ಟರ್‌ ನಿರ್ಮಿಸಲು ಟೆಂಡರ್‌ ಆಹ್ವಾನಿಸಿದ್ದು, ಶೆಲ್ಟರ್‌ಗಳೊಂದಿಗೆ ಸೂಕ್ತ ಸ್ಥಳಾವಕಾಶವಿರುವ 300 ಕಡೆಗಳಲ್ಲಿ ಶೌಚಗೃಹ ನಿರ್ಮಿಸಲು ಯೋಜನೆ ರೂಪಿಸಿದ್ದಾರೆ. 

ನಗರದ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳು ಲಭ್ಯವಿಲ್ಲದ ಕಾರಣ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆಗೆ ಮುಂದಾಗುತ್ತಿದ್ದು, ಪರಿಣಾಮ ನಗರದ ಸೌಂದರ್ಯ ಹಾಗೂ ಸ್ವತ್ಛತೆ ಹಾಳಾಗುವಂತಾಗಿದೆ. ಆ ಹಿನ್ನೆಲೆಯಲ್ಲಿ ಪಾಲಿಕೆಯಿಂದ ನಿರ್ಮಿಸುವ ಬಸ್‌ಶೆಲ್ಟರ್‌ ಹಾಗೂ ಶೌಚಗೃಹ ನಿರ್ಮಿಸಲು ಟೆಂಡರ್‌ ಆಹ್ವಾನಿಸಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರಿಗೆ ಸೇವೆಯನ್ನು ಬಿಎಂಟಿಸಿ ನೀಡಿದರೆ, ಬಸ್‌ಗಳ ಸಂಚಾರಕ್ಕೆ ರಸ್ತೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಶೆಲ್ಟರ್‌ ನಿರ್ಮಿಸುವುದು ಪಾಲಿಕೆಯ ಜವಾಬ್ದಾರಿ. ಅದರಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 8 ಸಾವಿರ ಬಸ್‌ ನಿಲುಗಡೆಗಳಿದ್ದು, ಕೇವಲ 1 ಸಾವಿರ ಕಡೆಗಳಲ್ಲಿ ಮಾತ್ರ ಶೆಲ್ಟರ್‌ಗಳಿವೆ. ಆ ಹಿನ್ನೆಲೆಯಲ್ಲಿ ನಾಲ್ಕು ಹಂತಗಳಲ್ಲಿ ನಗರದ 2,212 ನಿಲುಗಡೆಗಳಲ್ಲಿ ಬಸ್‌ಶೆಲ್ಟರ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಿದ್ದು, ಮೊದಲ ಹಂತವಾಗಿ 550 ಶೆಲ್ಟರ್‌ ನಿರ್ಮಾಣಕ್ಕೆ ಟೆಂಡರ್‌ ಆಹ್ವಾನಿಸಲಾಗಿದೆ. 

ಬೆಂಗಳೂರಿನಲ್ಲಿ 587 ಶೌಚಗೃಹಗಳು
ಬೆಂಗಳೂರು ಮಹಾನಗರ ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿದೆ. ರಾಜಧಾನಿಗೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿ ನಿತ್ಯ 15 ಲಕ್ಷಕ್ಕೂ ಅಧಿಕ ಜನ ಬಂದು ಹೋಗುತ್ತಾರೆ. ಆದರೆ, ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ಸ್ಥಳಗಳು ಸೇರಿ ಕೇವಲ 587 ಕಡೆಗಳಲ್ಲಿ ಮಾತ್ರ ಶೌಚಗೃಹಗಳಿದ್ದು, ಸಾರ್ವಜನಿಕರು ಜಲಭಾದೆ ತಡೆಯಲಾಗದೆ ಖಾಲಿ ಜಾಗ,

