ಕನ್ನಡ ಕಾರ್ಯಕರ್ತರ ಬಳಗದಿಂದ ನಾಳೆ ಧರಣಿ
Team Udayavani, Nov 11, 2017, 11:15 AM IST
ಬೆಂಗಳೂರು: ಕರ್ನಾಟಕಕ್ಕೊಂದು ಅಧಿಕೃತ ಕನ್ನಡ ಬಾವುಟ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ, ನಾಡಗೀತೆ ಹಾಡುವ ಕ್ರಮ, ನಿರ್ದಿಷ್ಟ ಕಾಲಾವಧಿ ಮತ್ತು ಧಾಟಿಯನ್ನು ನಿಗದಿಪಡಿಸುವುದು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸೇರಿದಂತೆ ಕನ್ನಡಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ಕಾರ್ಯಕರ್ತರ ಬಳಗೆ ನ.12ರ ಭಾನುವಾರ ಪುರಭವನದ ಎದುರು ಧರಣಿ ಹಮ್ಮಿಕೊಂಡಿದೆ.
ಕನ್ನಡದ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದ್ದು, ತಕ್ಷಣದಿಂದಲೇ ಇವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಿ ಅದಕ್ಕೆ ಕಾಯ್ದೆ ರೂಪ ನೀಡಬೇಕು ಎಂದು ಆಗ್ರಹಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಕಾರ್ಯಕರ್ತರ ಬಳಗದ ಪ್ರಧಾನ ಸಂಚಾಲಕರಾದ ವ.ಚ.ಚನ್ನೇಗೌಡ ಮತ್ತು ರಾ.ನಂ.ಚಂದ್ರಶೇಖರ್ ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಅಂದು ಬೆಳಗ್ಗೆ 10.30ಕ್ಕೆ ಧರಣಿಗೆ ಚಾಲನೆ ನೀಡಲಿದ್ದಾರೆ. ಚಿಂತಕ ಡಾ.ಜಿ.ರಾಮಕೃಷ್ಣ ಕನ್ನಡ ಕಾರ್ಯಕರ್ತರು, ಕನ್ನಡಾಭಿಮಾನಿಗಳು, ಕನ್ನಡ ಕಾರ್ಯಕರ್ತರ ಬಳಗದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.