ಪೌರಕಾರ್ಮಿಕರ ಪರಿಷ್ಕೃತ ವೇತನ ಹಿಂಬಾಕಿ ಕುರಿತು ನಾಳೆ ಆದೇಶ


Team Udayavani, Jun 20, 2017, 12:34 PM IST

george.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಕನಿಷ್ಠ ವೇತನದ ಹಿಂಬಾಕಿ ನೀಡುವ ಕುರಿತು ಬುಧವಾರ ಆದೇಶ ಹೊರಡಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಭರವಸೆ ನೀಡಿದ್ದಾರೆ. 

ಗಾಂಧಿನಗರದ ನ್ಯಾಷನಲ್‌ ಮಾರ್ಕೆಟ್‌ ವಾಣಿಜ್ಯ ಸಂಕೀರ್ಣದ ಬಳಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಸ್ವತ್ಛ ಮತ್ತು ಆರೋಗ್ಯಕರ ನಗರ ನಿರ್ಮಾಣಕ್ಕಾಗಿ ಹಮ್ಮಿಕೊಂಡಿರುವ “ಜೋಡಿ ಕಸದ ಡಬ್ಬಿಗಳ ಅಳವಡಿಕೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈಗಾಗಲೇ ಗುತ್ತಿಗೆ ಪೌರಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಕೆಲವರಿಗೆ ಪರಿಷ್ಕೃತ ವೇತನ ಸಿಕ್ಕಿಲ್ಲ. ಇದರೊಂದಿಗೆ ಕೆಲವು ತಿಂಗಳ ಪರಿಷ್ಕೃತ ವೇತನದ ಹಿಂಬಾಕಿ ದೊರೆಯಬೇಕಿದೆ ಈ ಕುರಿತು ಮಂಗಳವಾರ ಸಭೆ ನಡೆಸಿ ವೇತನ ಜಾರಿಗೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. 

ಬೆಂಗಳೂರನ್ನು ಸ್ವತ್ಛವಾಗಿಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೇವಲ 5 ಸಾವಿರ ವೇತನ ನೀಡಲಾಗುತ್ತಿತ್ತು. ಸರ್ಕಾರದ ಅದನ್ನು 17 ಸಾವಿರಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದ್ದು, ಎಲ್ಲ ಕಾರ್ಮಿಕರಿಗೆ ಶೀಘ್ರದಲ್ಲಿಯೇ ಪರಿಷ್ಕೃತ ಕನಿಷ್ಠ ವೇತನ ಹಾಗೂ ಹಿಂಬಾಕಿ ನೀಡುವ ಕುರಿತು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಮತ್ತು ನಗರ ಪೌರಾಡಳಿತ ಇಲಾಖೆಗಳ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಹಂತ ಹಂತವಾಗಿ ಅವರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಬೇಡಿಕೆಯಂತೆ ಅವರ ವೇತನವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. 

