ರೈಲು ವಿಳಂಬ: ಮತ್ತೂಮ್ಮೆ ಪರೀಕ್ಷೆಗೆ ಅವಕಾಶ

Team Udayavani, Aug 6, 2018, 6:15 AM IST

train-delay.jpg

ಬೆಂಗಳೂರು: ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲು ವಿಳಂಬವಾಗಿದ್ದರಿಂದ ಸಶಸ್ತ್ರ ಮೀಸಲು ಪಡೆ ನೇಮಕಾತಿ
ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ರಾಜ್ಯ ಸರ್ಕಾರ ನೆರವಿಗೆ ಬಂದಿದ್ದು, ಮತ್ತೂಂದು ಅವಕಾಶ ಕಲ್ಪಿಸುವಂತೆ
ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರೈಲು ವಿಳಂಬದಿಂದ ನೂರಾರು ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಈ ವಿಚಾರದಲ್ಲಿ ಅಭ್ಯರ್ಥಿಗಳು ಆತಂಕ ಪಡಬೇಕಾಗಿಲ್ಲ. ಮತ್ತೂಮ್ಮೆ ಪರೀಕ್ಷೆ ಬರೆಯಲು ಅವಕಾಶ ಮತ್ತು ಶೀಘ್ರವೇ ಹೊಸ ದಿನಾಂಕ ಪ್ರಕಟಿಸಲು ನೇಮಕಾತಿ ಮತ್ತು ತರಬೇತಿ ವಿಭಾಗದ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದರು.

ನಡೆದಿದ್ದಿಷ್ಟು: ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ ನಡೆಯಬೇಕಿದ್ದ ಡಿಎಆರ್‌ಸಿ ಹುದ್ದೆಗಳ ಪರೀಕ್ಷೆಗೆ ಉತ್ತರ ಕರ್ನಾಟಕ ಭಾಗದ ಸುಮಾರು 1,500 ಉದ್ಯೋಗಾಕಾಂಕ್ಷಿಗಳು ಹಾಜರಾಗಲು ಶನಿವಾರ ರಾತ್ರಿ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಆದರೆ ರಾಣಿ ಚನ್ನಮ್ಮ ರೈಲು ಶನಿವಾರ ರಾತ್ರಿ 10:20 ಗಂಟೆಗೆ ಹುಬ್ಬಳ್ಳಿಗೆ ಬರುವ ಬದಲು ಭಾನುವಾರ ಬೆಳಗಿನ ಜಾವ 4:30 ಗಂಟೆಗೆ ಆಗಮಿಸಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಂತಾಯಿತು.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್‌ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಅಭ್ಯರ್ಥಿಗಳು ಅಳಲು ತೋಡಿಕೊಂಡರು. ಅವರನ್ನು ಸಮಾಧಾನಪಡಿಸಿದ ಹೊರಟ್ಟಿ, ತಕ್ಷಣ ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ಸಮಸ್ಯೆ ವಿವರಿಸಿದರು. ಕೂಡಲೇ ಸ್ಪಂದಿಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರೀಕ್ಷಾ ವಂಚಿತರಿಗೆ ಮತ್ತೂಮ್ಮೆ ಪರೀಕ್ಷೆಗೆ ಹಾಜರಾಗಲು ವ್ಯವಸ್ಥೆ ಮಾಡಿದ್ದೇವೆಂದು ಹೇಳಿದರು.ಮರು ಪರೀಕ್ಷೆ ಬಗ್ಗೆ ಎಡಿಜಿಪಿ ರಾಘವೇಂದ್ರ ಔರಾದಕರ ಪ್ರಕಟಣೆ ಹೊರಡಿಸಿದ್ದಾರೆ.

