ಮೆಟ್ರೋ ಮಾರ್ಗದಲ್ಲಿ ಟೌನ್‌ಶಿಫ್ಗೆ ಚಿಂತನೆ
Team Udayavani, Jun 14, 2017, 12:43 PM IST
ವಿಧಾನಸಭೆ: ಮೆಟ್ರೋ ಮಾರ್ಗ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಲಭ್ಯವಿರುವ ಭೂಮಿಯ ಆಧಾರದ ಮೇಲೆ ಟೌನ್‌ಶಿಫ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೆಟ್ರೋ ಮಾರ್ಗದಲ್ಲಿ ಸರ್ಕಾರದ ಜಾಗ ಇರುವ ಕಡೆ ಟೌನ್‌ಶಿಫ್ ನಿರ್ಮಿಸಿ ನಗರದಲ್ಲಿನ ವಸತಿ ಬೇಡಿಕೆ ತಗ್ಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.
ಒತ್ತುವರಿಯಾಗಿರುವ ಸರ್ಕಾರಿ ಭೂಮಿ ತೆರವುಗೊಳಿಸಿದ್ದು, ಆ ಜಮೀನಿನಲ್ಲೂ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಸಂಕೀರ್ಣ ನಿರ್ಮಿಸುವ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಬಿಡಿಎ ವತಿಯಿಂದ ನಿರ್ಮಿಸಿರುವ ವಸತಿ ಸಂಕೀರ್ಣಗಳಿಗೆ ಬೇಡಿಕೆ ಇದೆ. ಆದರೆ, ನೋಟು ಅಮಾನ್ಯದಿಂದಾಗಿ ಇತ್ತೀಚೆಗೆ ಅರ್ಜಿ ಹಾಕುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ, ಬಿಡಿಎ ನಿರ್ಮಿಸಿರುವ ವಸತಿ ಸಂಕೀರ್ಣದ ಪ್ಲ್ರಾಟ್‌ಗಳನ್ನು ಲಾಭರಹಿತ ದರದಲ್ಲಿ ನೀಡಲಾಗುತ್ತಿದೆ ಎಂದು ಹೇಳಿದರು.
ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅರ್ಜಿದಾರರಿಗೆ ಒಂದು ಕೊಠಡಿಯ ಪ್ಲ್ರಾಟ್‌ಗಳಿಗೆ ನಿಗದಿಪಡಿಸಲಾದ ದರಗಳಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಜಿದಾರರಿಗೆ ಶೇ.44ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಒಂದು ಕೊಠಡಿಯ ಪ್ಲ್ರಾಟ್ ಒಂದನ್ನು ಸಾಮಾನ್ಯ ವರ್ಗದವರಿಗೆ 12 ಲಕ್ಷ ರೂ., ಆರ್ಥಿಕವಾಗಿ ಹಿಂದುಳಿದವರ್ಗಗಳಿಗೆ 9 ಲಕ್ಷ ರೂ., ಎಸ್‌ಸಿ-ಎಸ್‌ಟಿ ವರ್ಗದವರಿಗೆ 6.7 ಲಕ್ಷ ರೂ.ಗಳಿಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.
