ಹಳೆ ನೋಟು ಬದಲಾವಣೆಗೆ ಪ್ರಯತ್ನಿಸಿದ ಇಬ್ಬರ ಬಂಧನ
Team Udayavani, Mar 24, 2017, 12:17 PM IST
ಬೆಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡಲು ರಿಯಲ್ ಎಸ್ಟೇಟ್ ಏಜೆಂಟರು ಪ್ರಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹಳೆಯ 500 ಮತ್ತು 1000 ಮುಖ ಬೆಲೆಯ 1.28 ಕೋಟಿ ರುಪಾಯಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಕೊಡಗಿನ ವಿರಾಜಪೇಟೆಯ ಜಿಮ್ಮಿ ರಾಹುಲ್ (34) ಮತ್ತು ಉತ್ತರ ಕನ್ನಡದ ಹೊನ್ನಾವರದ ಅಜಯ್ ಬಿನಶೋಕ್ (26) ಬಂಧಿತರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಪಡೆದಿದ್ದ ದಾಖಲೆಗಳಿಲ್ಲದ ಹಣವನ್ನು ಬ್ಯಾಂಕ್‌ಗೆ ಪಾವತಿಸಲಾಗದೇ ಬದಲಾವಣೆ ಮಾಡಿಸಿಕೊಳ್ಳಲು ಇಬ್ಬರೂ ಯತ್ನಿಸಿದ್ದರು.
ಶೇಷಾದ್ರಿಪುರ ಬಳಿಯ ಪೈಪ್‌ಲೈನ್ ರಸ್ತೆಯಲ್ಲಿರುವ ಜುಲ್ತಾ ಸೂರ್ಯ ಎಲೈಟ್ ಅಪಾರ್ಟಮೆಂಟ್‌ನಲ್ಲಿರುವ ರಿಷಿ ಜೈನ್ ಚಾರ್ಟೆಡ್ ಅಕೌಂಟೆಂಟ್ ಕಚೇರಿಯಲ್ಲಿ ನೋಟುಗಳ ಬದಲಾವಣೆಗೆ ಯತ್ನಿಸಿದ್ದರು. ಈ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಇನ್ನಷ್ಟು ಮಂದಿ: ಹಳೇ ನೋಟು ಗಳನ್ನು ಹೊಂದಿರುವ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಇತರೆ ಪಾನ್‌ಬ್ರೋಕರ್‌ಗಳು ನಗರದಲ್ಲಿ ಇನ್ನಷ್ಟು ಮಂದಿ ಇದ್ದು, ನೋಟುಗಳ ಬದಲಾವಣೆಗೆ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ಅಂತಹ ವ್ಯಕ್ತಿಗಳ ಮೇಲೆ ನಿಗಾವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.