ಮಸಾಜ್‌ ಪಾರ್ಲರ್‌ಗಳಲ್ಲಿ ಅನೈತಿಕ ಚಟುವಟಿಕೆಗಳು

Team Udayavani, Jan 27, 2021, 11:25 AM IST

Unethical Activities in Massage Parlors

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ಚಾಲ್ತಿಯಲ್ಲಿರುವ ಕೆಲವು ಮಸಾಜ್‌ ಪಾರ್ಲರ್‌ ಹಾಗೂ ಬಾಡಿ ಸ್ಪಾಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೂ ನಗರ ಪೊಲೀಸರು ಕಾನೂನು ಕ್ರಮ ವಹಿಸದೆ ನಿರ್ಲಕ್ಷ್ಯ ವಹಿಸಿದ ಗಂಭೀರ ಆರೋಪ ಕೇಳಿಬಂದಿದೆ.

ನಗರ ಪೊಲೀಸರ ವಿರುದ್ಧ ಇಂತಹ ಗಂಭೀರ ಆರೋಪ ಮಾಡಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್‌ ಹಿರೇಮಠ್ ಎಂಬುವವರು ಈ ಕುರಿತು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರನ್ನು ಪ್ರತಿವಾದಿಯನ್ನಾಗಿ ಪರಿಗಣಿಸಲಾಗಿದೆ. ಜಯಕುಮಾರ್‌ ಅವರ ದೂರನ್ನು ವಿಚಾರಣೆಗೆ ಪರಿಗಣಿಸಿ ಜ.18ರಂದು ವಿಚಾರಣೆ ನಡೆಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು, ಆರೋಪದ ದೂರಿನ ಕುರಿತು ಕ್ರಮ ವಹಿಸುವಂತೆ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರಿಗೆ ಆದೇಶಿಸಿ ನೋಟಿಸ್‌ ಕೂಡ ಜಾರಿಗೊಳಿಸಿದ್ದಾರೆ.

ದೂರುದಾರರು ಗಂಭೀರವಾದ ಅರೋಪಗಳನ್ನು ಮಾಡಿದ್ದಾರೆ. ಆರೋಪಗಳು ಸತ್ಯವಾಗಿದ್ದು ಪೊಲೀಸರು ಕಾನೂನು ಕ್ರಮವಹಿಸದಿದ್ದಲ್ಲಿ ಕರ್ತವ್ಯಲೋಪವಾಗುತ್ತದೆ ಎಂದು ಲೋಕಾಯುಕ್ತರು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಆರೋಪಗಳಿಗೆ ಸಂಬಂಧ  ಪಟ್ಟಂತೆ ಮಸಾಜ್‌ ಪಾರ್ಲರ್‌ಗಳ ಚಟುವಟಿಕೆಗಳ ಬಗ್ಗೆ ನಿಗಾವಹಿಸಿ, ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಎಲ್ಲ ಡಿಸಿಪಿಗಳಿಗೆ ಸೂಚನೆ ನೀಡುವಂತೆ ಲೋಕಾಯುಕ್ತರು ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದಾರೆ.

ದೂರುದಾರರು ಮಾಡಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ನೀವೇ ಖುದ್ದು ತನಿಖೆ ನಡೆಸಬಹುದು. ಇಲ್ಲವೇ ಡಿಸಿಪಿ ಹಂತದ ಅಧಿಕಾರಿ ತನಿಖೆ ನಡೆಸುವಂತೆ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿರುವ ಲೋಕಾಯುಕ್ತರು, ದೂರಿನ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದ್ದಾರೆ. ಜತೆಗೆ, ಮುಂದಿನ ವಿಚಾರಣೆ ವೇಳೆಗೆ ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆಯೂ ಆಯುಕ್ತರಿಗೆ ಆದೇಶಿಸಿದ್ದಾರೆ.ಲೋಕಾಯುಕ್ತರ ಆದೇಶ ಸಂಬಂಧದ ನೋಟೀಸ್‌ ಕೂಡ ರವಾನೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಪದ್ಮ ಪ್ರಶಸ್ತಿ ಪುರಸ್ಕಾರ: ಅಭಿನಂದನೆ

ಮಸಾಜ್‌ ಪಾರ್ಲರ್‌ ಹಾಗೂ ಸ್ಪಾಗಳಲ್ಲಿನ ಅಕ್ರಮ ಚಟುವಟಿಕೆಗಳ ಕುರಿತು ಪೊಲೀಸರು ಕ್ರಮ ವಹಿಸಿಲ್ಲ ಎಂಬ ಆರೋಪ ದೂರಿಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಕಾಯಿದೆ ಕಲಂ 2 (12) ಅನ್ವಯ ವಿಚಾರಣೆ ನಡೆಸಲಾಗುತ್ತಿದೆ.

 ಪಿ.ವಿಶ್ವನಾಥ ಶೆಟ್ಟಿ, ಲೋಕಾಯುಕ್ತ ನ್ಯಾಯಮೂರ್ತಿ

 ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.