ನಾಳೆ ಪಿಇಎಸ್‌ ವಿವಿ 6ನೇ ಘಟಿಕೋತ್ಸವ

ವಿದ್ಯಾರ್ಥಿಗಳಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪದವಿ ಪ್ರದಾನ

Team Udayavani, Nov 14, 2021, 10:56 AM IST

ಪಿಇಎಸ್‌ ವಿವಿ 6ನೇ ಘಟಿಕೋತ್ಸವ

ಬೆಂಗಳೂರು; ಪಿಇಎಸ್‌ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ನ.15ರಂದು ನಡೆಯಲಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಾಧಿಪತಿ ಪ್ರೊ. ಎಂ.ಆರ್‌. ದೊರೆಸ್ವಾಮಿ, ಈ ಬಾರಿ ಒಟ್ಟಾರೆ ಐವರಿಗೆ ಪಿಎಚ್‌.ಡಿ, ಒಬ್ಬರಿಗೆ ಎಂ.ಟೆಕ್‌ ಸಂಶೋಧನಾ ಪದವಿ, ರ್‍ಯಾಂಕ್‌ ಪಡೆದ 22 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 59 ವಿದ್ಯಾರ್ಥಿಗಳಿಗೆ ರಜತ ಪದಕ ಒಳಗೊಂಡಂತೆ 2168 ಪ್ರಷರ್ಸ್‌ (ಪ್ರಸಕ್ತ ಶೈಕ್ಷಣಿಕ ಸಾಲಿನವರು) ಸೇರಿ 2249 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಸೋಮವಾರ ಬೆಳಗ್ಗೆ 11.30ಕ್ಕೆ ಪಿಇಎಸ್‌ ವಿವಿ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ.

ಉಪ ರಾಷ್ಟ್ರಪತಿ ಜೊತೆಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹಲೋತ್‌, ಸಚಿವರಾದ ಬೈರತಿ ಬಸವರಾಜು ಹಾಗೂ ಮುನಿರತ್ನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. 2019ರಲ್ಲಿ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ್ದ ಪ್ರವಾಹದಿಂದ ಸಾಕಷ್ಟು ಶಾಲಾ ಕಟ್ಟಡಗಳು ಹಾಳಾಗಿದ್ದವು. ಈ ಪೈಕಿ ಪಿಇಎಸ್‌ ವಿವಿಯು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 9 ಶಾಲೆಗಳನ್ನು ದತ್ತು ಪಡೆದಿದೆ.

ಇದನ್ನೂ ಓದಿ:- ಆರ್ಟ್‌ ಗ್ಯಾಲರಿ, ಚಿತ್ರಕಲಾ ಪ್ರದರ್ಶನಕೆ ಚಾಲನೆ

ಹಾಳಾಗಿದ್ದ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ ಸುಸಜ್ಜಿತ ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಟ್ಟಿದೆ. ಈ ಶಾಲೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಅಧಿವೇಶನದ ವೇಳೆ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಪ್ಲೇಸ್‌ಮೆಂಟ್‌ನಲ್ಲಿ 1496 ಮಂದಿ ಅರ್ಹತೆ: ಪಿಇಎಸ್‌ ವಿಶ್ವವಿದ್ಯಾಲಯವು ಈ ಬಾರಿ ನಡೆಸಿದ ಕಾಲೇಜು ಕ್ಯಾಂಪಸ್‌ ಪ್ಲೇಸ್‌ ಮೆಂಟ್‌ನಲ್ಲಿ 1,496 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದು, ಈಗಾಗಲೇ 946 ಮಂದಿ ಉದ್ಯೋಗ ಪಡೆದಿದ್ದಾರೆ.

ಇಲ್ಲಿಯವರೆಗೂ 114 ಕಂಪನಿಗಳು ಕ್ಯಾಂಪಸ್‌ ಸಂದರ್ಶನ ನಡೆಸಿವೆ. ಇನ್ನೂ 71 ಸಂಸ್ಥೆಗಳು ಸಂದರ್ಶನ ನಡೆಸಲು ವಿವಿಯನ್ನು ಸಂಪರ್ಕಿಸಿವೆ ಎಂದು ವಿವಿ ಕುಲಸಚಿವ ಡಾ.ಕೆ.ಎಸ್‌. ಶ್ರೀಧರ್‌ ಮಾಹಿತಿ ನೀಡಿದರು. ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಸ್ಟಾರ್ಟ್‌ ಅಪ್‌ ಕಂಪನಿಗಳನ್ನು ನಿರ್ಮಾಣ ಮಾ ಡುವ ಹಂಬಲವಿರುವ ಯುವಕರಿಗೆ “ಪೆಸು ವೆಂ ಚರ್‌ ಲ್ಯಾಬ್ಸ್’ ಹೆಸರಿನಲ್ಲಿ ಪ್ರೋತ್ಸಾಹ ನೀಡುತ್ತಿದೆ.

ಹೊಸ ಕಂಪನಿಗಳನ್ನು ನಿರ್ಮಿಸು ವವರಿಗಾಗಿ ಅರ್ಜಿ ಕರೆದಿದ್ದು, ಈ ವರೆಗೆ 200 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 10 ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸ್ಟಾರ್ಟ್‌ ಅಪ್‌ ಕಂಪನಿಗಳನ್ನು ಆರಂಭಿಸಲು ಸಹಕಾರ ಮತ್ತು ಅವಶ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾ ಗುತ್ತಿದೆ ಎಂದು “ಪೆಸು ವೆಂಚರ್‌ ಲ್ಯಾಬ್ಸ್’ ಮುಖ್ಯಸ್ಥರಾಗಿರುವ ಸುರೇಶ್‌ ನರಸಿಂಹ ತಿಳಿಸಿದರು. ಕುಲಪತಿ ಡಾ.ಜೆ. ಸೂರ್ಯಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.