ರಸ್ತೆ ಅಪಘಾತ ಇಬ್ಬರು ಸಾವು
Team Udayavani, May 20, 2018, 12:20 PM IST
ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬ ಟೆಕ್ಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಟ್ಯಾಂಕರ್ ಹರಿದು ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ನ ರಾಮಗೊಂಡನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ರಾಮಗೊಂಡನಹಳ್ಳಿ ನಿವಾಸಿ ಕುಮಾರ್ ರಾಣೆ (27) ಮೃತ ಟೆಕ್ಕಿ. ಬೆಳಗಾವಿಯ ದಾಂಡೇಲಿ ಮೂಲದ ಕುಮಾರ್ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ವೈಟ್‌ಫೀಲ್ಡ್‌ನಲ್ಲಿರುವ ಸಾಫ್ಟ್ವೇರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹೋಗುವಾಗ ರಾಮಗೊಂಡನಹಳ್ಳಿ ಬಳಿ ವೇಗವಾಗಿ ಬಂದ ಟ್ಯಾಂಕರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ಯಾಂಕರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವೈಟ್‌ಫೀಲ್ಡ್ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಮತ್ತೂಂದು ಪ್ರಕರಣದಲ್ಲಿ ಯಲಹಂಕದ ಎನ್‌ಇಎಸ್ ಕಚೇರಿ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐಷರ್ ವಾಹನ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ದೊಡ್ಡಬಳ್ಳಾಪುರ ನಿವಾಸಿ ಗಿರೀಶ್ ಕುಮಾರ್ (30) ಮೃತ ಚಾಲಕ. ಐಷರ್ ವಾಹನದ ಕ್ಲೀನರ್ ಗೋವಿಂದ್ ಎಂಬುವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರ ತಡರಾತ್ರಿ ಗಿರೀಶ್ ಐಷರ್ ವಾಹನದಲ್ಲಿ ನಗರ ಪ್ರವೇಶಿಸುತ್ತಿದ್ದರು. ಇದೇ ವೇಳೆ ಎನ್‌ಇಎಸ್ ಕಚೇರಿ ಬಳಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಗಿರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಯಲಹಂಕ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.