ಸಂಚಾರ ಪೊಲೀಸರಿಂದ ದೌರ್ಜನ್ಯ
Team Udayavani, Aug 21, 2018, 12:01 PM IST
ಬೆಂಗಳೂರು: ಹಿಂಬದಿ ಸವಾರನೊಬ್ಬ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರು ಆತನ ಶರ್ಟ್ ಕಾಲರ್ ಹಿಡಿದು ನಡು ರಸ್ತೆಯಲ್ಲೇ ಎಳೆದಾಡಿರುವ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ.
ಜೆ.ಪಿ.ನಗರದ 14ನೇ ಬ್ಲಾಕ್‌ನಲ್ಲಿ ಇಬ್ಬರು ಯುವಕರು ಬೈಕ್ ಸವಾರಿ ಮಾಡುತ್ತಿದ್ದು, ಹಿಂಬದಿ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಇಬ್ಬರು ಸಂಚಾರ ಪೊಲೀಸರು ದ್ವಿಚಕ್ರ ವಾಹನವನ್ನು ಅಡ್ಡ ಹಾಕಿ ನಿಲ್ಲಿಸಿದ್ದರೆ. ಬಳಿಕ ಹೆಲ್ಮೆಟ್ ಧರಿಸದೇ ಇರುವುದಕ್ಕೆ ದಂಡ ವಿಧಿಸುವ ಬದಲಿಗೆ ಹಿಂಬದಿ ಸವಾರನ ಕೊರಳ ಪಟ್ಟಿ ಹಿಡಿದು ನಡು ರಸ್ತೆಯಲ್ಲಿ ಎಳೆದಾಡಿದ್ದಾರೆ. ಇದನ್ನು ಪ್ರಶ್ನಿಸಿದ ಮತ್ತೂಬ್ಬನ ಯುವಕ ಮೇಲೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಇದನ್ನು ಕಂಡ ಕೆಲ ಸ್ಥಳೀಯರು ಸಂಚಾರ ಪೊಲೀಸ್ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡಿದ್ದಾರೆ. “ಸಂಚಾರ ನಿಯಮ ಉಲ್ಲಂ ಸಿದರೆ ದಂಡ ವಿಧಿಸಲು ಮಾತ್ರ ನಿಮಗೆ ಅಧಿಕಾರವಿದೆ. ಸವಾರನ ಮೇಲೆ ಹಲ್ಲೆ ನಡೆಸುವಂತಿಲ್ಲ,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಸಿಬ್ಬಂದಿಯ ದೌರ್ಜನ್ಯದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಈ ವಿಡಿಯೋವನ್ನು ಬೆಂಗಳೂರು ಸಂಚಾರ ಪೊಲೀಸರ ಫೇಸ್‌ಬುಕ್ ಖಾತೆಗೆ ಟ್ಯಾಗ್ ಮಾಡಿ ಆ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.