Bangalore: ಶಿಕ್ಷಣ ಸಂಸ್ಥೆಗಳ ಸಮೀಪ ದ್ವಿಚಕ್ರ ವಾಹನ ಸವಾರರ ಪುಂಡಾಟ: 510 ಕೇಸ್ ದಾಖಲು
Team Udayavani, Jan 22, 2024, 11:03 AM IST
ಬೆಂಗಳೂರು: ನಗರದ ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಅಪ್ರಾಪ್ತರು ಅತಿ ವೇಗದಿಂದ ವಾಹನ ಚಲಾಯಿಸುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಆರೋಪಗಳು ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿ 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಿಂದ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 154 ಪ್ರಕರಣ, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 328, ಬೈಕ್ ನಲ್ಲಿ ಮೂವರು ಕುಳಿತು ಚಾಲನೆ ಮಾಡುತ್ತಿದ್ದವರ ವಿರುದ್ಧ 17, ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುತ್ತಿದ್ದವರ ವಿರುದ್ಧ 11 ಪ್ರಕರಣ ದಾಖಲಿಸಲಾಗಿದೆ. ಈ 510 ಪ್ರಕರಣಗಳ ಪೈಕಿ 10 ಮಂದಿ ಅಪ್ರಾಪ್ತರಾಗಿದ್ದಾರೆ. ಅವರಿಗೆ ಚಲಾಯಿಸಲು ವಾಹನ ನೀಡಿದ ಪೋಷಕರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಅಲ್ಲದೇ, ಪೋಷಕರಿಗೂ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.