ಕೊಡಲಿ ಪೆಟ್ಟಿಗಿಂತ ಮರ ಸ್ಥಳಾಂತರವೇ ಸೂಕ್ತ

Team Udayavani, Oct 31, 2017, 12:09 PM IST

kodali-pettu.jpg

ಬೆಂಗಳೂರು: ಮರಗಳ ಸ್ಥಳಾಂತರಕ್ಕೆ ಸಂಬಂಧಿಸಿದ ನೀತಿ-ನಿರೂಪಣೆಗಳ ಬಗ್ಗೆ ಚರ್ಚಿಸಲು ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ವೋಲ್ವೊ ಟ್ರಕ್ಸ್‌ ಇಂಡಿಯಾ ಸಹಯೋಗದಲ್ಲಿ ಅ.31ರಂದು ನಗರದ ಮಲ್ಲೇಶ್ವರದಲ್ಲಿರುವ ಜೆ.ಎನ್‌.ಟಾಟಾ ಸಭಾಂಗಣದಲ್ಲಿ “ಹಸಿರು ಹೊದಿಕೆ ರಕ್ಷಣೆ ರಾಷ್ಟ್ರೀಯ ವಿಚಾರ ಸಂಕಿರಣ’ ಹಮ್ಮಿಕೊಳ್ಳಲಾಗಿದೆ.

ಯಾವುದೇ ಅಭಿವೃದ್ಧಿ ಚಟುವಟಿಕೆಗಳಿಗೆ ಮರಗಳ ಹನನ ಮಾಡಿ, ಅದಕ್ಕೆ ಪ್ರತಿಯಾಗಿ ಮತ್ತೂಂದು ಕಡೆ ಗಿಡಗಳನ್ನು ನೆಡುವುದೊಂದೇ ಪ್ರಸ್ತುತ ನಮ್ಮ ಮುಂದಿರುವ ಆಯ್ಕೆ. ಆದರೆ, ಮರಗಳನ್ನು ಕಡಿಯುವ ಬದಲು, ಸ್ಥಳಾಂತರಿಸಲು ತಂತ್ರಜ್ಞಾನವಿದೆ. ಈ ಸಂಬಂಧ ನೀತಿ ರೂಪಿಸುವ ಅಗತ್ಯವಿದೆ. ಆ ನೀತಿ-ನಿರೂಪಣೆ ಹೇಗಿರಬೇಕು ಎಂಬುದರ ಬಗ್ಗೆ ವಿಚಾರ ಸಂಕಿರಣದಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಸುರೇಂದ್ರ ಕುಮಾರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸಾಂಖೀಕ ಮತ್ತು ಯೋಜನಾ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ. ಮರ ವಿಜ್ಞಾನಿಗಳು, ತಂತ್ರಜ್ಞರು, ಗಣಿ ಕಂಪನಿಗಳು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಈಗಾಗಲೇ ದೇಶದ ವಿವಿಧೆಡೆ ಮರಗಳ ಸ್ಥಳಾಂತರ ನಡೆಯುತ್ತಿದೆ. ಆದರೆ, ಅದು ವೈಜ್ಞಾನಿಕವಾಗಿಲ್ಲ. ಅಂದರೆ, ಎಲ್ಲ ಮರಗಳ ಸ್ಥಳಾಂತರ ಸಾಧ್ಯವಿಲ್ಲ. ಅದು ಮರಗಳ ಪ್ರಭೇದ, ಮಣ್ಣು, ಮರಗಳ ಆಯಸ್ಸನ್ನು ಅವಲಂಬಿಸಿರುತ್ತದೆ. ಅಷ್ಟೇ ಅಲ್ಲ, ನಗರದಲ್ಲಿ ಸುರಂಗದಲ್ಲಿ ಕೇಬಲ್‌ಗ‌ಳು, ವಿದ್ಯುತ್‌ ಲೈನ್‌ಗಳು ಹಾದುಹೋಗಿರುತ್ತವೆ. ಸಂಚಾರದಟ್ಟಣೆ ಇರುತ್ತದೆ. ಇದರ ಮಧ್ಯೆ ಎಲ್ಲ ಮರಗಳನ್ನು ಸ್ಥಳಾಂತರಿಸಲು ಸಾಧ್ಯವಾಗದಿರಬಹುದು. ಅದೇನೇ ಇರಲಿ, ಮರಗಳನ್ನು ಕಡಿಯುವ ಬದಲಿಗೆ ಸ್ಥಳಾಂತರಿಸುವುದು ಹೆಚ್ಚು ಸೂಕ್ತ. ವೋಲ್ವೊ ಗ್ರೂಪ್‌ ಈ ನಿಟ್ಟಿನಲ್ಲಿ ಕೈಜೋಡಿಸಿದೆ ಎಂದು ಹೇಳಿದರು.

