ಪ್ರಪಂಚದ ಎಲ್ಲಾ ಪ್ರಮುಖ ಭಾಷೆಗಳಿಗೆ ಕುವೆಂಪು ಕೃತಿಗಳ ಅನುವಾದ: ಡಾ.ಸಿ.ಎನ್.ಅಶ್ವತ್ಥನಾರಾಯಣ
Team Udayavani, Dec 29, 2020, 8:10 PM IST
ಬೆಂಗಳೂರು: ಸರ್ವಕಾಲಕ್ಕೂ ಸಲ್ಲುವ ಕುವೆಂಪು ಅವರ ಸಾಹಿತ್ಯ ಕೃತಿಗಳನ್ನು ಪ್ರಪಂಚದ ಎಲ್ಲಾ ಪ್ರಮುಖ ಭಾಷೆಗಳಿಗೆ ಅನುವಾದ ಮಾಡಿಸಿ ಜಗತ್ತಿನೆಲ್ಲೆಡೆಯ ಓದುಗರಿಗೆ ಅವನ್ನು ಲಭ್ಯವಾಗಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮಲ್ಲೇಶ್ವರಂ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕುವೆಂಪು ಅವರ ಹುಟ್ಟಿದ ದಿನದ ಪ್ರಯುಕ್ತ ಮಲ್ಲೇಶ್ವರಂನಲ್ಲಿ ವಿವಿಧ ಸಾಂಸ್ಕೃತಿಕ ತಂಡಗಳ ಪ್ರದರ್ಶನದೊಂದಿಗೆ ಹಬ್ಬದ ವಾತಾವರಣದಲ್ಲಿ ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಾಗಿದ ಕನ್ನಡಿಗರ ಚೈತನ್ಯ ರಥದ ಮೆರವಣಿಗೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕುವೆಂಪು ಅವರ ಚಿತ್ರವನ್ನುಳ್ಳ ಭಿತ್ತಿಪತ್ರದೊಂದಿಗೆ 50ಕ್ಕೂ ಹೆಚ್ವು ಅಟೊಗಳು ಮಲ್ಲೇಶ್ವರಂನ ವಿವಿಧ ರಸ್ತೆಗಳ ಮೂಲಕ ಸಾಗಿ ಗಮನ ಸೆಳೆದವು.
ಕುವೆಂಪು ಅವರ ಸಾಹಿತ್ಯವು ಕಾಲದ ತೆಕ್ಕೆಯನ್ನು ಮೀರಿದ್ದು. ಇತ್ತೀಚೆಗೆ ಅವರ ಸಮಗ್ರ ಸಾಹಿತ್ಯದ 12,000 ಪುಟಗಳನ್ನು ಡಿಜಿಟಲೀಕರಣ ಮಾಡಿಸುವ ಮೂಲಕ ಪ್ರಪಂಚದ ಮೂಲೆಮೂಲೆಯಲ್ಲೂ ಲಭ್ಯವಾಗುವಂತೆ ಮಾಡಲಾಗಿದೆ. ಅದೇ ರೀತಿಯಲ್ಲಿ ಅವರ ಸಾಹಿತ್ಯದ ಅನುವಾದವೂ ಎಲ್ಲೆಡೆ ಸಿಗುವಂತೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವರೂ ಆದ ಅವರು ಹೇಳಿದರು.
ಇದನ್ನೂ ಓದಿ: ಕಾನ್ಪುರ ಅಂಚೆ ಕಚೇರಿ ಬಿಡುಗಡೆಗೊಳಿಸಿದ ಅಂಚೆ ಚೀಟಿಯಲ್ಲಿ ಭೂಗತ ಪಾತಕಿಗಳ ಚಿತ್ರ!
ದೈನಂದಿನ ಜೀವನದಲ್ಲಿ ಭಾಷೆ ಬಳಕೆಗೆ ಇರುವ ಅಡ್ಡಿಗಳನ್ನು ನಿವಾರಿಸುವುದಕ್ಕಾಗಿ ಕನ್ನಡ ತಂತ್ರಜ್ಞಾನ ತಂಡವನ್ನು ರಚಿಸಲಾಗಿದೆ. ನಾಡು-ನುಡಿಯ ವಿಷಯದಲ್ಲಿ ಆಸಕ್ತರಾದವರನ್ನು ಒಳಗೊಳ್ಳಿಸಿಕೊಂಡು ಕನ್ನಡ ನುಡಿಗಟ್ಟನ್ನು ಈಗಿನ ಬೆಳವಣಿಗೆಗಳಿಗೆ ಅನುಗುಣವಾಗಿ ಸಶಕ್ತಗೊಳಿಸುವ ಕಾರ್ಯವನ್ನು ಈ ತಂಡ ಮಾಡಲಿದೆ ಎಂದು ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ತಂತ್ರಜ್ಞಾನದ ಮೂಲಕ ಸಾರ್ವಜನಿಕ ಸೇವೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲು ಸಾಧ್ಯವಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಬದಲಾವಣೆಗಳನ್ನು ತರಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಶಾಲೆ, ಕಾಲೇಜುಗಳನ್ನು ಸದೃಢವಾಗಿಸಲು ಒತ್ತು ಕೊಡಲಾಗುವುದು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ದೃಢ ನಿರ್ಧಾರವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್, ಕನ್ನಡ ಹೋರಾಟಗಾರ ಸಾ.ರಾ.ಗೋವಿಂದ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ಬಿಬಿಎಂಪಿ ಮಾಜಿ ಸದಸ್ಯ ಮಂಜುನಾಥ ರಾಜು ಮತ್ತಿತರರು ಇದ್ದರು.
ಇದನ್ನೂ ಓದಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಠಿಣವಾಗಿ ಜಾರಿಗೊಳಿಸಲು ಇಲಾಖೆ ಸಿದ್ದ: ಸಚಿವ ಪ್ರಭು ಚವ್ಹಾಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.