ಮದುವೆ ಮಾಡು ಟ್ರಾಫಿಕ್ ನೋಡು!


Team Udayavani, Nov 30, 2019, 11:30 AM IST

bng-tdy-2

ಬೆಂಗಳೂರು: ಮದುವೆ ಸೀಸನ್‌ ಬಂದರೆ ನಗರದ ಬಹುತೇಕ ಕಲ್ಯಾಣ ಮಂಟಪಗಳು ಭರ್ತಿ ಆಗುತ್ತವೆ. ಅವುಗಳನ್ನುಸಂಪರ್ಕಿಸುವ ರಸ್ತೆಗಳು ಸಹ ವಾಹನಗಳಿಂದ ತುಂಬಿ ತುಳುಕುತ್ತವೆ. ಇದರಿಂದಾಗಿ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತದೆ.

ಇದಕ್ಕೆ ಕಾರಣ ಕಲ್ಯಾಣ ಮಂಟಪಗಳಲ್ಲಿ ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆ ಇಲ್ಲದಿರುವುದು. ಇದು ಒಂದೆರಡು ದಿನಗಳ ಸಮಸ್ಯೆಯಲ್ಲ. ಪ್ರತಿ ವರ್ಷ ಮದುವೆ ಸಂದರ್ಭದಲ್ಲಿ ಇಂತಹ ಸಮಸ್ಯೆ ಸಾಮಾನ್ಯ. ಗಣ್ಯರು, ರಾಜಕೀಯ ಮುಖಂಡರ ಮದುವೆ ಕಾರ್ಯಕ್ರಮಗಳಲ್ಲಿ ಈ ಸಮಸ್ಯೆ ದುಪ್ಪಟ್ಟಾಗುತ್ತದೆ. ಕಲ್ಯಾಣ ಮಂಟಪ, ಪಾರ್ಟಿಹಾಲ್‌ಗ‌ಳಿರುವ ರಸ್ತೆಗಳಲ್ಲಿ ಪೀಕ್‌ ಅವರ್‌ ಮಾತ್ರವಲ್ಲ ನಾನ್‌ ಪೀಕ್‌ ಅವರ್‌ನಲ್ಲೂ ವಾಹನಗಳ ಓಡಾಟ ದುಸ್ತರವಾಗಿರುತ್ತದೆ.

ಪಾರ್ಕಿಂಗ್‌ ವ್ಯವಸ್ಥೆಯೇ ಇಲ್ಲ: ನಗರದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಕಲ್ಯಾಣ ಮಂಟಪಗಳಿವೆ. ಮದುವೆ ಸಮಾರಂಭದಲ್ಲಿ ಸಾಮಾನ್ಯವಾಗಿ ಸ್ನೇಹಿತರು, ಸಂಬಂಧಿಕರು ಸೇರಿ ಕನಿಷ್ಠ ಒಂದೂವರೆಯಿಂದ ಎರಡು ಸಾವಿರ ಜನ ಸೇರುತ್ತಾರೆ. ಈ ಪೈಕಿ ಶೇ.70ರಿಂದ ಶೇ.80 ಮಂದಿ ದ್ವಿಚಕ್ರಅಥವಾ ಕಾರುಗಳ ಮೂಲಕವೇ ಆಗಮಿಸುತ್ತಾರೆ. ಆದರೆ, ವೆಡ್ಡಿಂಗ್‌ ಹಾಲ್‌ ಆವರಣದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಕಾರಣ ಅಷ್ಟೂ ವಾಹನಗಳು ಸುತ್ತಲಿನ ರಸ್ತೆಗಳ ಬದಿಯಲ್ಲಿ ನಿಲ್ಲಿತ್ತವೆ. ಈ ವೇಳೆ ವಾಹನಗಳ ಸಂಚಾರಕ್ಕೆ ಇರುವ ಸ್ಥಳಾವಕಾಶ ಕಡಿಮೆಯಾಗಿ ಸಂಚಾರ ದಟ್ಟಣೆ.