ವಿಶಿಷ್ಟ ವಾಹನ ಸಿದ್ಧ: ವೋಲ್ವೊ ಗ್ರೂಪ್‌ ವ್ಯವಸ್ಥಾಪಕ ನಿರ್ದೇಶಕ ಕಮಲ್‌ ಬಾಲಿ ಮಾತನಾಡಿ, “ನಗರ ವಿಸ್ತಾರಗೊಳ್ಳುತ್ತಲೇ ಇದ್ದು, ಅಭಿವೃದ್ಧಿ ಅನಿವಾರ್ಯ. ಆದರೆ, ಅದಕ್ಕೆ ಮರಗಳ ಮಾರಣಹೋಮವೇ ಪರಿಹಾರವಲ್ಲ. ಬದಲಿಗೆ ಮರಗಳ ಸ್ಥಳಾಂತರ ಸುಸ್ಥಿರ ಪರಿಹಾರವಾಗಬಲ್ಲದು. ಈ ಹಿನ್ನೆಲೆಯಲ್ಲಿ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯೊಂದಿಗೆ ಸಹಯೋಗದಲ್ಲಿ ವೈಜ್ಞಾನಿಕವಾಗಿ ಮಗಳ ಸ್ಥಳಾಂತರಕ್ಕೆ ಕಂಪನಿ ಮುಂದಾಗಿದ್ದು, ಇದಕ್ಕಾಗಿ ವಿಶಿಷ್ಟ ವಾಹನ ಸಿದ್ಧಪಡಿಸಿದೆ. ಆರ್ಥಿಕ, ಸಾಮಾಜಿಕ ಮತ್ತು ಪರಿಸರದ ದೃಷ್ಟಿಯಿಂದ ಮರಗಳ ಸ್ಥಳಾಂತರ ಸೂಕ್ತ,’ ಎಂದು ಅಭಿಪ್ರಾಯಪಟ್ಟರು.

ಸ್ಥಳಾಂತರಕ್ಕೆ ಹೆಚ್ಚೇನೂ ವೆಚ್ಚವಾಗದು: “ಮರಗಳ ಸ್ಥಳಾಂತರಕ್ಕೆ ಲಕ್ಷಾಂತರ ರೂ. ವ್ಯಯವಾಗುತ್ತದೆ ಎಂದಬುದು ತಪ್ಪು ಭಾವನೆ. ಮರ ಕಡಿಯಲು ತಗಲುವ ವೆಚ್ಚವೇ ಸ್ಥಳಾಂತರಕ್ಕೂ ತಗಲುತ್ತದೆ. ಮರಗಳ ಸ್ಥಳಾಂತರ ಆಯಾ ಮರದ ಗಾತ್ರ, ಸ್ಥಳಾಂತರಗೊಳ್ಳಲಿರುವ ಪ್ರದೇಶದ ದೂರ ಮತ್ತಿತರ ಅಂಶಗಳನ್ನು ಅವಲಂಬಿಸಿರುತ್ತದೆ. ಸಾಮಾನ್ಯವಾಗಿ ಒಂದು ಮರ ಸ್ಥಳಾಂತರಕ್ಕೆ 10ರಿಂದ 12 ಸಾವಿರ ರೂ. ಖರ್ಚಾಗುತ್ತದೆ.

ಮರ ಕಡಿದು, ಅದನ್ನು ಸಾಗಿಸಲು ಕೂಡ ಇಷ್ಟೇ ಕರ್ಚಾಗುತ್ತದೆ. ಅಲ್ಲದೆ, ಮರಗಳ ಹನನಕ್ಕೆ ಬದಲಾಗಿ ಗಿಡಗಳನ್ನು ನೆಡಲಾಗುತ್ತದೆ. ಆದರೆ ಅದು ಬೆಳೆದು, ಮರವಾಗಲು 10-15 ವರ್ಷ ಬೇಕಾಗುತ್ತದೆ. ಅಲ್ಲಿಯವರೆ ಅದರ ನಿರ್ವಹಣೆ ಮಾಡಬೇಕು. ಪ್ರಸ್ತುತ ಸಂದರ್ಭದಲ್ಲಿ ಇದು ಸಮರ್ಪಕವಾಗಿ ಆಗುತ್ತಿಲ್ಲ. ಈ ಎಲ್ಲ ಹಿನ್ನೆಲೆಗಳಲ್ಲಿ ಸ್ಥಳಾಂತರ ಸೂಕ್ತ,’ ಎಂದು ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಸುರೇಂದ್ರ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.