ವರ್ತಕರು, ರೈತರಿಂದ ಹೆದ್ದಾರಿ ತಡೆದು ಧರಣಿ
Team Udayavani, Aug 19, 2017, 11:14 AM IST
ಬೆಂಗಳೂರು: ಯಶವಂತಪುರ ಎಪಿಎಂಸಿ ಮಾರುಕಟ್ಟೆ ಈರುಳ್ಳಿ ಮತ್ತು ಆಲೂಗಡ್ಡೆ ವರ್ತಕರು ಸೇರಿದಂತೆ ಇತರೆ ಎಲ್ಲ ವರ್ತಕರೂ ಕೂಡಲೇ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರಗೊಳ್ಳಬೇಕು ಎಂಬ ಎಪಿಎಂಸಿ ನೋಟಿಸ್ ಖಂಡಿಸಿ ರೈತರು, ವರ್ತಕರು ಶುಕ್ರವಾರ ಮಧ್ಯಾಹ್ನ ಯಶವಂತಪುರ ಎಪಿಎಂಸಿ ಸಮೀಪ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ದಾಸನಪುರ ಉಪ ಮಾರುಕಟ್ಟೆಯಲ್ಲಿ ಮೊದಲ ಹಂತದಲ್ಲಿ ಕೇವಲ 83 ವರ್ತಕರಿಗೆ ಮಳಿಗೆ ನೀಡಲಾಗಿದೆ. ಜತೆಗೆ ಹರಾಜು ಪ್ರಕ್ರಿಯೆಯಲ್ಲಿ ಕೆಲವು ಮಳಿಗೆಗಳನ್ನು ಹರಾಜು ಮಾಡಲಾಗಿದೆ. ಅದರಲ್ಲೂ ಕೂಡ ಪಾರದರ್ಶಕತೆ ಕಾಪಾಡಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಎಪಿಎಂಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
83 ವರ್ತಕರಿಗೆ ಬುಧವಾರ ನೋಟಿಸ್ ಕೊಟ್ಟಿದ್ದು, ದಾಸನಪುರ ಉಪ ಮಾರುಕಟ್ಟೆಯಲ್ಲಿ ಆ.18ರಿಂದ ವಹಿವಾಟು ನಡೆಸುವಂತೆ ಸೂಚಿಸಿದ್ದರು.ನಂತರ ಯಶವಂತಪುರ ಮುಖ್ಯಮಾರುಕಟ್ಟೆಯಲ್ಲಿ ಮೊದಲ ಮಹಡಿಯಲ್ಲಿ ವಹಿವಾಟು ನಡೆಸಲು ಪರವಾನಗಿ ಪಡೆದ ಇತರ ಉತ್ಪನ್ನಗಳ ವರ್ತಕರಿಗೂ ಕೂಡ ದಾಸನಪುರ ಮಾರುಕಟ್ಟೆಗೆ ಹೋಗುವಂತೆ ನೋಟಿಸ್ ನೀಡಿದ್ದಾರೆ.
ಮೊದಲ ಮಹಡಿ ವರ್ತಕರ ಪರವಾನಗಿ ಅವಧಿ 2018ರ ಮಾರ್ಚ್ 31ರವರೆಗೆ ಇದೆ. ಎಪಿಎಂಸಿಯ ಫುಟ್‌ಪಾತ್‌ನಲ್ಲಿ ಬಂದು ವ್ಯಾಪಾರ ನಡೆಸುತ್ತಿದ್ದು, ಸಂಚಾರ ದಟ್ಟಣೆ ಆಗುತ್ತದೆ ಎಂಬ ಒಂದೇ ಕಾರಣ ಇಟ್ಟುಕೊಂಡು ಸ್ಥಳಾಂತರಕ್ಕೆ ಎಪಿಎಂಸಿ ಮುಂದಾಗಿದೆ. ಇದಕ್ಕೂ ಮೊದಲು ಯಾವುದೇ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ವರ್ತಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಮೂಲಸೌಕರ್ಯವಿಲ್ಲ
ಯಾವುದೇ ವರ್ತಕನು ದಾಸನಪುರ ಉಪಮಾರುಕಟ್ಟೆಗೆ ಹೋಗಲು ವಿರೋಧ ವ್ಯಕ್ತಪಡಿಸುತ್ತಿಲ್ಲ. ಅವರೇ ಇಚ್ಛೆಪಟ್ಟು ಅಲ್ಲಿ ಮಳಿಗೆ ಪಡೆದಿದ್ದಾರೆ. ಆದರೆ, ಉಪ ಮಾರುಕಟ್ಟೆಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ದೀಪಗಳು, ರೈತರು, ವರ್ತಕರು ಮತ್ತು ಕೂಲಿಕಾರ್ಮಿಕರು ಉಳಿದುಕೊಳ್ಳಲು ಕೊಠಡಿ ವ್ಯವಸ್ಥೆ ಹೀಗೆ ಯಾವುದೇ ಮೂಲಸೌಕರ್ಯವಿಲ್ಲ ಎಂದು ವರ್ತಕರು ದೂರಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಗೋಪಾಲಯ್ಯ, ಈರುಳ್ಳಿ ಮತ್ತು ಆಲೂಗಡ್ಡೆ ವರ್ತಕರ ಸಂಘದ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ಬಿ.ಎಂ.ಎಲ್.ನಾಗರಾಜ್, ಕಾರ್ಯದರ್ಶಿ ಉದಯಶಂಕರ್, ಜಂಟಿ ಕಾರ್ಯದರ್ಶಿ ಎಚ್.ಆರ್.ಅಶೋಕ್, ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಿಬಿಎಂಪಿ ಸದಸ್ಯ ಮಹದೇವ ಸೇರಿದಂತೆ ಈರುಳ್ಳಿ ಮತ್ತು ಆಲೂಗಡ್ಡೆ ವರ್ತಕರು, ರೈತರು ಪಾಲ್ಗೊಂಡಿದ್ದರು.
ಬಂದ್ ನಿರ್ಧಾರ ವಾಪಸ್
ಪ್ರತಿಭಟನಾಕಾರರ ಬೇಡಿಕೆಗೆ ಎಪಿಎಂಸಿ ಅಧ್ಯಕ್ಷರು ಸ್ಪಂದಿಸಲಿಲ್ಲ. ಇದರಿಂದ ಆಕ್ರೋಶಗೊಂಡ ವರ್ತಕರು, ಆ.19ರಂದು ಮಾರುಕಟ್ಟೆ ಬಂದ್ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಕೈಗೊಂಡರು. ಆದರೆ, ಶುಕ್ರವಾರ ಸಂಜೆ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು, ಈರುಳ್ಳಿ ಮತ್ತು ಆಲೂಗಡ್ಡೆ ವರ್ತಕರ ಸಂಘದ ಮುಖಂಡರೊಂದಿಗೆ ಮಾತನಾಡಿದ್ದು, ವಾರದೊಳಗೆ ಸಮಸ್ಯೆ ಕುರಿತು ಚರ್ಚಿಸಿ ಪರಿಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬಂದ್ ನಿರ್ಧಾರವನ್ನು ಸಂಘ ವಾಪಸ್ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.