ನಾಳೆಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ
Team Udayavani, Mar 22, 2018, 6:15 AM IST
ಬೆಂಗಳೂರು : ಯಾವುದೇ ಗೊಂದಲ ಇಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ಣಗೊಂಡಿದ್ದು, ಮಾ.23ರಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.
ರಾಜ್ಯದ 2,817 ಕೇಂದ್ರಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ 8,54,424 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮೂಲಕವೇ ಪಡೆದಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಆನ್‌ಲೈನ್ ಮೂಲಕವೇ ಹಂಚಿಕೆ ಮಾಡಲಾಗಿದೆ.
ವಿದ್ಯಾರ್ಥಿಗಳ ಸಾಧನೆ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆ(ಎಸ್‌ಎಟಿಎಸ್) ಜಾರಿಗೆ ಬಂದ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆ ಇದಾಗಿದೆ. ಖಾಸಗಿ ವಿದ್ಯಾರ್ಥಿಗಳಿಗೂ ಆನ್‌ಲೈನ್ ನೋಂದಾಣಿ ಕಡ್ಡಾಯ ಮಾಡಲಾಗಿದೆ.
ರಾಜ್ಯದ 14,385 ಪ್ರೌಢ ಶಾಲೆಗಳಲ್ಲಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಲಿದ್ದು, 1,011 ಕ್ಲಸ್ಟರ್ ಕೇಂದ್ರ ಹಾಗೂ 1807 ನಾನ್ ಕ್ಲಸ್ಟರ್ ಕೇಂದ್ರಗಳಿವೆ. 45 ಕೇಂದ್ರಗಳನ್ನು ಸೂಕ್ಷ್ಮ ಮತ್ತು 23 ಅತಿ ಸೂಕ್ಷ್ಮ ಕೇಂದ್ರಗಳನ್ನು ಗುರುತಿಸಲಾಗಿದೆ.
2817 ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗಿದೆ. ಸುರಕ್ಷತೆ ದೃಷ್ಠಿಯಿಂದ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಬಳಸುವ ವಾಹನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಾರ್ಗಾಧಿಕಾರಿಗಳೊಂದಿಗೆ ಪೊಲೀಸ್ ಅಧಿಕಾರಿಗಳು ಇರಲಿದ್ದಾರೆ. ಪರೀಕ್ಷಾ ಮೇಲ್ವಿಚಾರಕರು ಸೇರಿದಂತೆ ಎಲ್ಲಾ ಸಿಬ್ಬಂದಿಗೂ ಗುರುತಿನ ಚೀಟಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭದ್ರತೆಗಾಗಿ ವಿಭಾಗೀಯ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು, ಜಿಲ್ಲಾ ಮಟ್ಟದಲ್ಲಿ 2,043 ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರಾಗಿ ನೇಮಿಸಲಾಗಿದೆ. 406 ಡಯಟ್ ಉಪನ್ಯಾಸಕರನ್ನು ಜಾಗೃತ ದಳದ ಸದಸ್ಯರನ್ನಾಗಿ ನೇಮಿಸಿದೆ.
2,817 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಸ್ಥಾನಿಕ ಜಾಗೃತ ದಳವನ್ನು ಸಹ ನೇಮಿಸಲಾಗಿದೆ. ವಿದ್ಯಾರ್ಥಿ ಮತ್ತು ಪಾಲಕರ ಗೊಂದಲಗಳ ನಿವಾರಣೆಗಾಗಿ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದೆ. 080-23310075-76 ಸಂಖ್ಯೆಗೆ ಬೆಳಗ್ಗೆ 10 ರಿಂದ ಸಂಜೆ 7.30ರ ವರೆಗೆ ಕರೆ ಮಾಡಬಹುದು ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.