ತುಳು ಭಾಷೆಗೆ ಶೀಘ್ರವೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ
Team Udayavani, Aug 13, 2018, 12:40 PM IST
ಬೆಂಗಳೂರು: ಪಂಚ ದ್ರಾವಿಡ ಭಾಷೆಯಲ್ಲಿ ಒಂದಾಗಿರುವ ತುಳು ಭಾಷೆಗೆ ಶೀಘ್ರದಲ್ಲೇ ಅಧಿಕೃತ ರಾಜ್ಯ ಭಾಷೆಯ ಸ್ಥಾನಮಾನ ಸಿಗಲಿದೆ ಎಂದು ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.
ತುಳುವೆರೆಂಕುಲು ಬೆಂಗಳೂರು ಇವರ ವತಿಯಿಂದ ಎಂಎಸ್‌ಆರ್‌ಎಸ್ ನಗರದ ಮೂಲ್ಕಿ ಸುಂದರ್‌ರಾಮಶೆಟ್ಟಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಟಿಡೊಂಜಿ ಕೂಟ-2018 ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತುಳು ಭಾಷೆಗೆ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ಕೊಡಿಸುವ ನಿಟ್ಟಿನಲ್ಲಿ ಅಕಾಡೆಮಿಯು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಸರ್ಕಾರದ ಮಟ್ಟಿನಲ್ಲಿ ಈ ಬಗ್ಗೆ ಅಂತಿಮ ಹಂತದ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ನ್ಯಾಯ ಸಿಗಲಿದೆ ಎಂದು ಹೇಳಿದರು.
ತುಳು ಭಾಷೆ ಬಗ್ಗೆ ಇದ್ದ ಕೀಳರಿಮೆ ಹಿಂಜರಿಕೆ ಈಗ ಕಡಿಮೆ ಆಗಿದೆ. ತುಳು ಸ್ನಾತಕೋತ್ತರ ಪದವಿ (ಎಂ.ಎ) ಕೋರ್ಸ್ ಆರಂಭವಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ (ಬಿ.ಎ)ಮಟ್ಟದಲ್ಲೂ ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಳ್ಳಬಹುದು. ಪಿಯು ಶಿಕ್ಷಣದಲ್ಲೂ ತುಳು ಭಾಷೆಯನ್ನು ತರಲಾಗುವುದು.
ಈಗಾಗಲೇ ಉಡುಪಿ, ಮಂಗಳೂರು ಸೇರಿ ರಾಜ್ಯ ವಿವಿಧ ಭಾಗಗಳಲ್ಲಿ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ತುಳುವನ್ನು ಒಂದು ಭಾಷೆಯಾಗಿ ಕಲಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತುಳು ಲಿಪಿ ಕಲಿಸುವ ಕಾರ್ಯಕ್ರಮವನ್ನು ಅಕಾಡೆಮಿಯಿಂದಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ಜಾಗತಿಕ ಮಟ್ಟದಲ್ಲಿ ತುಳು ಭಾಷೆಯನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಮುಂಬರುವ ನವೆಂಬರ್ ತಿಂಗಳಲ್ಲಿ ವಿಶ್ವ ತುಳು ಸಮ್ಮೇಳನ ನಡೆಸುತ್ತಿದ್ದೇವೆ. ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲಾ ತುಳು ಸಂಘಟಣೆಗಳು ಸೇರಿ ರಾಜ್ಯಮಟ್ಟದ ಸಮ್ಮೇಳನ ಮಾಡಬೇಕಿದೆ.
ಇನ್ನು ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ತುಳು ಭವನಕ್ಕೆ ಈಗಾಗಲೇ 4 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 3 ಕೋಟಿ ರೂ. ಅಷ್ಟು ಕಾಮಗಾರಿ ಇನ್ನು ಬಾಕಿಯಿದೆ, ಉಳಿದ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಮತ್ತು ಕೂಟದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸನ್ಮಾನ ಮಾಡಲಾಯಿತು. ಎಂಎಸ್‌ಆರ್‌ಎಸ್ ನಗರ ರೆಸಿಡೆನ್ಸಿ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಕರ್ನಲ್ ಎ.ಜೆ.ಭಂಡಾರಿ, ಎಂಎಸ್‌ಆರ್‌ಎಸ್ ಆಡಿಟೋರಿಯಂ ಟ್ರಸ್ಟ್ ಅಧ್ಯಕ್ಷ ರಮಾಕಾಂತ್ ಶೆಟ್ಟಿ. ತುಳುವೆರೆಂಕುಲು ಬೆಂಗಳೂರು ಮುಖ್ಯಸ್ಥ ವಿಜಯ್‌ಕುಮಾರ್ ಕುಲಶೇಖರ್ ಮತ್ತಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.