ಬಿಬಿಎಂಪಿ ನಿರ್ಲಕ್ಷ್ಯ: ನಿಯಮದ ಪ್ರಕಾರ ನಗರದಲ್ಲಿ ಶಾಪಿಂಗ್‌ ಮಾಲ್‌, ಕಲ್ಯಾಣ ಮಂಟಪ, ಸಿನಿಮಾ ಮಂದಿರ ಸೇರಿ ಇತರೆ ಯಾವುದೇ ಕಟ್ಟಡ ನಿರ್ಮಾಣ ಮಾಡಲು ಬಿಬಿಎಂಪಿ ಹಾಗೂ ಸಂಬಂಧಿಸಿದ ಇಲಾಖೆಗಳ ಅನುಮತಿ ಕಡ್ಡಾಯ. ಈ ವೇಳೆಯೇ ಅಧಿಕಾರಿಗಳು ವಾಣಿಜ್ಯ ಉದ್ದೇಶಕ್ಕೆ ಬಳಸುವ ಕಟ್ಟಡಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆಯೇ? ಇಲ್ಲವೇ? ಎಂದು ಪರಿಶೀಲಿಸಿ ಪ್ರಮಾಣ ಪತ್ರ ವಿತರಿಸಬೇಕು. ಆದರೆ, ನಗರದ ಶೇ.80ರಷ್ಟು ಕಲ್ಯಾಣ ಮಂಟಪಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆಯೇ ಇಲ್ಲ. ಅಕ್ರಮವಾಗಿ ಅನುಮತಿ ನೀಡಲಾಗಿದೆ. ಅದರ ಪರಿಣಾಮ ಸಂಚಾರ ದಟ್ಟಣೆ ಎದುರಿಸಬೇಕಿದೆ. ಈ ಬಗ್ಗೆ ಯಾರನ್ನು ಹೊಣೆ ಮಾಡಬೇಕು ಎನ್ನುತ್ತಾರೆ ಸಂಚಾರ ಪೊಲೀಸರು.

ರಸ್ತೆ ಕಿರಿದು, ದಟ್ಟಣೆ ಜಾಸ್ತಿ: ವೆಸ್ಟ್‌ಆಫ್ ಕಾರ್ಡ್‌ ರಸ್ತೆಯ ಸರ್ವೀಸ್‌ ರಸ್ತೆ, ಹೆಸರುಘಟ್ಟ ರಸ್ತೆ ಮತ್ತು ಕೋರಮಂಗಲ ರಸ್ತೆ ಹಾಗೂ ನಗರ ಇತರೆಡೆ ಐದಾರು ಕಿ.ಮೀ ವ್ಯಾಪ್ತಿಯಲ್ಲಿ ಹತ್ತಾರುಕಲ್ಯಾಣ ಮಂಟಪಗಳಿವೆ. ಆದರೆ ಬಹುತೇಕ ಕಡೆ ಪಾರ್ಕಿಂಗ್‌ ವ್ಯವಸ್ಥೆಯೇ ಇಲ್ಲ. ಮದುವೆ ಕಾರ್ಯಕ್ರಮ ನಡೆಯುವಾಗ ಕಿರಿದಾದ ರಸ್ತೆಗಳ ಬದಿಯಲ್ಲೇ ವಾಹನ ನಿಲುಗಡೆ ಮಾಡುತ್ತಾರೆ. ಹೀಗಾಗಿ ಈ ಭಾಗದ ರಸ್ತೆಗಳಲ್ಲಿ ನಿರೀಕ್ಷೆಗೂ ಮೀರಿದ ಸಂಚಾರ ದಟ್ಟಣೆ ಉಂಟಾಗುತ್ತದೆ. ಇನ್ನು ನಗರದ ಕೆಲ ಮುಖ್ಯರಸ್ತೆಗಳಲ್ಲಿರುವ ಕಲ್ಯಾಣ ಮಂಟಪಗಳ ಸುತ್ತಲೂ ಇದೇ ಸಮಸ್ಯೆ ಇದೆ ಎನ್ನುತ್ತಾರೆ ಸಂಚಾರ ಪೊಲೀಸರು.

