ತಂಗುದಾಣದಲ್ಲಿ ವಿಮಾನ ನಿಲ್ದಾಣದ ಅನುಭವ!

ಬೆಳಗ್ಗೆ 4.45ಕ್ಕೆ ಹೊರಟ ರೈಲು | ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ವೇಳಾಪಟ್ಟಿ

Team Udayavani, Jan 5, 2021, 12:10 PM IST

ತಂಗುದಾಣದಲ್ಲಿ ವಿಮಾನ ನಿಲ್ದಾಣದ ಅನುಭವ!

ಬೆಂಗಳೂರು: ಹೆಸರಿಗೆ ಮಾತ್ರ ಅದು ರೈಲ್ವೆ ತಂಗುದಾಣ. ನೀವು ಒಳಹೊಕ್ಕರೆ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಅನುಭವ! ಸಾಮಾನ್ಯವಾಗಿ ಹಾಲ್ಟ್  ಸ್ಟೇಷನ್‌ ಗಳೆಂದರೆ ಒಂದು ಟಿಕೆಟ್‌ ಕೌಂಟರ್‌, ನಿಲುಗಡೆಗೊಂದು ಪ್ಲಾಟ್‌ಫಾರಂ ಇರುತ್ತದೆ. ಪ್ರಮುಖ ರೈಲುನಿಲ್ದಾಣವಾಗಿದ್ದರೆ, ಈ ಸೌಲಭ್ಯಗಳು ತುಸು ಹೆಚ್ಚಿರುತ್ತವೆ. ಆದರೆ, ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಲ್ಟ್ ಸ್ಟೇಷನ್‌ ನಿಮ್ಮ ಈ ಎಲ್ಲ ಕಲ್ಪನೆಗಳನ್ನು ತಲೆಕೆಳಗೆ ಮಾಡುತ್ತದೆ.

ಹೌದು, ಈ ನೂತನ ಹಾಲ್ಟ್ ಸ್ಟೇಷನ್‌ನಲ್ಲಿ ವಿಮಾನಗಳ ಹಾರಾಟದ ಬಗ್ಗೆ ನೇರಪ್ರಸಾರಫ‌ಲಕಗಳಲ್ಲಿ ನೇರ ಪ್ರಸಾರ ಆಗುತ್ತದೆ. ಹೈಟೆಕ್‌ಕೌಂಟರ್‌ಗಳು, ಸೆನ್ಸರ್‌ ಆಧಾರಿತ ವಾಷ್‌ರೂಂಗಳು, ಕಾಫಿ ಶಾಪ್‌, ರೈಲ್ವೆ ವೇಳಾಪಟ್ಟಿ, ಶೆಟಲ್‌ ಸೇವೆಗಳು, ಹೊರಾಂಗಣದಲ್ಲಿ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿ (ಇದನ್ನು ಮಾವಿನ ಕ್ರೇಟ್‌ ಹಾಗೂ ನಿರುಪಯುಕ್ತವಸ್ತುಗಳಿಂದ ರೂಪಿಸಲಾಗಿದೆ!) ಹಾಗೂ  ಆಕರ್ಷಕ ಲ್ಯಾಂಡ್‌ಸ್ಕೇಪ್‌, ಆಸನಗಳ ವ್ಯವಸ್ಥೆಕಲ್ಪಿಸಲಾಗಿದೆ. ಇದೆಲ್ಲದರಿಂದಾಗಿ ಪ್ರಯಾಣಿಕರಿಗೆ ಇದು ಅಕ್ಷರಶಃ ಹತ್ತಿರದಲ್ಲೇ ಇರುವ ಏರ್‌ ಪೋರ್ಟ್‌ ಲಾಂಜ್‌ನ ಅನುಭವ ನೀಡುತ್ತದೆ.

ಆಶ್ಚರ್ಯಗೊಂಡ ಪ್ರಯಾಣಿಕರು: ಸೋಮವಾರ ಬೆಳಗ್ಗೆ 4.45ಕ್ಕೆ ಸರಿಯಾಗಿ ಡೆಮು ರೈಲು ಮೆಜೆಸ್ಟಿಕ್‌ನ ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಹೊರಟಿತು. ಮೊದಲ ದಿನ ಹಾಗೂ ಮೊದಲ ರೈಲು ಮತ್ತು ಬೆಳಗಿನಜಾವ ಆಗಿದ್ದರಿಂದ 12 ಜನ ಮಾತ್ರ ಪ್ರಯಾಣಿಕರಿದ್ದರು. ಅವರೊಂದಿಗೆ ಸಂಸದ ಪಿ.ಸಿ.ಮೋಹನ್‌, ಬೆಂಗಳೂರು ರೈಲ್ವೆವಿಭಾಗೀಯ ವ್ಯವಸ್ಥಾಪಕ ಎ.ಕೆ.ವರ್ಮ, ರೈಲ್ವೆ ಅಧಿಕಾರಿಗಳು ಇದಕ್ಕೆ ಸಾಕ್ಷಿಯಾದರು. 6.02ಕ್ಕೆ ರೈಲು ಹಾಲ್ಟ್ ಸ್ಟೇಷನ್‌ ಗೆ ಬರುತ್ತಿದ್ದಂತೆ, ಪ್ರಯಾ ಣಿಕರೆಲ್ಲರೂ ಕರತಾಡನದೊಂದಿಗೆ ಸಂತಸ ವ್ಯಕ್ತಪಡಿಸಿದರು.

