ಜ.16ರಿಂದ ಎರಡು ತಂಡದಲ್ಲಿ ಪ್ರವಾಸ


Team Udayavani, Jan 3, 2019, 12:30 AM IST

bjpsymbol.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಎರಡನೇ ಬಾರಿ ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿಯು ಹಿಂದುಳಿದ ವರ್ಗಗಳ ಜನರನ್ನು ಸಂಘಟಿಸಲು ಜ.16ರಿಂದ ಹಿರಿಯ ನಾಯಕರಾದ ಕೆ.ಎಸ್‌.ಈಶ್ವರಪ್ಪ ಹಾಗೂ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ಎರಡು ತಂಡಗಳ ಮೂಲಕ ಪ್ರತ್ಯೇಕವಾಗಿ ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸಲು ಮುಂದಾಗಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ.32.8ರಷ್ಟಿದೆ. ರಾಜ್ಯ, ಜಿಲ್ಲಾ, ಮಂಡಲ ಹಾಗೂ ಮತಗಟ್ಟೆ ಹಂತದಲ್ಲಿ ಹಿಂದುಳಿದ ವರ್ಗದವರ ಸಂಘಟನೆ ಸಕ್ರಿಯವಾಗಿದ್ದು, 4.65 ಲಕ್ಷ ಕ್ರಿಯಾಶೀಲ ಸದಸ್ಯರಿದ್ದಾರೆ. ಆ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ತಂಡಗಳಡಿ ಜ.16ರಿಂದ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಹಿಂದುಳಿದ ವರ್ಗಗಳ ಜನರನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.

ಮುಖ್ಯವಾಗಿ ಕೇಂದ್ರ ಸರ್ಕಾರ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಜನರಿಗೆ ಕಲ್ಪಿಸಿದ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಜತೆಗೆ ರಾಜ್ಯ ಸರ್ಕಾರದ ವೈಫ‌ಲ್ಯಗಳ ಬಗ್ಗೆಯೂ ಜನರಿಗೆ ತಿಳಿಸಲಾಗುವುದು. ಕಳೆದ ವಿಧಾನಸಭೆ ಚುನಾವಣೆಯಲ್ಲಿನ ಲೋಪ ಆಧರಿಸಿ  ಜ.10ರೊಳಗೆ ಜಿಲ್ಲಾ, ಮಂಡಲ, ಮತಗಟ್ಟೆ ಸಮಿತಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಫೆ.27ರಂದು ಬೃಹತ್‌ ಸಮ್ಮೇಳನ
ಎರಡೂ ತಂಡಗಳು ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಿವೆ. ಲೋಕಸಭಾ ಕ್ಷೇತ್ರದಲ್ಲಿನ ರಾಜ್ಯ ಒಬಿಸಿ ಕಾರ್ಯಕಾರಿಣಿ ಸಮಿತಿಯ ಸದಸ್ಯರು, ಜಿಲ್ಲಾ ಮತ್ತು ಮಂಡಲ ಕಾರ್ಯಕಾರಿಣಿ ಸಮಿತಿ ಸದಸ್ಯರು, ಕ್ಷೇತ್ರದಲ್ಲಿನ ಹಾಲಿ, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಹಿಂದುಳಿದ ವರ್ಗಗಳ ಎಲ್ಲ ಜಾತಿಯ ಪ್ರಭಾವಿ ನಾಯಕರು ಹಾಗೂ ಕ್ಷೇತ್ರ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಫೆಬ್ರವರಿ 27ರಂದು ರಾಜ್ಯಾಧ್ಯಕ್ಷರಾದ ಬಿ.ಎಸ್‌.ಯಡಿಯೂರಪ್ಪ ಅವರ ಹುಟ್ಟುಹಬ್ಬ ದಿನದಂದು ರಾಜ್ಯದ ಎಲ್ಲ ಭಾಗಗಳಿಂದ ಹಿಂದುಳಿದ ವರ್ಗಗಳ ಸಮುದಾಯದವರನ್ನು ಒಟ್ಟುಗೂಡಿಸಿಬೃಹತ್‌ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದರು.

ಪಾಟ್ನಾದಲ್ಲಿ ಒಬಿಸಿ ಸಮ್ಮೇಳನ
ಫೆ. 16 ಹಾಗೂ 17ರಂದು ಪಾಟ್ನಾದಲ್ಲಿ ಒಬಿಸಿ ಸಮ್ಮೇಳನ ನಡೆಯಲಿದೆ. ಆ ಸಮ್ಮೇಳನದಲ್ಲಿ ರಾಜ್ಯದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಮಂದಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಮೂಲಕ ಹಿಂದುಳಿದ ವರ್ಗಗಳ ಸಂಘಟನೆಗೆ ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಮ್ಮೇಳನ ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಬಗ್ಗೆಯೂ ಪ್ರವಾಸದ ವೇಳೆ ಮಾಹಿತಿ ಪಡೆಯಲಾಗುವುದು. ಆ ಕುರಿತು ರಾಜ್ಯಾಧ್ಯಕ್ಷರು ಹಾಗೂ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಸ್ಥಾನ ನೀಡುವಂತೆ ಕೋರಲಾಗುವುದು ಎಂದು ತಿಳಿಸಿದರು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ಇತರರು ಉಪಸ್ಥತರಿದ್ದರು.

ತಂಡ- 1
ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ತಂಡದಲ್ಲಿ ಪ್ರಮುಖರು:
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಎಂ.ಆರ್‌.ಹುಲಿನಾಯ್ಕರ್‌, ಅಶೋಕ್‌ ಕಾಟೆÌ ಇತರರು. ಪ್ರವಾಸ ಕೈಗೊಳ್ಳಲಿರುವ ಕ್ಷೇತ್ರಗಳು: ಉಸ್ತುವಾರಿ- ರಾಮು ವಿ. ನಾಯ್ಕರ್‌- ಚಿಕ್ಕೋಡಿ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು. ಉಸ್ತುವಾರಿ- ಪಿ.ತಿಪ್ಪೇಸ್ವಾಮಿ- ತುಮಕೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಾಮರಾಜನಗರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ.

ತಂಡ- 2
ಕೆ.ಎಸ್‌.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಪ್ರಮುಖರು:
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಶಾಸಕ ರಘುನಾಥರಾವ್‌ ಮಲ್ಕಾಪುರೆ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು, ಮಾಜಿ ಶಾಸಕ ಎನ್‌.ಶಂಕ್ರಪ್ಪ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ನಾಯ್ಡು ಇತರರು. ಪ್ರವಾಸ ಕೈಗೊಳ್ಳಲಿರುವ ಕ್ಷೇತ್ರಗಳು: ಉಸ್ತುವಾರಿ- ಬೇಲೂರು ಲಕ್ಷ್ಮಣ- ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ. ಉಸ್ತುವಾರಿ- ವರ್ತೂರು ಶ್ರೀಧರ್‌- ದಾವಣಗೆರೆ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಉತ್ತರ.

ಟಾಪ್ ನ್ಯೂಸ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.