ತುಳುನಾಡ ಉತ್ಸವ, ತೌಳವ ಶ್ರೀ ಪ್ರಶಸ್ತಿ ಪ್ರದಾನ

Team Udayavani, Nov 20, 2017, 12:52 PM IST

Kereetadavesha.jpg

ಬೆಂಗಳೂರು: ತುಳುಕೂಟ ಬೆಂಗಳೂರು ವತಿಯಿಮದ ಡಿ.17 ರಂದು ನಗರದಲ್ಲಿ “ತುಳುನಾಡ ಉತ್ಸವ-2017′, “ತೌಳವ ಶ್ರೀ’ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ತುಳು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಕೆ.ವಿ.ರಾಜೇಂದ್ರ ಕುಮಾರ್‌ ಮಾಹಿತಿ ನೀಡಿ,ಇದು ಒಂದು ದಿನದ ಸುಗ್ಗಿಯ ಸಂಭ್ರಮವಾಗಿದ್ದು, ಬೆಳಗ್ಗೆ 8 ರಿಂದ ರಾತ್ರಿ 10 ಗಂಟೆವರೆಗೆ ವಿಜಯನಗರದ ಬಂಟರ ಸಂಘದ ಆವರಣದಲ್ಲಿ ನಡೆಯಲಿದೆ. ಈ ವೇಳೆ ತುಳು ಸಾಹಿತ್ಯಗೋಷ್ಠಿ, ಯಕ್ಷಗಾನ, ತಾಳಮದ್ದಲೆ, ಹುಲಿವೇಷ ಕುಣಿತ, ಕರಾವಳಿ ಜಾನಪದ, ಗ್ರಾಮೀಣ ಕ್ರೀಡೆಗಳು ಅನಾವರಣಗೊಳ್ಳಲಿವೆ ಎಂದರು.

ಸಾಹಿತ್ಯ ಕ್ಷೇತ್ರದಲ್ಲಿನ ಅನುಪಮ ಸೇವೆಗಾಗಿ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರಿ, ಕಾನೂನು ಕ್ಷೇತ್ರದಲ್ಲಿನ ಸಾಧನೆಗಾಗಿ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗಡೆ, ಸಿನಿಮಾ ಮತ್ತು ಸಂಗೀತ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಖ್ಯಾತ ಸಂಗೀತ ನಿರ್ದೇಶಕ ವಿ.ಮನೋಹರ್‌, ಕ್ರೀಡಾ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಮಮತಾ ಪೂಜಾರಿ, ಹೊರನಾಡ ತುಳುವ, ಸರ್ವೋತ್ತಮ ಶೆಟ್ಟಿ (ಅಬುದಾಬಿ) ಅವರಿಗೆ ಈ ಸಾಲಿನ ತೌಳವ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. 

ತುಳುಕೂಟದ ಬೆಂಗಳೂರು ಅಧ್ಯಕ್ಷ ಕೆ.ಜಯರಾಮ ಸೂಡ, ಪ್ರತ್ಯೇಕ ಸಭಾಂಗಣದಲ್ಲಿ ತುಳು ಸಾಹಿತ್ಯ ಸಮ್ಮೇನ ನಡೆಯಲಿದ್ದು, ಸಾಹಿತಿ ಡಾ.ಚಿನ್ನಪ್ಪಗೌಡ, ಡಾ.ಎ.ವಿ.ನಾವುಡ, ಗಣಪತಿ ಎಕ್ಕಾರು, ವಾಸುದೇವ ರಂಗಭಟ್‌ ಸೇರಿದಂತೆ ಹಲವರು ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆಂದರು. 

 ಉತ್ಸವದಲ್ಲಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕನ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಅಲ್ಲದೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸುವಂತೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದರು.

ಗುರುಕಿರಣ ತಂಡದಿಂದ ಕಾರ್ಯಕ್ರಮ: ಸಂಜೆ ಕುದ್ರೋಳಿ ಗಣೇಶ್‌ರಿಂದ “ಮ್ಯಾಜಿಕ್‌ ಶೋ’ ಪ್ರಸನ್ನ ಶೆಟ್ಟಿ ಮತ್ತವರ ತಂಡದಿಂದ “ಯಕ್ಷಗಾನ’ ಕದ್ರಿ ನವನೀತ್‌ ಶೆಟ್ಟಿ ಅವರಿಂದ “ತಾಳ ಮದ್ದಳೆ’ ಗುರುಕಿರಣ್‌, ಶಿವಧ್ವಜ ತಂಡದಿಂದ “ತುಳುವೆರೆ ಪಟ್ಟಾಂಗ’ ಸೇರಿ ಹಲವು ಮನರಂಜನೆ
ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ತುಳು ಕವಿತಾ ಸ್ಪರ್ಧೆ: ಇದೇ ವೇಳೆ ತುಳುನಾಡಿನ ಪ್ರತಿಭೆ ಪ್ರೋತ್ಸಾಹಿಸಲು ಪಂಥ ಮತ್ತು ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ತುಳು ಬುಲೆಚ್ಚಿಲ್‌, ಸಂವಿಧಾನ 8ನೆಯ ಪರಿಚ್ಛೇದ: ತುಳು, ತುಳು ಸಾಂಸ್ಕೃತಿಕ ಜೀವನ ಎಂಬ ವಿಷಯದ ಮೇಲೆ ಪ್ರಬಂಧವನ್ನು ಆಹ್ವಾನಿಸಲಾಗಿದೆ.

ಅಲ್ಲದೆ 250-300 ಶಬ್ದಗಳ ತುಳು ಕವಿತೆ. 300 ಶಬ್ದಗಳ ಒಗಟು ಮತ್ತು ಅದರ ಒಳಕತೆಗಳನ್ನೂ ಆಹ್ವಾನಿಸಿದೆ. ಆಸಕ್ತರು ಮೊ.9341212789 ಕ್ಕೆ ಸಂಪರ್ಕಿಸಬಹುದು. ವಿಜೇತರಿಗೆ 15 ಸಾವಿರ ಪ್ರಥಮ, 10 ಸಾವಿರ ದ್ವೀತಿಯ, 5 ಸಾವಿರ ತೃತೀಯ ಬಹುಮಾನ ನೀಡಲಾಗುವುದು ಎಂದು ಸೂಡ ತಿಳಿಸಿದ್ದಾರೆ.  

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.