ಬಿಡಿಎ ವತಿಯಿಂದ ವಿವಿಧೆಡೆ ನಿರ್ಮಿಸಿರುವ 3512 ಪ್ಲ್ರಾಟ್ ಹಾಗೂ ವಿಲ್ಲಾಗಳ ಹಂಚಿಕೆಗೆ ಅರ್ಜಿ ಕರೆಯಲಾಗಿದ್ದು, 839 ಅರ್ಜಿ ಸಲ್ಲಿಕೆಯಾಗಿವೆ. ಅಲ್ಲದೆ, ಪ್ರಾಧಿಕಾರದ ವತಿಯಿಂದ ವಿವಿಧ ಸ್ಥಳಗಳಲ್ಲಿ ವಿವಿಧ ಮಾದರಿಯ 7809 ಪ್ಲಾಟ್‌ಗಳು/ವಿಲ್ಲಾಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಈಗಾಗಲೇ ವಿವಿಧ ಅಳತೆಯ 5000 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗಿದೆ. ಇನ್ನೂ 5000 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಶಿವಲಿಂಗೇಗೌಡ, ಬೆಂಗಳೂರಿಗೆ ರಾಜ್ಯದ ವಿವಿಧ ಭಾಗಗಳಿಂದ ಬಡವರು ಉದ್ಯೋಗ ಅರಸಿ ಬಂದು ನೆಲೆಸುತ್ತಿದ್ದಾರೆ. ಆದರೆ, ಅವರು ಜೀವನವಿಡೀ ಬಾಡಿಗೆ ಕಟ್ಟುತ್ತಲೇ ಇರುತ್ತಾರೆ. ಅಂತವರಿಗೆ ಕೈಗೆಟಕುವ ದರದಲ್ಲಿ ವಸತಿ ಸಂಕೀರ್ಣ ನಿರ್ಮಿಸಿ ಕೊಡಿ ಎಂದು ಮನವಿ ಮಾಡಿದರು.
ಮೆಟ್ರೋಗೆ ಶೀಘ್ರ ಹೆಚ್ಚುವರಿ ಬೋಗಿ ಅಳವಡಿಕೆ
ವಿಧಾನಸಭೆ: ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಮನಿಸಿ ಒತ್ತಡ ತಗ್ಗಿಸಲು ಹೆಚ್ಚುವರಿ ಬೋಗಿ ಅಳವಡಿಕೆ ಮಾಡಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್‌ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಈಗಾಗಲೇ ಬೆಮೆಲ್ ಸಂಸ್ಥೆಗೆ ಬೋಗಿ ಪೂರೈಕೆಗೆ 1400 ಕೋಟಿ ರೂ. ಪಾವತಿಸಿದ್ದು ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಬೋಗಿ ಪೂರೈಕೆಯಾಗಲಿದೆ,’ ಎಂದು ಹೇಳಿದರು.
“ಪ್ರಸ್ತುತ 6 ನಿಮಿಷಕ್ಕೊಂದು ಹಾಗೂ ಒತ್ತಡದ ಸಂದರ್ಭದಲ್ಲಿ 3 ನಿಮಿಷಕ್ಕೊಂದು ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು 2 ನಿಮಿಷಕ್ಕೆ ಇಳಿಸಬೇಕೆಂಬ ಬೇಡಿಕೆ ಇದೆ. ಆದರೆ, ಪ್ರಯಾಣಿಕರ ಸಂಖ್ಯೆ ಗಮನಿಸಿ ಆ ಬಗ್ಗೆ ಕ್ರಮ ಕೈಗೊಳ್ಳಲಾಗವುದು,’ ಎಂದು ತಿಳಿಸಿದರು.
ದೆಹಲಿ ಮೆಟ್ರೋದಲ್ಲಿ ದರ ಕಡಿಮೆ ಇರುವ ಬಗ್ಗೆ ಸುರೇಶ್‌ಕುಮಾರ್ ಪ್ರಸ್ತಾಪಿಸಿದಾಗ, “ಆ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಶೀಲಿಸಲಾಗುವುದು. ಆದರೆ, ಮೆಟ್ರೋ ಯೋಜನೆಗಾಗಿ ನಾವು ಖಾಸಗಿ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದೇವೆ. ಹೀಗಾಗಿ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪ್ರಯಾಣಿಕರಿಗೂ ಹೊರೆಯಾಗದಂತೆ ದರ ನಿಗದಿಪಡಿಸಲಾಗಿದೆ,’ ಎಂದು ಹೇಳಿದರು.
ಮೆಟ್ರೋ ನಿಲ್ದಾಣಗಳಲ್ಲಿ ಕೆಲವೆಡೆ ನೀರು ಜಿನುಗುತ್ತಿರುವ ಪ್ರಕರಣಗಳ ಬಗ್ಗೆಯೂ ಗಮನ ಹರಿಸಲಾಗಿದ್ದು ಅದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.