ಧಾರವಾಡದಲ್ಲಿ ಪ್ರತಿಭಟನೆ
ರೈಲು ನಿಗದಿತ ಸಮಯಕ್ಕೆ ಬಾರದ ಕಾರಣ ಧಾರವಾಡದಿಂದಲೂ ಪರೀಕ್ಷೆಗೆ ಬರಬೇಕಿದ್ದ ವಿದ್ಯಾರ್ಥಿಗಳಿಗೆ ಪರದಾಟ ಎದುರಾಯಿತು. ಭಾನುವಾರ ಬೆಳಗ್ಗೆ ಆಗಮಿಸಿದ ರೈಲನ್ನು ಕಂಡ ಪರೀಕ್ಷಾರ್ಥಿಗಳು ಆಕ್ರೋಶಗೊಂಡು ಪ್ರತಿಭಟನೆಗೆ
ಮುಂದಾದರು. ಪರಿಕ್ಷೆ ವಂಚಿತರಾಗಿದ್ದೇವೆಂಬ ಕಾರಣಕ್ಕೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರೈಲ್ವೆ ಅಧಿಕಾರಿಗಳ ವಿರುದಟಛಿ ಅಭ್ಯರ್ಥಿಗಳು ಹರಿಹಾಯ್ದರು. ವಿದ್ಯಾಗಿರಿ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ತಾಂತ್ರಿಕ ಕಾರಣಗಳಿಂದ ರೈಲು ವಿಳಂಬವಾಗಿದೆ. ಹೀಗಾಗಿ ಅಭ್ಯರ್ಥಿಗಳು ತಮ್ಮದಲ್ಲದ ಕಾರಣಕ್ಕೆ ಸಶಸOಉ ಮೀಸಲು ಪಡೆ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಬಾರದು.ಹೀಗಾಗಿ ಅವರಿಗೆ ಮತ್ತೂಮ್ಮೆ ಪರೀಕ್ಷೆ ಬರೆಯಲು ಅವಕಾಶನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. 
– ಎಚ್‌.ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ

ಅಭ್ಯರ್ಥಿಗಳಿಂದಲೇ 4 ಗಂಟೆ  ವಿಳಂಬ: ರಾಜೇಶ್‌ ಮೋಹನ್‌
ಹುಬ್ಬಳ್ಳಿ:
ತಾಂತ್ರಿಕ ಕಾರಣಗಳಿಂದಾಗಿ ರೈಲು ವಿಳಂಬವಾಯಿತು. ಆದರೆ, ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಅಡತಡೆ ಉಂಟು ಮಾಡದಿದ್ದರೆ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದಿತ್ತು. ಅಭ್ಯರ್ಥಿಗಳಿಂದಾಗಿಯೇ ರೈಲು ಸಂಚಾರ 4 ಗಂಟೆ ವಿಳಂಬವಾಯಿತು ಎಂದು ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಜೇಶ್‌ ಮೋಹನ್‌ ಹೇಳಿದರು.

ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪರೀಕ್ಷೆ ಮುಂದೂಡಬೇಕೆಂಬ ಉದ್ದೇಶದಿಂದಲೇ ಕೆಲ ಕಿಡಿಗೇಡಿಗಳು ರೈಲು ಸಂಚಾರಕ್ಕೆ ವಿಳಂಬ ಮಾಡಿದರು. ರೈಲು ಮುಂದಕ್ಕೆ ಸಾಗದಂತೆ ತುರ್ತು ನಿಲುಗಡೆ ಚೈನ್‌ ಜಗ್ಗಿ ಸಂಚಾರಕ್ಕೆ ಅಡ್ಡಿಪಡಿಸಿದರು. ಅಭ್ಯರ್ಥಿಗಳು ಸಹಕಾರ ನೀಡಿದ್ದರೆ ರಾಣಿ ಚನ್ನಮ್ಮ ರೈಲು ಬೆಳಗ್ಗೆ 8:30ಕ್ಕೆ ಬೆಂಗಳೂರಿಗೆ ತಲುಪಬಹುದಿತ್ತು. ಪ್ರತಿಭಟಕಾರರು 3 ಗಂಟೆ ಕಂಬಾರಗಣವಿಯಲ್ಲಿ ಟ್ರ್ಯಾಕ್‌ ಮೇಲೆ ಕುಳಿತು ರೈಲು ಸಂಚಾರ ತಡೆದರು. ಕೆಲ ಪ್ರತಿಭಟನಾಕಾರರು ಎಂಜಿನ್‌ಗೆ ಕಲ್ಲೆಸೆದು ಗಾಜು ಒಡೆದರು. ಅಲ್ಲದೆ, ಚಾಲನಾ ಕಾರ್ಯಕ್ಕೆ ತಡೆಯೊಡ್ಡಿದರು. ಇದರಿಂದ ರೈಲು ಸಂಚಾರ ವಿಳಂಬವಾಯಿತು. ಆದರೆ, ಮಾನವೀಯತೆ ದೃಷ್ಟಿಯಿಂದ ರೈಲು ಸಂಚಾರಕ್ಕೆ ತಡೆಯೊಡ್ಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರಲು ನಿರ್ಧರಿಸಲಾಗಿದೆ ಎಂದರು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.