ಬಸ್ ಖರೀದಿ ಅವ್ಯವಹಾರ ಸಚಿವ ರೇವಣ್ಣ ಆರೋಪ
Team Udayavani, Jan 5, 2018, 6:15 AM IST
ಬೆಂಗಳೂರು: ಟಾಟಾ ಮಾರ್ಕೊಪೋಲೊ ಬಸ್ ಖರೀದಿ ಅವ್ಯವಹಾರದ ಹಿಂದೆ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಪಾತ್ರ ಇರುವ ಶಂಕೆ ಇದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಆರೋಪಿಸಿದರು.
ದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಕೊಪೋಲೊ ಬಸ್ ಖರೀದಿ ಹಗರಣದ ತನಿಖೆ ನಡೆದಿದ್ದು, ಇದರಲ್ಲಿ ಬಿಜೆಪಿ ಆಡಳಿತದಲ್ಲಿ ಸಾರಿಗೆ ಸಚಿವರೂ ಆಗಿದ್ದ ಆರ್. ಅಶೋಕ ಅವರ ಪಾತ್ರ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆದರೆ, ಈ ಕುರಿತು ಇನ್ನೂ ಪರಿಶೀಲನೆ ನಡೆದಿದೆ ಎಂದು ಹೇಳಿದರು.
8-10 ದಿನಗಳಲ್ಲಿ ಬಹಿರಂಗ
ಮಾರ್ಕೊಪೋಲೊ ಬಸ್‌ಗಳ ಖರೀದಿ ಅವ್ಯವಹಾರದ ಬಗ್ಗೆ ಸದನ ಸಮಿತಿ ಕೂಡ ಈಗಾಗಲೇ ವರದಿ ಸಲ್ಲಿಸಿದೆ. ದೂಳು ತಿನ್ನುತ್ತಿರುವ ಈ ಕಡತದ ಪರಿಶೀಲನೆ ಈಗ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ 8-10 ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದೂ ಅವರು ಹೇಳಿದರು.
ಇದಕ್ಕೂ ಮುನ್ನ ಮೋಟಾರು ವಾಹನ ಕಾಯ್ದೆ (ತಿದ್ದುಪಡಿ)ಯಲ್ಲಿನ ಲೋಪದೋಷಗಳ ಕುರಿತು ರಾಜ್ಯಸಭೆ ಸದಸ್ಯ ಗುಲಾಂ ನಬಿ ಆಜಾದ್ ಸೇರಿದಂತೆ ರಾಜ್ಯಸಭೆ ಪ್ರತಿಪಕ್ಷದ ನಾಯಕರ ಜತೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.