Bengaluru Airport: ಏರ್ ಪೋರ್ಟ್ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Team Udayavani, Nov 17, 2024, 2:58 PM IST
ಬೆಂಗಳೂರು: ವಿದೇಶದಿಂದ ವನ್ಯಜೀವಿಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಆರೋಪಿಗಳಿಂದ 40 ಜೀವಂತ ವನ್ಯಜೀವಿಗಳನ್ನು ಸಂರಕ್ಷಿಸಿದ್ದಾರೆ.
ಆರೋಪಿಗಳಿಂದ ಜಪ್ತಿ ಮಾಡಲಾದ ಎರಡು ಟ್ರಾಲಿ ಬ್ಯಾಗ್ಗಳ ಪೈಕಿ ಒಂದರಲ್ಲಿ 24 ವನ್ಯಜೀವಿಗಳು ಮತ್ತೂಂದರಲ್ಲಿ 16 ಸೇರಿ ಒಟ್ಟು 40 ವನ್ಯ ಜೀವಿಗಳು ಪತ್ತೆಯಾಗಿವೆ. ಈ ಪೈಕಿ ಕೆಂಪು ಕಾಲಿನ ಆಮೆಗಳು, ದೈತ್ಯ ಆಮೆಗಳು, ಮಣಿ ಹಲ್ಲಿಗಳು, ಆಲ್ಬಿನೋ ಬಾವಲಿಗಳು, ಅಮೇರಿಕನ್ ಮೊಸಳೆ ಮರಿಗಳು, ಶಿಂಗಲ್ ಬ್ಯಾಕ್ ಸೇರಿ ವಿವಿಧ 40ಕ್ಕೂ ಹೆಚ್ಚು ಮಾದರಿಯ ವನ್ಯ ಜೀವಿ ಗಳನ್ನು ಸಂರಕ್ಷಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದರು.
ನ.11ರಂದು ರಾತ್ರಿ 11 ಗಂಟೆಗೆ ಮಲೇಷ್ಯಾದ ಕೌಲಲಾಂಪುರದಿಂದ ವಿಮಾನ (ಸಂಖ್ಯೆ ಎಂಎಚ್0192)ದಲ್ಲಿ ಕೆಐಎ ವಿಮಾನ ನಿಲ್ದಾಣದ ಟರ್ಮಿನಲ್ -2ಕ್ಕೆ ಬಂದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಈ ವೇಳೆ ಇಬ್ಬರು ಪ್ರಯಾಣಿಕರ ಟ್ರಾಲಿ ಬ್ಯಾಗ್ ನಲ್ಲಿ ಶಬ್ದವಾಗಿದೆ. ಕೂಡಲೇ ಆ ಬ್ಯಾಗ್ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಜೀವಂತ ವಿವಿಧ ವನ್ಯಜೀವಿಗಳು ಇರುವುದು ಕಂಡು ಬಂದಿದೆ. ತಕ್ಷಣ ಆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ ಕಸ್ಟಮ್ಸ್ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿಗು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತನಿಖೆ ಮುಂದುವರಿದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.