2,232 ಕಸದ ಡಬ್ಬಿಗಳ ಅಳವಡಿಕೆ!: ಮೇಯರ್‌ ಜಿ.ಪದ್ಮಾವತಿ ಮಾತನಾಡಿ, ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ 2,232 ಕಸ ಸಂಗ್ರಹಿಸುವ ಡಬ್ಬಿಗಳ ಖರೀದಿ ಹಾಗೂ ಅಳವಡಿಕೆಗಾಗಿ 4.15 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇಂತಹ ಡಬ್ಬಿಗಳನ್ನು ನಗರದಲ್ಲಿನ ಜನಸಂದಣಿ ಪ್ರದೇಶಗಳು, ವಾಣಿಜ್ಯ, ಮಾರುಕಟ್ಟೆ, ಕೊಳಚೆ ಪ್ರದೇಶಗಳು, ಪ್ರಮುಖ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇರಿಸಲು ತೀರ್ಮಾನಿಸಿದ್ದು, ಅವುಗಳನ್ನು ಬಳಸುವ ಮೂಲಕ ನಗರದ ಸ್ವತ್ಛತೆಗೆ ನಾಗರಿಕರು ಮುಂದಾಗಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು, ನಗರದಲ್ಲಿಯೇ ಅತಿ ಹೆಚ್ಚು ಜನಸಂದಣಿ ಇರುವುದು ಗಾಂಧಿನಗರ. ಇಂತಹ ಭಾಗದಲ್ಲಿ ಪಾಲಿಕೆಯಿಂದ ಕಸ ಸಂಗ್ರಹ ಡಬ್ಬಿಗಳ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿರುವುದು ಸ್ವಾಗತಾರ್ಹ. ನಗರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಾಗೂ ಪಾಲಿಕೆಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಆದರೆ, ಅದನ್ನು ಯಾರು ಪರಿಗಣಿಸಿದೆ ಹೇವಲ ನಕಾರತ್ಮಕ ವಿಷಯಗಳನ್ನಿಟ್ಟುಕೊಂಡು ಟೀಕೆ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪಮೇಯರ್‌ ಎಂ.ಆನಂದ್‌, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಆಡಳಿತ ಪಕ್ಷ ನಾಯಕ ಮಹಮ್ಮದ್‌ ರಿಜ್ವಾನ್‌ ನವಾಬ್‌, ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತ ಸಫ್ರಾಜ್‌ ಖಾನ್‌ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಬಿಜೆಪಿ ರಾಜಕಾರಣ ಸರಿಯಲ್ಲ: ರಾಜರಾಜೇಶ್ವರಿ ನಗರದಲ್ಲಿನ ಪಾಲಿಕೆ ಸದಸ್ಯೆಯರ ಮೇಲಿನ ಹಲ್ಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಕೆ.ಜೆ.ಜಾರ್ಜ್‌, “ಕ್ಷೇತ್ರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ. ಆದರೆ, ಬಿಜೆಪಿಯವರು ಇದರಲ್ಲಿಯೂ ರಾಜಕೀಯ ಮಾಡುತ್ತಿರುವುದು ಸರಿಯಲ್ಲ,’ ಎಂದು ಕಿಡಿಕಾರಿದರು. ಈ ಕುರಿತು ಪ್ರತಿಕ್ರಿಯಿಸಿದ ಮೇಯರ್‌ ಜಿ.ಪದ್ಮಾವತಿ, “ಪಾಲಿಕೆ ಸದಸ್ಯೆ ಮಂಜುಳಾ ನಾರಾಯಣಸ್ವಾಮಿ ಸೇರಿದ ಮೂವರು ಸದಸ್ಯೆಯರಿಗೆ ಘಟನೆಯ ವಿವರ ಕೋರಿ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ,’ ಎಂದು ತಿಳಿಸಿದರು.

ತ್ಯಾಜ್ಯದ ಕ್ವಾರಿಗಳಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು, ಭರ್ತಿಯಾಗಿರುವ ಕ್ವಾರಿಗಳನ್ನು ಆಟದ ಮೈದಾನ, ಉದ್ಯಾನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರೊಂದಿಗೆ ಹೊರ ವಲಯಗಳಲ್ಲಿ ತ್ಯಾಜ್ಯದಿಂದ ದುರ್ವಾಸನೆ ಬರುತ್ತಿರುವ ದೂರುಗಳಿದ್ದು, ಕೃಷಿ ಇಲಾಖೆ ನೆರವಿನಿಂದ ಸಮಸ್ಯೆ ಬಗೆಹರಿಸಲಾಗುವುದು. ಹಾಗೇ ತ್ಯಾಜ್ಯ ಘಟಕಗಳಲ್ಲಿ ಉಳಿಯುತ್ತಿರುವ ಆರ್‌ಡಿಎಫ್ ಮೂಲಕ ವಿದ್ಯುತ್‌ ಉತ್ಪಾದನೆ ಯೋಜನೆಯನ್ನು ಕೈಗತ್ತಿಕೊಳ್ಳಲಾಗಿದೆ. 
-ಕೆ.ಜೆ.ಜಾರ್ಜ್‌, ಸಚಿವ

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.