ಪ್ರಯಾಣಿಕರ ಸೋಗಿನಲ್ಲಿ ಕಳವು: ಐವರ ಸೆರೆ
Team Udayavani, Feb 28, 2019, 5:36 AM IST
ಬೆಂಗಳೂರು: ರೈಲುಗಳಲ್ಲಿ ಸಹ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಕರ ಬ್ಯಾಗ್‌ಗಳಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ದೆಹಲಿ, ಹರಿಯಾಣ ಮೂಲದ ಐವರು ಆರೋಪಿಗಳು ರೈಲ್ವೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೆಹಲಿಯ ರಣವೀರ್ ಸಿಂಗ್ (43), ಸತ್ಬೀರ (46), ವಿನೋದ (31), ಲಲೀತ್ ಕುಮಾರ್ (27) ಹಾಗೂ ಹರಿಯಾಣದ ಸುಭಾಷ್ (44) ಬಂಧಿತರು. ಆರೋಪಿಗಳ ಬಂಧನದಿಂದ ದಂಡು ರೈಲ್ವೆ ಠಾಣೆ ಮತ್ತು ಬೈಯಪ್ಪನಹಳ್ಳಿ ಠಾಣೆಗಳಲ್ಲಿ ದಾಖಲಾಗಿದ್ದ 9 ಕಳವು ಪ್ರಕರಣಗಳು ಪತ್ತೆಯಾಗಿದ್ದು, ಇವರಿಂದ 28 ಲಕ್ಷ ರೂ. ಮೌಲ್ಯದ ಒಂದು ಕೆ.ಜಿ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ರೈಲ್ವೆ ಎಸ್ಪಿ ಭೀಮಾಶಂಕರ್ ಎಸ್.ಗುಳೇದ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆರೋಪಿಗಳೆಲ್ಲರೂ ಸಂಬಂಧಿಗಳಾಗಿದ್ದು, ಆರೇಳು ವರ್ಷಗಳಿಂದ ಕಳ್ಳತನವನ್ನೆ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಸಹ ಪ್ರಯಾಣಿಕರಂತೆ ನಟಿಸಿ, ಪ್ರಯಾಣಿಕರ ಲಗೇಜುಗಳನ್ನು ಇಳಿಸಲು ಸಹಾಯ ಮಾಡುವ ನೆಪದಲ್ಲಿ ಅವರ ಬ್ಯಾಗ್‌ಗಳಲ್ಲಿದ್ದ ಚಿನ್ನಾಭರಣಗಳನ್ನು ಕೇವಲ 2-3 ನಿಮಿಷಗಳಲ್ಲಿ ಕಳವು ಮಾಡಿ ಪರಾರಿಯಾಗುತ್ತಿದ್ದರು. ಬಳಿಕ ದೆಹಲಿ, ಹರಿಯಾಣದಲ್ಲಿ ಮಾರಾಟ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎಂದು ಹೇಳಿದರು.
ಕೃತ್ಯ ಹೇಗೆ?: ದೆಹಲಿ, ಹರಿಯಾಣ, ಒಡಿಶಾದಿಂದಲೇ ರೈಲುಗಳ ಮೂಲಕ ಪ್ರಯಾಣ ಮಾಡುತ್ತಿದ್ದ ಆರೋಪಿಗಳು, ಎಲ್ಲ ಬೋಗಿಗಳನ್ನು ಪರಿಶೀಲಿಸುತ್ತಿದ್ದರು. ನಂತರ ಕೆಲ ಪ್ರಯಾಣಿಕರ ಬ್ಯಾಗ್‌ಗಳನ್ನು ಲಗೇಜ್ ಇಡುವ ಸ್ಥಳಕ್ಕೆ ಇಡಲು ಹಾಗೂ ಇಳಿಸಲು ಸಹಾಯ ಮಾಡುತ್ತಿದ್ದರು. ಈ ವೇಳೆಯೇ ಆ ಬ್ಯಾಗ್‌ಗಳಲ್ಲಿ ಚಿನ್ನಾಭರಣ ಅಥವಾ ಮೌಲ್ಯಯುತ ವಸ್ತುಗಳು ಇರುವುದನ್ನು ಖಚಿತ ಪಡಿಸಿಕೊಳ್ಳುತ್ತಿದ್ದರು.
ನಂತರ ಆರೋಪಿಗಳ ಪೈಕಿ ಇಬ್ಬರು ಕೆಲ ಹೊತ್ತು ಆ ನಿರ್ದಿಷ್ಟ ಪ್ರಯಾಣಿಕರ ಜತೆ ಆತ್ಮೀಯತೆಯಿಂದ ಮಾತನಾಡಿ, ಅವರ ಗಮನ ಬೇರೆಡೆ ಸೆಳೆಯುತ್ತಿದ್ದರು. ಈ ವೇಳೆ ಇತರೆ ಮೂವರು ಆರೋಪಿಗಳು ಬ್ಯಾಗ್‌ಗಳಲ್ಲಿ ಮೌಲ್ಯಯುತ ವಸ್ತುಗಳನ್ನು ಕಳವು ಮಾಡಿ, ಎಂದಿನಂತೆ ಜಿಪ್ ಗಳನ್ನು ಹಾಕಿ ಸಭ್ಯಸ್ಥರಂತೆ ನಟಿಸುತ್ತಿದ್ದರು.
ಆರೋಪಿಗಳು ಬಹುತೇಕ ಹವಾನಿಯಂತ್ರಿತ ಬೋಗಿಗಳ ಪ್ರಯಾಣಿಕರನ್ನೆ ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದು, ಪ್ರಮುಖವಾಗಿ ನವ ವಧು-ವರರನ್ನೆ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದರು ಎಂದು ಹೇಳಿದರು.
ಬಂಧನ ಹೇಗೆ?:ಕೆಲ ತಿಂಗಳ ಹಿಂದಷ್ಟೇ ದೆಹಲಿಯಿಂದ ನಗರಕ್ಕೆ ಆಗಮಿಸಿದ್ದ ನವ ದಂಪತಿಗೆ ಆರೋಪಿಗಳು ಸಹಾಯ ಮಾಡುವ ನೆಪದಲ್ಲಿ 270 ಗ್ರಾಂ ತೂಕದ ಚಿನ್ನಾಭರಣ ಕಳವು ಮಾಡಿದ್ದರು. ಈ ಸಂಬಂಧ ಕೆ.ಆರ್.ಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ದೂರುದಾರರು ಆರೋಪಿಗಳ ಮುಖ ಚಹರೆ ವಿವರಿಸಿದ್ದರು. ಇದರ ಆಧಾರದ ಮೇಲೆ ಈ ಹಿಂದೆ ಬಂಧನವಾಗಿದ್ದ ಕೆಲ ಆರೋಪಿಗಳ ಮುಖ ಚಹರೆಯನ್ನು ಹೊಲಿಕೆ ಮಾಡಿದಾಗ ಕೃತ್ಯ ಎಸಗಿದ ಆರೋಪಿಗಳ ಬಗ್ಗೆ ಮಾಹಿತಿ ಲಭ್ಯವಾಗಿತ್ತು ಎಂದು ರೈಲ್ವೆ ಪೊಲೀಸರು ಹೇಳಿದರು.
ರೈಲ್ವೆ ವಿಭಾಗದ ಡಿವೈಎಸ್ಪಿ ಎನ್.ಟಿ.ಶ್ರೀನಿವಾಸ ರೆಡ್ಡಿ, ದಂಡು ರೈಲ್ವೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಎಚ್.ಲಕ್ಷ್ಮೀನಾರಾಯಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.