ನಾಳೆ, ಏ.30 ರಂದು ಪಲ್ಸ್ ಪೋಲಿಯೋ ಅಭಿಯಾನ
Team Udayavani, Apr 1, 2017, 10:25 AM IST
ಬೆಂಗಳೂರು: ರಾಜ್ಯದಲ್ಲಿ ಈ ಭಾನುವಾರ (ಏ.2) ಮೊದಲ ಸುತ್ತು ಹಾಗೂ ಏ.30ರಂದು ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪ್ರತಿ ಸುತ್ತಿನಲ್ಲೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದೆ ಎಂದು ಹೇಳಿದರು. ರಾಜ್ಯದ ಪ್ರತಿ ನಗರ, ಪಟ್ಟಣ, ಗ್ರಾಮದಲ್ಲೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಅಂಗವಾಗಿ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. 32617 ಬೂತ್, 51,732 ತಂಡಗಳನ್ನು ರಚಿಸಲಾಗಿದ್ದು, 1,03,464 ಕಾರ್ಯಕರ್ತರನ್ನು ನಿಯೋಜಿಸಲಾಗುವುದು. ಇವರ ಜತೆಗೆ 6522 ಮೇಲ್ವಿಚಾರಕರು, 1020 ಸಂಚಾರಿ ತಂಡ, ಬಸ್, ರೈಲ್ವೆ ಹಾಗೂ ವಿಮಾನ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ 1737 ತಂಡಗಳು ಕಾರ್ಯನಿರ್ವಹಿಸಲಿವೆ ಎಂದು ವಿವರಿಸಿದರು.
ಪಲ್ಸ್ ಪೋಲಿಯೋ ಸೋಂಕಿನಲ್ಲಿ ಪಿ-1, ಪಿ-2 ಹಾಗೂ ಪಿ-3 ಎಂಬ ಮೂರು ವಿಧಗಳಿವೆ. ಪಿ-2 ಪೋಲಿಯೋ ಸೋಂಕ 1999ರಲ್ಲಿ ನಿರ್ಮೂಲನೆಯಾಗಿದ್ದು 2015ರಲ್ಲಿ ಅಧಿಕೃತವಾಗಿ ಪ್ರಮಾಣ ಪತ್ರ ದೊರೆತಿದೆ. ಕಳೆದ ಮೂರು ವರ್ಷಗಳಿಂದ ಪಿ-3 ಪ್ರಕರಣಗಳು ವರದಿಯಾಗಿಲ್ಲ. ಇದರ ಪ್ರಮಾಣ ಪತ್ರದ ನಿರೀಕ್ಷೆ ಬರಬೇಕಿದೆ. ಇದೀಗ ಪಿ-1 ಪ್ರಕರಣಗಳು ಮಾತ್ರ ವರದಿಯಾಗುತ್ತಿದ್ದು ಅದನ್ನು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.