ಗುಂಡು ಹಾರಿಸಿ ಇಬ್ಬರು ದರೋಡೆಕೋರರ ಸೆರೆ
Team Udayavani, Sep 11, 2017, 11:55 AM IST
ಬೆಂಗಳೂರು: ಖಾಸಗಿ ಕಂಪೆನಿ ಉದ್ಯೋಗಿಯೊಬ್ಬರ ಮೊಬೈಲ್ ಕಸಿದು ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಬೆಳ್ಳಂದೂರು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಸದ್ಯ ಆನೇಕಲ್ನಲ್ಲಿ ನೆಲೆಸಿರುವ ಮುಜಾಯಿಲ್ (22) ಹಾಗೂ ಚಂದಾಪುರದ ನಿವಾಸಿ ಅಮರ್ (23) ಬಂಧಿತರು. ಇಬ್ಬರ ಕಾಲಿಗೂ ಗುಂಡೇಟು ಬಿದ್ದಿದೆ.
ಇದೇ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಪೋಲಿಸರ ಮೇಲೆ ದಾಳಿ ನಡೆಸಿದ್ದರಿಂದ ಮುಖ್ಯ ಪೇದೆಗಳಾದ ಆ್ಯಂಟನಿ ಮತ್ತು ವಿಜಯ್ ತೋಳಿಗೆ ಗಾಯವಾಗಿದ್ದು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ಬಂಧನದಿಂದ ನಗರದ ವಿವಿಧ ಠಾಣೆಗಳ 10ಕ್ಕೂ ಅಧಿಕ ದರೋಡೆ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.
ಅಷ್ಟೇ ಅಲ್ಲದೇ ಇದಕ್ಕೂ ಮೊದಲು ಆರೋಪಿಗಳು ತಮಿಳುನಾಡಿನಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆಗೆ ಚಾಕು ಇರಿದು ಕೊಂದು ಬೆಂಗಳೂರಿಗೆ ಬಂದಿದ್ದರು. ಇಲ್ಲಿಯೂ ತಮ್ಮ ಕೃತ್ಯ ಮುಂದುವರಿಸಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಇತ್ತೀಚೆಗೆ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಮೊಬೈಲ್ ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು.
ನಂತರ ತಲೆಮರೆಸಿಕೊಂಡಿದ್ದ ಸ್ಥಳವನ್ನು ಪತ್ತೆ ಮಾಡಿ ಬಂಧಿಸಲು ಪೊಲೀಸರು ಮುಂದಾಗಿದ್ದರು. ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದರು. ಕೂಡಲೇ ಬೆಳ್ಳಂದೂರು ಠಾಣೆ ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ವಿವರಿಸಿದರು.
ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸರ್ಜಾಪುರ ಬಳಿಯ ಪೆಟ್ರೋಲ್ ಬಂಕ್ ಬಳಿ ನಡೆದು ಹೋಗುತ್ತಿದ್ದ ಆನಂದ್ ಎಂಬುವರ ಮೇಲೆ ಹಲ್ಲೆ ನಡೆಸಿ ಅವರ ಮೊಬೈಲ್ ಕಸಿದು ಪರಾರಿಯಾಗಿದ್ದರು. ಕೂಡಲೇ ಆನಂದ್, ಮತ್ತೂಂದು ಮೊಬೈಲ್ನಿಂದ ನಮ್ಮ-100ಕ್ಕೆ ಮಾಹಿತಿ ನೀಡಿದ್ದರು.
ಎಚ್ಚೆತ್ತ ಸಹಾಯವಾಣಿಯ ಸಿಬ್ಬಂದಿ ಬೆಳ್ಳಂದೂರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಠಾಣಾ ವ್ಯಾಪ್ತಿಯ ಸುತ್ತ ಮುತ್ತಲ ಪ್ರದೇಶಗಳಲ್ಲಿ ನಾಕಾಬಂಧಿ ಮಾಡಿದ್ದರು. ಹೀಗಾಗಿ ಆರೋಪಿಗಳು ತಪ್ಪಿಸಿಕೊಳ್ಳಲಾಗದೆ ಚಿಕ್ಕನಾಯಕನಹಳ್ಳಿಯ ಶಾಲೆಯೊಂದರ ಬಳಿ ಇದ್ದ ನೀಲಗಿರಿ ತೋಪಿನಲ್ಲಿ ಅವಿತುಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ತಮ್ಮ ಸಿಬ್ಬಂದಿಯೊಂದಿಗೆ ಆ ಸ್ಥಳವನ್ನು ಸುತ್ತುವರೆದಿದ್ದರು.
ಬಳಿಕ ಇಬ್ಬರು ದರೋಡೆಕೋರರು ಪೋಲಿಸರನ್ನು ನೋಡಿ ಹೆದರಿ ಓಡಲು ಯತ್ನಿಸಿದ್ದಾರೆ. ಅಲ್ಲದೆ, ಇಬ್ಬರು ಮುಖ್ಯಪೇದೆಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಎಚ್ಚರಿಕೆ ನೀಡುವ ಸಲುವಾಗಿ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆರೋಪಿಗಳು ಓಡಲು ಯತ್ನಿಸಿದಾಗ, ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ತಮಿಳುನಾಡಿನ ಪೇದೆ ಕೊಲೆ
ಬಂಧಿತರು ಹೊಸೂರಿನಲ್ಲಿ ದರೋಡೆ ಮಾಡಿ ಕರ್ನಾಟಕದಲ್ಲಿ ತಲೆಮರೆಸಿಕೊಳ್ಳುವುದನ್ನು ಅಭ್ಯಸಿಸಿಕೊಂಡಿದ್ದರು. ದರೋಡೆ ಪ್ರಕರಣವೊಂದರಲ್ಲಿ ಹೊಸೂರು ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾದ ವೇಳೆ ಮುಖ್ಯಪೇದೆ ಮುನಿಸ್ವಾಮಿ ಮತ್ತು ಸಬ್ಇನ್ಸ್ಪೆಕ್ಟರ್ ಒಬ್ಬರಿಗೆ ಚಾಕುವಿನಿಂದ ಇರಿದಿದ್ದರು. ಈ ವೇಳೆ ಪೇದೆ ಮುನಿಸ್ವಾಮಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.