ಹಣ ಸಾಗಣೆ ಪ್ರಕರಣ ಎಸಿಬಿಗೆ ವರ್ಗಾವಣೆ?
Team Udayavani, Jan 6, 2019, 6:49 AM IST
ಬೆಂಗಳೂರು: ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಸಿಬ್ಬಂದಿ ಮೋಹನ್ ಬಳಿ ಪತ್ತೆಯಾದ 25.76 ಲಕ್ಷ ರೂ. ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಮತ್ತೂಬ್ಬ ಸಚಿವರ ಆಪ್ತ ಸಹಾಯಕರ ಹೆಸರು ಕೇಳಿ ಬಂದಿದೆ.
ಈ ಸಂಬಂಧ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರ ಆಪ್ತ ಸಹಾಯಕ ಕೃಷ್ಣಮೂರ್ತಿ ಹಾಗೂ ಇತರರಿಗೆ ವಿಧಾನಸೌಧ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಮತ್ತೂಂದೆಡೆ ಬಂಧನಕ್ಕೊಳಗಾಗಿರುವ ಮೋಹನ್ ಸರ್ಕಾರಿ ನೌಕರ ಎಂಬುದು ದೃಢಪಟ್ಟಿದ್ದು, ಇಡೀ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಹಸ್ತಾಂತರಿಸಲಾಗುವುದು.
ಈ ಸಂಬಂಧ ಈಗಾಗಲೇ ಕೆಲ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದು, ಸೋಮವಾರ ಪ್ರಕರಣವನ್ನು ಎಸಿಬಿಗೆ ವರ್ಗಾಹಿಸಲಾಗುವುದು ಎಂದು ಕೇಂದ್ರ ವಲಯದ ಹಿರಿಯ ಅಧಿಕಾರಿಗಳು ಹೇಳಿದರು. ಪ್ರಕರಣ ಸಂಬಂಧ ಮೋಹನ್‌ನನ್ನು ಶುಕ್ರವಾರ ತಡರಾತ್ರಿವರೆಗೆ ವಿಚಾರಣೆ ನಡೆಸಿ, ಶನಿವಾರ ಬೆಳಗ್ಗೆ 10.30ಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು.
ಅದರಂತೆ ಬೆಳಗ್ಗೆ ಠಾಣೆಗೆ ಹಾಜರಾದ ಆರೋಪಿ ಹಣ ಯಾರಿಗೆ ಸೇರಿದ್ದು ಎಂಬ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ. ಈಗಲೂ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾನೆ. ನನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೆ. ಇದು ರಾಜಕೀಯ ಮುಖಂಡರಿಗೆ ಸೇರಿದ ಹಣವಲ್ಲ ಎಂದು ಹೇಳುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ಮೋಹನ್ ಮೈಸೂರು ಮೃಗಾಲಯ ಪ್ರಾಧಿಕಾರ ಸಿಬ್ಬಂದಿ ಎಂಬುದು ತಿಳಿದು ಬಂದಿದ್ದು, ಈತನಿಗೆ ವಿಧಾನಸೌಧದಿಂದ ಸರ್ಕಾರಿ ನೌಕರ ಎಂಬ ಗುರುತಿನ ಚೀಟಿ ನೀಡಿರುವುದು ಪತ್ತೆಯಾಗಿದೆ. ಸಚಿವಾಲಯವೊಂದರಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಎಸಿಬಿಗೆ ವರ್ಗಾಹಿಸುವ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು.
-ಡಿ.ದೇವರಾಜ್, ಕೇಂದ್ರ ವಲಯ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.