ಪಾಂಪೌಂಡ್‌, ಗೋಡೆ, ವಿದ್ಯುತ್‌ ಟ್ರಾನ್ಸ್‌ಫಾರರ್‌ ಸೇರಿದಂತೆ ನಗರದ ಪ್ರಮುಖ ಜಾಗವೆಂದೂ ಲೆಕ್ಕಿಸದೆ ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಅದನ್ನು ತಪ್ಪಿಸುವ ಉದ್ದೇಶದಿಂದ ಪಾಲಿಕೆಯಿಂದ 250 ಕಡೆಗಳಲ್ಲಿ ಶೌಚಗೃಹ ಹಾಗೂ 100 ಕಡೆಗಳಲ್ಲಿ ಇ-ಶೌಚಾಲಯ ನಿರ್ಮಿಸಲು ಮುಂದಾಗಿದೆ.

ಬಾರದ ಎಸ್ಸಿ, ಎಸ್ಟಿ ಗುತ್ತಿಗೆದಾರರು
ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ಬಸ್‌ ಶೆಲ್ಟರ್‌ಗಳನ್ನು ನಿರ್ಮಿಸಲು ಪಾಲಿಕೆ ಟೆಂಡರ್‌ ಆಹ್ವಾನಿಸಿದ್ದು, ಮೊದಲ ಹಂತದ 550 ಶೆಲ್ಟರ್‌ಗಳನ್ನು ನಿರ್ಮಾಣ ಗುತ್ತಿಗೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೇ ನೀಡಲು ಮೂರು ಬಾರಿ ಟೆಂಡರ್‌ ಕರೆಯಲಾಗಿದೆ. ಮೂರು ಬಾರಿಯೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ನಾಲ್ಕನೇ ಬಾರಿ ಟೆಂಡರ್‌ ಆಹ್ವಾನಿಸಲಾಗಿದ್ದು, ಗುತ್ತಿಗೆ ಪಡೆಯುವವರು ಬಸ್‌ ಶೆಲ್ಟರ್‌, ಶೌಚಾಲಯ ಹಾಗೂ ಬಿಎಂಟಿಸಿ ಬಸ್‌ಗಳ ಮಾಹಿತಿ ನೀಡಿರುವ ಡಿಜಿಟಲ್‌ ಫ‌ಲಕ ಅಳವಡಿಸಬೇಕಾಗುತ್ತದೆ. 

