ಮೈಸೂರು ರಸ್ತೆ ಸುತ್ತ ತೀವ್ರ ಸಂಚಾರ ದಟ್ಟಣೆ
Team Udayavani, Jan 4, 2019, 6:41 AM IST
ಬೆಂಗಳೂರು: ಬಿಬಿಎಂಪಿ ವತಿಯಿಂದ ಮರು ಡಾಂಬರೀಕರಣ ಕಾಮಗಾರಿಗಾಗಿ ಮೈಸೂರು ರಸ್ತೆ (ಸಿರ್ಸಿ ವೃತ್ತ) ಮೇಲ್ಸೇತುವೆಯ ಒಂದು ಮಾರ್ಗದಲ್ಲಿ ಸಂಚಾರ ನಿಷೇಧಿಸಿರುವ ಪರಿಣಾಮ, ಕೇಂದ್ರ ಭಾಗದ ಪ್ರಮುಖ ರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಟೌನ್ಹಾಲ್, ಜೆ.ಸಿ.ರಸ್ತೆ, ಕಾರ್ಪೊರೇಷನ್, ವಿಠಲ ಮಲ್ಯ ರಸ್ತೆ, ಕೆ.ಆರ್.ಮಾರುಕಟ್ಟೆ, ಕೆ.ಜಿ.ರಸ್ತೆ, ಚಾಮರಾಜಪೇಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ತೀವ್ರವಾಗಿದೆ. ಪ್ರಮುಖವಾಗಿ ಬೆಳಗ್ಗೆ ಹಾಗೂ ಸಂಜೆ ವೇಳೆ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಕಾರ್ಪೊರೇಷನ್ನಿಂದ ಮೈಸೂರು ರಸ್ತೆ ತಲುಪಲು ಕನಿಷ್ಠ 30 ನಿಮಿಷ ತಗುಲುತ್ತಿದೆ. ಸಂಚಾರ ಪೊಲೀಸರು ಪರ್ಯಾಯ ರಸ್ತೆಗಳನ್ನು ಸೂಚಿಸಿದ ರಸ್ತೆಗಳಲ್ಲೂ ದಟ್ಟಣೆ ಇರುವ ಕಾರಣ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ.
ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆಯ ಒಂದು ಮಾರ್ಗ ಬಂದ್ ಮಾಡಿದ್ದು, ಉಳಿದ ಒಂದು ಮಾರ್ಗದಲ್ಲಿ, ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆವರೆಗೆ ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳಿಗೆ ಮತ್ತು ಮಧ್ಯಾಹ್ನ 3ರಿಂದ ರಾತ್ರಿ 10ರವರೆಗೆ ಟೌನ್ಹಾಲ್ನತ್ತ ಸಂಚರಿಸುವ ವಾಹನಗಳಿಗೆ ಅವಕಾಶ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್ನಲ್ಲಿ ಗಗನದೂಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.