ಅಭಿವೃದ್ಧಿ ಸಾಧಿಸದ ಸಂಸ್ಥೆ ಅಪ್ರಸ್ತುತ
Team Udayavani, Nov 24, 2018, 11:39 AM IST
ಬೆಂಗಳೂರು: “ಹಿಂದೂಸ್ತಾನ್ ಏರೋನಾಟಿಕ್ಸ್ ಲಿ., (ಎಚ್‌ಎಎಲ್) ಸೇರಿದಂತೆ ಯಾವುದೇ ಕಂಪನಿ ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಸಾಧಿಸದಿದ್ದರೆ ಅಪ್ರಸ್ತುತ ಆಗಿಬಿಡುತ್ತದೆ’ ಎಂದು ಎಚ್‌ಎಎಲ್ ಹಣಕಾಸು ನಿರ್ದೇಶಕ ಸಿ.ಬಿ.ಅನಂತಕೃಷ್ಣನ್ ತಿಳಿಸಿದರು.
ನಗರದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಜೆ.ಎನ್.ಟಾಟಾ ಸಭಾಂಗಣದಲ್ಲಿ ಶುಕ್ರವಾರ ದಿ ಇನ್ಸ್‌ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ದಕ್ಷಿಣ ಭಾರತ ಪ್ರಾದೇಶಿಕ ಪರಿಷತ್ತು ಮತ್ತು ಬೆಂಗಳೂರು ಘಟಕ ಸಂಯುಕ್ತವಾಗಿ ಹಮ್ಮಿಕೊಂಡಿದ್ದ “ಪ್ರಾದೇಶಿಕ ಸಿಎಂಎ ಸಮ್ಮೇಳನ-2018’ರಲ್ಲಿ ಅವರು ಮಾತನಾಡಿದರು.
ಎಚ್‌ಎಎಲ್ ಒಂದು ಕಾಲಕ್ಕೆ ವೈಮಾನಿಕ ಕ್ಷೇತ್ರದಲ್ಲಿ ಏಕಸ್ವಾಮ್ಯ ಹೊಂದಿತ್ತು. ಆದರೆ, ಇಂದು ಸಾಕಷ್ಟು ಸ್ಪರ್ಧೆ ಎದುರಿಸುತ್ತಿದೆ. ಕೇವಲ ಎಚ್‌ಎಎಲ್ ಅಲ್ಲ; ಯಾವೊಂದು ಕಂಪನಿಯೂ ಹಿಂದಿನ ಅಂಕಿ-ಸಂಖ್ಯೆಗಳನ್ನೇ ಮುಂದಿಟ್ಟುಕೊಂಡು ಸಾಧನೆ ಮಂತ್ರ ಜಪಿಸಿದರೆ ಸಾಲದು, ಅದಕ್ಕೆ ಪೂರಕವಾಗಿ ಕಾರ್ಯತಂತ್ರಗಳನ್ನೂ ರೂಪಿಸಬೇಕಾಗುತ್ತದೆ. ಬೆಳವಣಿಗೆಯತ್ತ ಹೆಜ್ಜೆ ಹಾಕದ ಕಂಪನಿ ಅಪ್ರಸ್ತುತ ಆಗುತ್ತದೆ ಎಂದು ಹೇಳಿದರು.
ಕೈಗಾರಿಕೆ ಬೆಳವಣಿಗೆಗೆ ಆದ್ಯತೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಮಹಾಸಂಘ (ಎಫ್ಕೆಸಿಸಿಐ) ಅಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬಹುಮುಖ್ಯ ಪಾತ್ರ ವಹಿಸುತ್ತಿವೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದರು.
ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರ ಉದ್ಯೋಗ ಕಲ್ಪಿಸುವುದು ಅಸಾಧ್ಯ. ಪ್ರಸ್ತುತ ಸುಮಾರು ಎರಡೂವರೆ ಕೋಟಿ ಜನ ಸರ್ಕಾರಿ ಉದ್ಯೋಗದಲ್ಲಿದ್ದರೆ, 50 ಕೋಟಿಗೂ ಅಧಿಕ ಜನರಿಗೆ ಕೈಗಾರಿಕೆಗಳು ನೇರ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸಿವೆ. ನಿರುದ್ಯೋಗ ನಿವಾರಣೆಗೆ ಕೈಗಾರಿಕೆಗಳ ಪಾತ್ರ ದೊಡ್ಡದು. ಇದನ್ನು ಮನಗಂಡು ಸರ್ಕಾರ, ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಐಸಿಎಐ-ಸಿಎಂಎ ದಕ್ಷಿಣ ಭಾರತದ ಪ್ರಾದೇಶಿಕ ಪರಿಷತ್ತು ಅಧ್ಯಕ್ಷ ಸುರೇಶ್ ಗುಂಜಳ್ಳಿ, ಸದಸ್ಯ ವೈ.ಎಚ್.ಆನೇಗುಂದಿ, ಮಾಜಿ ಅಧ್ಯಕ್ಷ ಜಿ.ಎನ್. ವೆಂಕಟರಾಮನ್, ಬಿಸಿಸಿಎ ಅಧ್ಯಕ್ಷ ರವೀಂದ್ರನಾಥ್ ಕೌಶಿಕ್ ಮತ್ತು ಕಾರ್ಯದರ್ಶಿ ಬಿ.ಎಸ್. ಮಂಜುಳಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.