ಪ್ರತ್ಯೇಕ ಅಪಘಾತ ಟೆಕ್ಕಿ ಸೇರಿ ಇಬ್ಬರು ಸಾವು
Team Udayavani, Mar 3, 2018, 12:26 PM IST
ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಟೆಕ್ಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಸಂಚಾರ ಠಾಣೆ ವ್ಯಾಪ್ತಿಯ ಇಂದಿರಾನಗರ ಮೆಟ್ರೋ ನಿಲ್ದಾಣ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಜೆ.ಪಿ.ನಗರ ನಿವಾಸಿ ಹಿಂಬದಿ ಸವಾರ ಸಯ್ಯದ್ ನಯೀಂ(30) ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸವಾರ ಸಾಫ್ಟ್ವೇರ್ ಎಂಜಿನಿಯರ್ ಚಿನ್ಮಯ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯವೆಸಗಿದ ಚಾಲಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು. ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಸಹೋದ್ಯೋಗಿ ಚಿನ್ಮಯ್ ಜತೆ ಮನೆಗೆ ತೆರಳುತ್ತಿದ್ದರು. ಈ ವೇಳೆ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದರು.
ಪಾದಚಾರಿ ಸಾವು: ಮತ್ತೂಂದು ಪ್ರಕರಣದಲ್ಲಿ ತೆಲಂಗಾಣ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆರ್‌ಟಿ ನಗರದ ಸಿಬಿಐ ಜಂಕ್ಷನ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ದಿಣ್ಣೂರು ನಿವಾಸಿ ದಾಸ್ (78) ಮೃತರು.
ಕೇರಳ ಮೂಲದ ದಾಸ್ ದಿಣ್ಣೂರಿನಲ್ಲಿ ವಾಸವಿದ್ದು, ಮುಂಜಾನೆ 5ರ ಸುಮಾರಿಗೆ ಸಿಬಿಐ ಜಂಕ್ಷನ್‌ನಲ್ಲಿ ರಸ್ತೆ ದಾಟುವಾಗ ವೇಗವಾಗಿ ಬಂದ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಆಸ್ಪತ್ರೆಗೆ ಕೆರೆದೊಯ್ಯುವಾಗ ಮೃತಪಟ್ಟಿದ್ದಾರೆ.ಈ ಸಂಬಂಧ ಬಸ್ ಚಾಲಕ ಪೆಲ್ಲಪಲ್ಲಿ ಸ್ವಾಮಿ (50)ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು
MUST WATCH
ಹೊಸ ಸೇರ್ಪಡೆ
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.