ಅಂಡರ್‌ಪಾಸ್ ಅತಿಕ್ರಮಣ:ಬಿಬಿಎಂಪಿಗೆ ಹೈ ನೋಟಿಸ್
Team Udayavani, May 31, 2019, 1:07 PM IST
ಬೆಂಗಳೂರು: ಮೆಜೆಸ್ಟಿಕ್‌ನಿಂದ ಸುಬೇದಾರ್ ಛತ್ರಂ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ಅಂಡರ್‌ಪಾಸ್’ ಮಾರ್ಗವನ್ನು ಅತಿಕ್ರಮಣ ಮಾಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ನಗರ ಪೊಲೀಸರಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ರವಿಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎಎಸ್ ಓಕ್ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಬಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತು ಹಾಗೂ ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿತು.
ಮೆಜೆಸ್ಟಿಕ್‌ನಿಂದ ಸುಬೇದಾರ್‌ರ್ ಛತ್ರಂ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ಅಂಡರ್‌ಪಾಸ್’ ಮಾರ್ಗವನ್ನು ಬೀದಿ ಬದಿ ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅಂಡರ್ ಪಾಸ್ ಪ್ರವೇಶ ದ್ವಾರ ಮತ್ತು ಒಳಭಾಗದಲ್ಲಿ ವ್ಯಾಪಾರ ಚಟುವಟಿಕೆಗಳು ನಡೆಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ಬಹಳ ತೊಂದರೆ ಆಗುತ್ತಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸರಿಗೆ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿರುವ ಅಂಡರ್‌ಪಾಸ್ ಮಾರ್ಗವನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.