ಇಸ್ತ್ರಿ ಪೆಟ್ಟಿಗೆಯಿಂದ ಪತ್ನಿಯ ಜನನಾಂಗ ಸುಡಲು ಯತ್ನ
Team Udayavani, Sep 27, 2017, 11:40 AM IST
ಬೆಂಗಳೂರು: ಪಾನಮತ್ತ ವ್ಯಕ್ತಿಯೊಬ್ಬ ಪತ್ನಿಯ ಜನನಾಂಗವನ್ನು ಇಸ್ತ್ರಿ ಪೆಟ್ಟಿಗೆಯಿಂದ ಸುಡಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಬಾಣಸವಾಡಿ ಪೊಲೀಸರು, ಆರೋಪಿ ದಿಲೀಪ್ ಕುಮಾರ್ (28 ) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಾಣಸವಾಡಿಯ ಜಾನಕಿರಾಮ್ ಲೇಔಟ್ನ ನಿವಾಸಿಯಾಗಿರುವ ದಿಲೀಪ್ಕುಮಾರ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೇಮಾ (ಹೆಸರು ಬದಲಿಸಲಾಗಿದೆ) ಎಂಬುವವರನ್ನು ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆರಂಭದಲ್ಲಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದ ದಿಲೀಪ್, ಕಳೆದ ಎರಡು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ಗದು ಪತ್ನಿಗೆ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು.
ಅದೇ ರೀತಿ ಸೆ.23ರಂದು ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ದಿಲೀಪ್ ಪತ್ನಿ ಜೊತೆ ಜಗಳವಾಡಿದ್ದಾನೆ. ತಡರಾತ್ರಿಯವರೆಗೂ ದಂಪತಿ ನಡುವೆ ಜಗಳ ನಡೆದಿದ್ದು ಮಕ್ಕಳು ಮಲಗಿಕೊಂಡಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಇಸ್ತ್ರೀಪೆಟ್ಟಿಗೆ ತೆಗೆದುಕೊಂಡು ಕಾಯಿಸಿದ್ದ ಆರೋಪಿ, ಪತ್ನಿಗೆ ಥಳಿಸಿ ಕೆಲ ಖಾಸಗಿ ಭಾಗಗಳಿಗೆ ಸುಡಲು ಯತ್ನಿಸಿದ್ದಾನೆ. ಅರೆಬರೆ ಗಾಯಗಳಿಂದ ಕಿರುಚಿಕೊಂಡ ಪತ್ನಿಯು ಹೊರಗಡೆ ಓಡಿಬಂದಿದ್ದಾರೆ.
ಕೂಡಲೇ ಅಕ್ಕ-ಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರನೇ ದಿನ ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿ ದಿಲೀಪ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.