Bangalore: ಬೈಕ್‌ನ ಕನ್ನಡಿಗೆ ತಾಗಿದ ಸಾರಿಗೆ ಬಸ್: ಕೆಳಗೆ ಬಿದ್ದ ಸವಾರ, ಚಕ್ರ ಹರಿದು ಸಾವು
Team Udayavani, Feb 13, 2024, 11:08 AM IST
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕೆಎಸ್ ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿ ರುವ ಘಟನೆ ಯಶ ವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಸಂದ್ರ ನಿವಾಸಿ ರಾಜೇಂದ್ರ (54) ಮೃತ ಸವಾರ.
ಯಶವಂತಪುರ ಮೆಟ್ರೋ ರೈಲ್ದಾಣದ ಬಳಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ.
ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ, ಕಂಪನಿ ಕೆಲಸದ ನಿಮಿತ್ತ ಮೇಖ್ರಿ ವೃತ್ತದ ಜಿಎಸ್‌ಟಿ ಕಚೇರಿಗೆ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳು ತ್ತಿದ್ದರು. ಯಶವಂತಪುರ ಮೆಟ್ರೋ ರೈಲು ನಿಲ್ದಾಣದ ಕೆಳ ರಸ್ತೆಯಲ್ಲಿ ತೆರಳುವಾಗ ಎಡಭಾಗದಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ದ್ವಿಚಕ್ರ ವಾಹನದ ಕನ್ನಡಿಗೆ ತಾಕಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಾಜೇಂದ್ರ ರಸ್ತೆಗೆ ಬಿದ್ದಿದ್ದಾರೆ. ಆಗ ಬಸ್‌ನ ಎಡಭಾಗದ ಚಕ್ರ ಬಳಿ ಸಿಲುಕಿದ ರಾಜೇಂದ್ರ ನನ್ನು ಸುಮಾರು 25 ಅಡಿಗಳಷ್ಟು ಬಸ್ ಎಳೆದುಕೊಂಡು ಮುಂದೆ ಸಾಗಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿ ಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.
ಘಟನೆ ಸಂಬಂಧ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ್ದು, ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.