20 ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Jul 14, 2018, 6:00 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಅಧಿವೇಶನಕ್ಕೆ ತೆರೆ ಬಿದ್ದ ಬೆನ್ನಲ್ಲೇ ಆಡಳಿತದಲ್ಲಿ ಭಾರೀ ಬದಲಾವಣೆ ತರಲು ಮುಂದಾಗಿರುವ ಸರ್ಕಾರ ಶುಕ್ರವಾರ 20 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕೆಲವು ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸೇರಿ 20 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದೆ. ಈ
ಮೂಲಕ ಹೊಸ ಸರ್ಕಾರ ಆಡಳಿತ ಯಂತ್ರಕ್ಕೆ ಹೊಸ ರೂಪ ನೀಡುವ ಪ್ರಯತ್ನಕ್ಕೆ ಕೈಹಾಕಿದೆ. ಪ್ರಮುಖವಾಗಿ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ (ಪೌರಾಡಳಿತ ಮತ್ತು ನಗರ ಸ್ಥಳೀಯ ಸಂಸ್ಥೆಗಳು) ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯದರ್ಶಿ ಮುಂತಾದ ಹುದ್ದೆಗಳಲ್ಲಿ ಬದಲಾವಣೆ ತರಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಲ್.ಕೆ.ಅತೀಕ್ ಅವರಿಗೆ ಇದುವರೆಗೂ ಹುದ್ದೆ ಕೊಟ್ಟಿರಲಿಲ್ಲ. ಇದೀಗ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಜಾವೇದ್ ಅಖ್ತರ್- ಪ್ರಧಾನ ಕಾರ್ಯದರ್ಶಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೆಪಿಸಿಎಲ್ ಎಂಡಿ ಹೆಚ್ಚುವರಿ; ಡಾ.ಎನ್ .ನಾಗಾಂಬಿಕಾ ದೇವಿ- ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ; ಎಲ್.ಕೆ.ಅತೀಕ್- ಪ್ರಧಾನ ಕಾರ್ಯದರ್ಶಿ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್; ಅಂಜುಂ ಪರ್ವೇಜ್- ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ; ನವೀನ್‌ರಾಜ್ ಸಿಂಗ್- ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ಮಿನರಲ್ಸ್;ಸುಭೋದ್ ಯಾದವ್- ಕಾರ್ಯದರ್ಶಿ,ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಕಲಬುರಗಿ ವಿಭಾಗೀಯ ಆಯುಕ್ತರು.
ಪಂಕಜ್‌ಕುಮಾರ್ ಪಾಂಡೆ- ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಆಯುಷ್ ಸೇವೆಗಳು ಹಾಗೂ ಹೆಚ್ಚುವರಿಯಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಹುದ್ದೆ; ಡಾ.ಜೆ. ರವಿಶಂಕರ್- ಕಾರ್ಯದರ್ಶಿ, ನಗರಾಭಿವೃದ್ಧಿ (ಪೌರಾಡಳಿತ
ಮತ್ತು ನಗರ ಸ್ಥಳೀಯ ಸಂಸ್ಥೆಗಳು) ಹಾಗೂ ಹೆಚ್ಚುವರಿಯಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆ; ಪಿ.ಸಿ.ಜಾಫರ್- ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ; ಗುಂಜಾನ್ ಕೃಷ್ಣ- ವ್ಯವಸ್ಥಾಪಕ ನಿರ್ದೇಶಕರು,ಕೆಎಸ್‌ಐಐಡಿಸಿಎಲ್; ಡಿ.ರಣ್‌ದೀಪ್-ಹೆಚ್ಚುವರಿ ಆಯುಕ್ತರು (ಆಡಳಿತ), ಬಿಬಿಎಂಪಿ;ವಿ.ಪಿ.ಇಕ್ಕೇರಿ- ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ.
ಎಂ.ದೀಪಾ- ಜಿಲ್ಲಾಧಿಕಾರಿ, ಧಾರವಾಡ; ಸುಷ್ಮಾ ಗೋಡುಬೋಲೆ- ವಿಶೇಷ ಜಿಲ್ಲಾಧಿಕಾರಿ-1, ಬೆಂಗಳೂರು ನಗರ; ಡಾ.ಎಸ್ .ಬಿ.ಬೊಮ್ಮನಹಳ್ಳಿ- ಪ್ರಧಾನ ವ್ಯವಸ್ಥಾಪಕರು (ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್
ನಿರ್ಮಾಣ), ಕೃಷ್ಣಾ ಮೇಲ್ದಂಡೆ ಯೋಜನೆ; ಡಾ.ಬಿ.ಆರ್.ಮಮತಾ- ಮಿಷನ್ ಡೈರೆಕ್ಟರ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್; ನಳಿನಿ ಅತುಲ್- ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ,ರಾಯಚೂರು; ಶಿಲ್ಪಾ ಶರ್ಮಾ- ಉಪ ವಿಭಾಗಾಧಿಕಾರಿ, ರಾಯಚೂರು ಉಪವಿಭಾಗ; ಎಂ.ಆರ್.ರವಿಕುಮಾರ್- ಆಯುಕ್ತರು,
ಮೈಸೂರು ನಗರಪಾಲಿಕೆ; ಕೆ.ಎಂ.ಜಾನಕಿ-ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ನಿಗಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.