ಅವಶ್ಯಕತೆಗನುಗುಣವಾಗಿ ರೈಲು ಸೇವೆ: ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ಈ ರೈಲುಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸದ್ಯ ನಿತ್ಯ ಐದು ರೈಲುಗಳು ಸಂಚರಿಸಲಿವೆ. ವಿಮಾನಗಳು ಹೆಚ್ಚು ಸಂಚರಿಸುವ ವೇಳೆ ರೈಲುಗಳು ಕಾರ್ಯಾಚರಣೆ ಕೂಡ ಹೆಚ್ಚಲಿದೆ. ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಪ್ರಯಾಣದರ 10 ರೂ. ಇದ್ದು, ಕೆಎಸ್‌ಆರ್‌ನಿಂದ ಕಂಟೋನ್ಮೆಂಟ್‌ ಮೂಲಕ  ಹಾದು ಹೋಗುವ ರೈಲಿನ ಪ್ರಯಾಣ ದರ 15 ರೂ. ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಾಫ್ ಟೀ ದರದಲ್ಲಿ ರೈಲು ಸೇವೆ!: ಈ ವೇಳೆ ಸಂಸದ ಪಿ.ಸಿ.ಮೋಹನ್‌ ಮಾತನಾಡಿ, “20 ರೂ.ಗೆ ಟೀ ಅಥವಾ ಕಾಫಿ ಕೂಡ ಸಿಗುವುದಿಲ್ಲ. ಅಂತಹದ್ದರಲ್ಲಿ ಅದರರ್ಧ ದರದಲ್ಲಿ ಅಂದರೆ 10ರೂ.ಗಳಲ್ಲಿ ರೈಲು ನಮ್ಮನ್ನು ನಗರದಿಂದ ವಿಮಾನನಿಲ್ದಾಣಕ್ಕೆ ಕರೆದೊಯ್ಯುತ್ತದೆ ಎನ್ನುವುದೇ ಖುಷಿಯ ಸುದ್ದಿ. ಇದನ್ನು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಜನ ಸದುಪಯೋಗ ಪಡಿಸಿಕೊಳ್ಳಬೇಕು. ನಿಲ್ದಾಣದಲ್ಲಿ ಎಲ್ಲ ರೀತಿಯಹೈಟೆಕ್‌ ಸೌಲಭ್ಯಗಳಿದ್ದು, ಇದಕ್ಕೆ ಕಾರಣವಾದ ರೈಲ್ವೆ ಮತ್ತು ಬಿಐಎಲ್‌ ಕಾರ್ಯ ನಿಜಕ್ಕೂ ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲು ನಿಲ್ದಾಣ ಪ್ರಯಾಣಿಕರ ಸೇವೆಗೆ ಮುಕ್ತವಾಗಿದೆ. ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಜನ ದಟ್ಟಣೆಯನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಸಹಕಾರಿಯಾಗಲಿದೆ. ಪಿಯೂಶ್‌ ಗೋಯಲ್, ರೈಲ್ವೆ ಸಚಿವ

2008ರಿಂದ ಉಪನಗರ ರೈಲು ಯೋಜನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸತತವಾಗಿ ಆಗ್ರಹಿಸುತ್ತಾ ಬಂದವರಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಪ್ರೊ.ರಾಜೀವ್‌ಗೌಡ ಮುಂಚೂಣಿಯಲ್ಲಿದ್ದಾರೆ. ಈಗ ಆ ಹೋರಾಟಕ್ಕೆ ಫ‌ಲ ಸಿಕ್ಕಂತಾಗಿದೆ. ರಾಜೀವ್‌ಗೌಡ ಸೇರಿದಂತೆ ಪಕ್ಷದ ಹಲವು ನಾಯಕರು ಪ್ರಯಾಣಿಸಿದರು. ಕಾಂಗ್ರೆಸ್‌ ಟ್ವೀಟ್‌

ಸಿಬ್ಬಂದಿ ನಿತ್ಯ ಬಂದು-ಹೋಗಲು ಸಾಕಷ್ಟು ಕಿರಿಕಿರಿ ಆಗುತ್ತಿತ್ತು. ಹಾಲ್ಟ್ ಸ್ಟೇಷನ್‌ ಮಾಡಿರುವುದರಿಂದ ಸಕಾಲಕ್ಕೆ ಕೆಲಸಕ್ಕೆ ಬರಲು ಸಾಧ್ಯವಾಗುತ್ತದೆ. ಜತೆಗೆ ಸಮಯ ಉಳಿತಾಯ ಆಗುವುದರಿಂದ ಕುಟುಂಬದ ಸದಸ್ಯರೊಂದಿಗೆ ಆ ಸಮಯವನ್ನು ಕಳೆಯಬಹುದಾಗಿದೆ. ಡಯಾನ, ಏರ್‌ಪೋರ್ಟ್‌ ಸಿಬ್ಬಂದಿ.

ಮೆಜೆಸ್ಟಿಕ್‌ನಿಂದ ವಿಮಾನ ನಿಲ್ದಾಣಕ್ಕೆ ರೈಲು ಸೇವೆ ಮಾಡಿರುವುದು ಸಾಕಷ್ಟು ಅನುಕೂಲವಾಗಿದೆ. ಇದರಿಂದ ಒಂದು ಗಂಟೆಯಲ್ಲಿ ವಿಮಾನ ನಿಲ್ದಾಣ ತಲುಪಬಹುದು. ಯಾವುದೇ ಟ್ರಾಫಿಕ್‌ ಸಮಸ್ಯೆ ಇರುವುದಿಲ್ಲ. ಮೊದಲ ದಿನವೇ ಪ್ರಯಾಣ ಮಾಡುತ್ತಿರುವುದು ಸಂತಸವಾಗಿದೆ ಪ್ರಿಯಾಂಕ, ಪ್ರಯಾಣಿಕರು

ಟಾಪ್ ನ್ಯೂಸ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.