ಸಂಚಾರ ಪೊಲೀಸರ ಮೇಲೆ ಹಲ್ಲೆ: ಇಬ್ಬರ ಸೆರೆ
Team Udayavani, May 6, 2019, 3:05 AM IST
ಬೆಂಗಳೂರು: ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಇಬ್ಬರು ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಇಬ್ಬರು ಯುವಕರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಆದಿತ್ಯಾ ಶ್ರುತ್ರಿಯ(24) ಮತ್ತು ಹರಿಯಾಣ ಮೂಲದ ರಾಹುಲ್ ತ್ರಿಪಾಠಿ(22) ಬಂಧಿತರು. ಆರೋಪಿಗಳ ಹಲ್ಲೆಯಿಂದ ಎಚ್‌ಎಸ್‌ಆರ್ ಲೇಔಟ್ ಸಂಚಾರ ಠಾಣೆಯ ಸಿಬ್ಬಂದಿ ಅಶೋಕ್ ಮತ್ತು ನಂಜೇಗೌಡ ಎಂಬುವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಇಂಟರ್ನರ್‌ಶಿಪ್ ಪಡೆಯಲು ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಇಬ್ಬರು ಆರೋಪಿಗಳು ಮಾರತಹಳ್ಳಿಯ ಪಿಜಿಯಲ್ಲಿ ವಾಸವಾಗಿದ್ದಾರೆ ಎಂದು ಪೊಲೀಸರು ಹೇಳಿದರು.
ಹಲ್ಲೆಗೊಳಗಾದ ಸಿಬ್ಬಂದಿ ಮೇ 3ರಂದು ತಡರಾತ್ರಿ ಒಂದು ಗಂಟೆ ಸುಮಾರಿಗೆ ಎಎಸ್‌ಐ ನಾರಾಯಣಪ್ಪ ಅವರ ಜತೆ ಠಾಣೆ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದರು.
ಇದೇ ವೇಳೆ ರಾಯಲ್ ಎನ್‌ಫೀಲ್ಡ್ ಬುಲೆಟ್‌ನಲ್ಲಿ ವೇಗವಾಗಿ ಬರುತ್ತಿದ್ದ ಆರೋಪಿಗಳನ್ನು ತಡೆದ ಸಂಚಾರ ಪೊಲೀಸರು, ಚಾಲನಾ ಪರವಾನಿಗೆ ಹಾಗೂ ಇತರೆ ದಾಖಲೆಗಳನ್ನು ಕೇಳಿದ್ದಾರೆ. ಅಲ್ಲದೆ, ಮದ್ಯ ಸೇವಿಸಿರುವ ಬಗ್ಗೆ ಪರೀಕ್ಷಿಸಿದಾಗ ಇಬ್ಬರು ಕಂಠಪೂರ್ತಿ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಬುಲೆಟ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಎಎಸ್‌ಐ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹೆಲ್ಮೆಟ್‌ನಿಂದ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಜತೆಗೆ ಅಲ್ಲೇ ಇದ್ದ ಮರದ ಕೋಲಿನಿಂದಲೂ ಹೊಡೆದಿದ್ದಾರೆ.
ಕೂಡಲೇ ಪೊಲೀಸರ ನೆರವಿಗೆ ಧಾವಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿದು ಥಳಿಸಿ, ಠಾಣೆಗೆ ಕರೆದೊಯ್ದಿದ್ದಾರೆ. ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಠಾಣೆ ಪಿಠೋಪಕರಣಗಳು ಧ್ವಂಸ: ಠಾಣೆಯಲ್ಲಿ ಪೂರ್ವಪರ ವಿಚಾರ ಮಾಡುವಾಗ ಕುಪಿತಗೊಂಡು ಆರೋಪಿಗಳು, ಠಾಣೆಯಲ್ಲಿದ್ದ ಪಿಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಕಂಪ್ಯೂಟರ್‌ಗೆ ಅಳವಡಿಸಿದ್ದ ವೈಯರ್‌ಗಳನ್ನು ಕಿತ್ತುಹಾಕಿ ಅನುಚಿತ ವರ್ತನೆ ತೋರಿದ್ದಾರೆ. ಇದನ್ನು ಪ್ರಶ್ನಿಸಿದ ಠಾಣಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಸಂಚಾರ ಪೊಲೀಸ್ ಸಿಬ್ಬಂದಿ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಸಾರ್ವಜನಿಕ ಆಸ್ತಿ ನಾಶ, ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.