ನೋಟಿಸ್‌ ಜಾರಿ: ಕಲ್ಯಾಣ ಮಂಟಪಗಳಲ್ಲಿ ವಾಹನ ಪಾರ್ಕಿಂಗ್‌ ಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಕಟ್ಟುನಿಟ್ಟಿನ ಆದೇಶ ಹೊರಡಿಸುವಂತೆ ಬಿಬಿಎಂಪಿಯನ್ನು ಕೋರಲಾಗಿದೆ. ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಳ್ಳದ ಕಲ್ಯಾಣ ಮಂಟಪಗಳಿಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ. ಈ ಮಧ್ಯೆ ಕಲ್ಯಾಣ ಮಂಟಪಗಳ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿ, ಸಭೆ ಕೂಡ ನಡೆಸಿದ್ದೇವೆ. ಈ ವೇಳೆ ತಾವೇ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಕೆಲ ಕಲ್ಯಾಣ ಮಂಟಪ ಮಾಲೀಕರು ಪರ್ಯಾಯ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಂಡಿದ್ದು, ಭದ್ರತಾ ಸಿಬ್ಬಂದಿ ನಿಯೋಜಿಸಿಕೊಂಡಿದ್ದಾರೆ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಪಾರ್ಕಿಂಗ್‌ ಪಾಲಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾರ್ಕಿಂಗ್‌ ನೀತಿ (ಪಾಲಿಸಿ) ಜಾರಿಗೆ ತರಲು ಮನವಿ ಮಾಡಲಾಗಿದ್ದು, ಈ ಕುರಿತು ಸರ್ಕಾರ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ. ಈ ನೀತಿ ಜಾರಿಯಾದರೆ ಕಲ್ಯಾಣ ಮಂಟಪಗಳು ಮಾತ್ರವಲ್ಲ. ವಾಣಿಜ್ಯ ಕಟ್ಟಡಗಳ ಮಾಲೀಕರೂ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಟ್ಟಡ ಮಾಲೀಕರಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಚಿಸಬೇಕಿದೆ. ಇದೇ ವೇಳೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತೂ ನೀತಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಸಿಬಿಡಿಯಲ್ಲೂ ಪಾರ್ಕಿಂಗ್‌ ಸಮಸ್ಯೆ : ಇತ್ತೀಚೆಗಷ್ಟೇ ಸರ್ಕಾರದ ಸೂಚನೆ ಮೇರೆಗೆ ಸಂಚಾರ ಪೊಲೀಸರು ಹೈ-ಡೆನ್ಸಿಟಿ ಕಾರಿಡಾರ್‌ ಹಾಗೂ ಸಿಬಿಐಡಿ ಪ್ರದೇಶವನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. ಈ ಪ್ರದೇಶಗಳಲ್ಲಿರುವ ಕೆಲ ಕಲ್ಯಾಣ ಮಂಟಪಗಳಲ್ಲೂ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ಇದ್ದರೂ ಹೆಚ್ಚುವರಿ ವಾಹನಗಳು ಸಮೀಪದ ರಸ್ತೆಗಳಲ್ಲೇ ನಿಲ್ಲುತ್ತವೆ. ಉದಾಹರಣೆಗೆ ಅರಮನೆ ಮೈದಾನದಲ್ಲಿ ಹತ್ತಾರು ಕಲ್ಯಾಣ ಮಂಟಪಗಳಿವೆ. ಪಾರ್ಕಿಂಗ್‌ ವ್ಯವಸ್ಥೆಯೂ ಇದೆ. ಇಲ್ಲಿ ಗಣ್ಯರು. ಅತೀ ಗಣ್ಯರ ಮದುವೆಗಳು ನಡೆಯುತ್ತವೆ. ಹೀಗಾಗಿ ಕಾರುಗಳ ಸಂಖ್ಯೆ ಅಧಿಕವಾಗಿರುತ್ತದೆ. ಆದರೆ, ಈ ಮಾರ್ಗದ ರಸ್ತೆಗಳು ಕಿರಿದಾಗಿವೆ. ಮದುವೆ ಆರಂಭ ಮತ್ತು ಮುಕ್ತಾಯದ ಬಳಿಕ ಒಮ್ಮಲೇ ಹತ್ತಾರು ವಾಹನಗಳು ರಸ್ತೆಗಿಳಿಯುತ್ತವೆ. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ನಿರ್ವಹಣೆಯೇ ದೊಡ್ಡ ಸವಾಲಾಗಿದೆ ಎನ್ನುತ್ತಾರೆ ಸಂಚಾರ ಪೊಲೀಸರು.

 

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.