ಕೋಟ್ಯಂತರ ವರಮಾನ
ಪಿಪಿಪಿ ಮಾದರಿಯಲ್ಲಿ ಬಸ್‌ಶೆಲ್ಟರ್‌, ಶೌಚಗೃಹ ನಿರ್ಮಿಸಲು ಬಿಬಿಎಂಪಿ ಟೆಂಡರ್‌ ಆಹ್ವಾನಿಸಿದ್ದು, ಪಾಲಿಕೆಯಿಂದ ಯಾವುದೇ ಹಣ ನೀಡಲಾಗುವುದಿಲ್ಲ. ಗುತ್ತಿಗೆ ಪಡೆದ ಸಂಸ್ಥೆ 20 ವರ್ಷಗಳವರೆಗೆ ಬಸ್‌ಶೆಲ್ಟರ್‌ ಹಾಗೂ ಶೌಚಗೃಹಗಳ ನಿರ್ವಹಣೆ, ಸ್ವತ್ಛತೆ ಕಾಪಾಡಬೇಕಾಗುತ್ತದೆ. ಇದರೊಂದಿಗೆ ಪಾಲಿಕೆಗೆ ವಾಷಿರ್ಕ ನೆಲಬಾಡಿಗೆ ಹಾಗೂ ಜಾಹೀರಾತು ಶುಲ್ಕ ಪಾವತಿಸಬೇಕಾಗಿದ್ದು, ಇದರಿಂದಾಗಿ ಪಾಲಿಕೆಗೆ ವಾರ್ಷಿಕ 2 ಕೋಟಿಗೂ ಅಧಿಕ ವರಮಾನ ಬರಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ನಗರದ 2,212 ಕಡೆಗಳಲ್ಲಿ ಬಸ್‌ಶೆಲ್ಟರ್‌ಗಳನ್ನು ನಿರ್ಮಿಸಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ 550 ಕಡೆಗಳಲ್ಲಿ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ. ಶೆಲ್ಟರ್‌ ಜತೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಗೃಹ ನಿರ್ಮಿಸಲು ನಿರ್ಧರಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಿಸುತ್ತಿರುವುದರಿಂದ ಪಾಲಿಕೆಯಿಂದ ನೆಲಬಾಡಿಗೆ ಹಾಗೂ ಜಾಹೀರಾತು ಶುಲ್ಕ ರೂಪದಲ್ಲಿ ವರಮಾನ ಬರಲಿದೆ. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ನಗರದಲ್ಲಿರೋದು 587 ಶೌಚಗೃಹ ಅಷ್ಟೇ
ಬೃಹತ್‌ ಬೆಂಗಳೂರು ಮಹಾನಗರ ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿದೆ. ರಾಜಧಾನಿಗೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿ ನಿತ್ಯ 15 ಲಕ್ಷಕ್ಕೂ ಅಧಿಕ ಜನ ಬಂದು ಹೋಗುತ್ತಾರೆ. ಆದರೆ, ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ಸ್ಥಳಗಳು ಸೇರಿ ಕೇವಲ 587 ಕಡೆಗಳಲ್ಲಿ ಮಾತ್ರ ಶೌಚಗೃಹಗಳಿದ್ದು, ಸಾರ್ವಜನಿಕರು ಜಲಭಾದೆ ತಡೆಯಲಾಗದೆ ಖಾಲಿ ಜಾಗ, ಪಾಂಪೌಂಡ್‌, ಗೋಡೆ, ವಿದ್ಯುತ್‌ ಟ್ರಾನ್ಸ್‌ಫಾರರ್‌ ಸೇರಿದಂತೆ ನಗರದ ಪ್ರಮುಖ ಜಾಗವೆಂದೂ ಲೆಕ್ಕಿಸದೆ ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಅದನ್ನು ತಪ್ಪಿಸುವ ಉದ್ದೇಶದಿಂದ ಪಾಲಿಕೆಯಿಂದ 250 ಕಡೆಗಳಲ್ಲಿ ಶೌಚಗೃಹ ಹಾಗೂ 100 ಕಡೆಗಳಲ್ಲಿ ಇ-ಶೌಚಾಲಯ ನಿರ್ಮಿಸಲು ಮುಂದಾಗಿದೆ.

ಬಾರದ ಎಸ್ಸಿ, ಎಸ್ಟಿ ಗುತ್ತಿಗೆದಾರರು
ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ಬಸ್‌ ಶೆಲ್ಟರ್‌ಗಳನ್ನು ನಿರ್ಮಿಸಲು ಪಾಲಿಕೆ ಟೆಂಡರ್‌ ಆಹ್ವಾನಿಸಿದ್ದು, ಮೊದಲ ಹಂತದ 550 ಶೆಲ್ಟರ್‌ಗಳನ್ನು ನಿರ್ಮಾಣ ಗುತ್ತಿಗೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೇ ನೀಡಲು ಮೂರು ಬಾರಿ ಟೆಂಡರ್‌ ಕರೆಯಲಾಗಿದೆ. ಮೂರು ಬಾರಿಯೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ನಾಲ್ಕನೇ ಬಾರಿ ಟೆಂಡರ್‌ ಆಹ್ವಾನಿಸಲಾಗಿದ್ದು, ಗುತ್ತಿಗೆ ಪಡೆಯುವವರು ಬಸ್‌ ಶೆಲ್ಟರ್‌, ಶೌಚಾಲಯ ಹಾಗೂ ಬಿಎಂಟಿಸಿ ಬಸ್‌ಗಳ ಮಾಹಿತಿ ನೀಡಿರುವ ಡಿಜಿಟಲ್‌ ಫ‌ಲಕ ಅಳವಡಿಸಬೇಕಾಗುತ್ತದೆ.

* ವೆಂ. ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.