5 ಲಕ್ಷದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಕೃತ್ ಕಸಿ ಚಿಕಿತ್ಸೆ
Team Udayavani, Nov 9, 2017, 2:10 PM IST
ಬೆಂಗಳೂರು: ಮುಂದಿನ ದಿನಗಳಲ್ಲಿ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಯಕೃತ್ ಕಸಿ (ಲಿವರ್ ಟ್ರಾನ್ಸ್‌ಪ್ಲಾಂಟ್) ಚಿಕಿತ್ಸೆ ನೀಡಲು ಪ್ರತ್ಯೇಕ ಸಂಸ್ಥೆ ರಚಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ಕೇವಲ 5 ಲಕ್ಷ ರೂಗಳಲ್ಲಿ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಯಕೃತ್ ಕಸಿ ಚಿಕಿತ್ಸೆಗೆ 20 ರಿಂದ 25 ಲಕ್ಷ ರೂ. ಪಡೆಯುತ್ತಿವೆ. ಅಷ್ಟು ಮೊತ್ತ ವ್ಯಯಿಸಿ ಚಿಕಿತ್ಸೆ ಪಡೆಯಲು ಬಡವರಿಂದ ಸಾಧ್ಯವಾಗುವುದಿಲ್ಲ. ಹಾಗಾಗಿ ಯಕೃತ್ ಕಸಿ ಚಿಕಿತ್ಸೆಗಾಗಿ ಸಂಸ್ಥೆಯೊಂದನ್ನು ರಚಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೇವಲ 5 ಲಕ್ಷದೊಳಗೆ ಬಡವರಿಗೆ ಯಕೃತ್ ಕಸಿ ಚಿಕಿತ್ಸೆ ದೊರೆಯಲಿದೆ ಎಂದರು.
ರಾಜ್ಯದ ಜನತೆಗೆ ಕಡಿಮೆ ದರದಲ್ಲಿ ಈ ಚಿಕಿತ್ಸೆ ನೀಡುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಅದೇ ರೀತಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಮಂಡಿ ಚಿಪ್ಪು ಕಸಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ರಾಜ್ಯದ 17ನೇ ವೈದ್ಯಕೀಯ ಕಾಲೇಜನ್ನು ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ 200 ಕೋಟಿ ರೂ.ನಲ್ಲಿ ನಿರ್ಮಿಸಲಾಗುತ್ತಿದೆ. ಜತೆಗೆ ರಾಜ್ಯದ ಇನ್ನೂ 6 ಕಡೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.
ಪ್ರಾರ್ಥಿಸಿ ಎಂದು ಹೇಳಿ ಬಿಲ್ ವಸೂಲಿ: ಸಚಿವ ರೋಷನ್ ಬೇಗ್ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿ ಸಾವನ್ನಪ್ಪಿದ ನಂತರವೂ ವೆಂಟಿಲೇಟರ್‌ನಲ್ಲಿಟ್ಟು ದೇವರಲ್ಲಿ ಪ್ರಾರ್ಥಿಸಿ ಎಂದು ಹೇಳಿ ಬಿಲ್ ವಸೂಲಿ ಮಾಡುತ್ತಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವರು ವಿಧಾನಮಂಡಲ ಅಧಿವೇಶನದಲ್ಲಿ ವಿಧೇಯಕ ತರಲು ಮುಂದಾಗಿದ್ದು, ಸರ್ಕಾರದೊಂದಿಗೆ ನಾವಿದ್ದೇವೆ. ಜನರಿಗೆ ಅನುಕೂಲಕರವಾದ ಯೋಜನೆ ಜಾರಿಗೆ ತರುವುದು ನಮ್ಮ ಸರ್ಕಾರದ ಗುರಿಯಾಗಿದ್ದು, ಔಷಧ ಉತ್ಪಾದನಾ ಕಂಪನಿಗಳ ಮಾಫಿಯಾ ಅಂತ್ಯವಾಗಬೇಕಿದೆ ಎಂದು ತಿಳಿಸಿದರು.
ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಚ್. ಎಂ.ರೇವಣ್ಣ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಮೇಯರ್ ಆರ್.ಸಂಪತ್‌ರಾಜ್ ಇತರರು ಇದ್ದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ವೈದ್ಯರು ಹಿಂಜರಿಯುತ್ತಾರೆ. ಹೀಗಾಗಿ ಗ್ರಾಮೀಣ ಸೇವೆ ಕಡ್ಡಾಯ ಗೊಳಿಸಲಾಗಿತ್ತು. ಕೆಲವರು ತಡೆಯಾಜ್ಞೆ ತಂದಿದ್ದರು. ಕೆಲಸ ಬೇಡ ಎಂದರೆ ಹೇಗೆ?
●ಸಿದ್ದರಾಮಯ್ಯ, ಮುಖ್ಯಮಂತ್ರಿ
ರಾಜ್ಯದಲ್ಲಿ 40 ವರ್ಷಗಳ ಹಿಂದೆ ಖಾಸಗಿ ಆಸ್ಪತ್ರೆ ಇರಲಿಲ್ಲ. 30 ವರ್ಷಗಳಿಂದೀಚೆಗೆ ಖಾಸಗಿಯವರು ಬಂದಿದ್ದು, ನಮ್ಮದೇನೂ ಆಕ್ಷೇಪವಿಲ್ಲ. ನಮ್ಮಲ್ಲಿ ಬರುವವರನ್ನು ಮಾನವೀಯತೆಯಿಂದ ನೋಡಬೇಕು.
●ಕೆ.ಆರ್.ರಮೇಶ್ ಕುಮಾರ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.