ಫಾದರ್‌ ಟೋಂ ಬಿಡುಗಡೆಗೆ ಆಗ್ರಹಿಸಿ ಧರಣಿ

Team Udayavani, Jan 31, 2017, 11:56 AM IST

fatheer-tome.jpg

ಬೆಂಗಳೂರು: ಯಮೆನ್‌ ರಾಷ್ಟ್ರದಲ್ಲಿ ಉಪನ್ಯಾಸಕ ರಾಗಿದ್ದ ಭಾರತೀಯ ಮೂಲದ ಫಾದರ್‌ ಟೋಂ ಎಂಬುವರನ್ನು ಉಗ್ರರು ಅಪಹರಿಸಿ 10 ತಿಂಗಳು ಕಳೆದರೂ ಅವರ ಬಿಡುಗಡೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬಿಡುಗಡೆಯ ಚಿರತೆಗಳು ಕರ್ನಾಟಕ ಸಂಘಟನೆ ಸೋಮವಾರ ಪ್ರತಿಭಟನೆ ನಡೆಸಿತು. ನಗರದ ಪುರಭವನ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು, ಫಾದರ್‌ ಟೋಂ ಅವರ ಬಿಡುಗಡೆಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾ ಡಿದ ಮಾಜಿ ಸಂಸದ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಎಚ್‌.ಟಿ.ಸಾಂಗ್ಲಿಯಾನ, ಫಾದರ್‌ ಟೋಂ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಈ ಬಗ್ಗೆ ಯಮೆನ್‌ ರಾಷ್ಟ್ರದ ಅಧಿಕಾರಿಗಳ ಕರೆಸಿ ಮಾತನಾಡಬೇಕು ಎಂದು ಹೇಳಿದರು.

ಸಂಘಟನೆ ರಾಜ್ಯಾಧ್ಯಕ್ಷ ಜಿ.ಎ.ಭಾವ ಮಾತನಾಡಿ, ಫಾದರ್‌ ಟೋಂರನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕ್ಯಾಥೊಲಿಕ್‌ ಬಿಷಪ್ಸ್‌ ಕಾನ್ಪರೆನ್ಸ್‌ ಆಫ್ ಇಂಡಿಯಾ ಮೂಲಕ ಪ್ರಧಾನಿ ಮತ್ತು ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಮನವಿಗಳನ್ನು ಸಲ್ಲಿಸಲಾಗಿದೆ.

ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಐವಾನ್‌ ನಿಗ್ಲಿ, ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಎಂ.ಎ.ನಜೀಬ… ಸೇರಿದಂತೆ ನಗರದ ಹಲವಾರು ಚರ್ಚ್‌ಗಳ ಫಾದರ್‌ಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.