ಯುಪಿಒಆರ್ ಯೋಜನೆ ಶೀಘ್ರ ಜಾರಿ: ಆರ್.ವಿ.ದೇಶಪಾಂಡೆ
Team Udayavani, Aug 5, 2018, 6:00 AM IST
ಬೆಂಗಳೂರು: ನಗರಗಳಲ್ಲಿನ ಆಸ್ತಿಗಳ ಮಾಲೀಕತ್ವದ ಹಕ್ಕಿಗೆ ಸಂಬಂಧಪಟ್ಟಂತೆ ದಾಖಲೆ ಸಿದ್ಧಪಡಿಸುವ ಮಹತ್ವಾಕಾಂಕ್ಷಿ “ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ’ಯನ್ನು (ಯುಪಿಒಆರ್- ಅರ್ಬನ್ ಪ್ರಾಪರ್ಟಿ ಓನರ್‌ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್) ರಾಜ್ಯಾದ್ಯಂತ ಕ್ಷಿಪ್ರವಾಗಿ ಜಾರಿಗೊಳಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
1964ರ ಕರ್ನಾಟಕ ಭೂಕಂದಾಯ ಕಾಯ್ದೆ ಮತ್ತು ನಿಯಮಾವಳಿ 1966ರನ್ವಯ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನವಾಗುತ್ತಿದೆ. ಕಂದಾಯ ಇಲಾಖೆಯ ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆ ಜಾರಿಗೊಳಿಸುತ್ತಿರುವ ಯೋಜನೆಗೆ ಮೊದಲ ಸುತ್ತಿನಲ್ಲಿ ಮೈಸೂರು, ಶಿವಮೊಗ್ಗ ಹಾಗೂ ಮಂಗಳೂರು ನಗರ ಆಯ್ಕೆಯಾಗಿವೆ. ಯೋಜನೆಯಡಿ ನಗರ ಪ್ರದೇಶ ವ್ಯಾಪ್ತಿಯ ಪ್ರತಿ ಆಸ್ತಿಯನ್ನು ಅಳತೆ ಮಾಡಿ ನಕ್ಷೆ ಸಿದ್ಧಪಡಿಸಲಾಗುತ್ತದೆ. ಅದರಂತೆ ಈ ಮೂರು ನಗರಗಳಲ್ಲಿ ಆಸ್ತಿ ಅಳತೆ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಆಸ್ತಿಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳಿಂದ ದಾಖಲೆ ಸಂಗ್ರಹಿಸಿ ನಂತರ ಪರಿಶೀಲನೆಗೆ ಒಳಪಡಿಸಲಾಗುವುದು. ಬಳಿಕ ಹಕ್ಕು ವಿಚಾರಣೆ ಪ್ರಕ್ರಿಯೆ ಆರಂಭಿಸಿ ಆಸ್ತಿ ದಾಖಲೆ (ಪ್ರಾಪರ್ಟಿ ರೆಕಾರ್ಡ್) ಸಿದ್ಧಪಡಿಸಿ ಆಸ್ತಿ ಮಾಲೀಕರಿಗೆ ವಿತರಿಸಲಾಗುವುದು. ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆಗೆ ಆಸ್ತಿ ದಾಖಲೆ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಶಿವಮೊಗ್ಗದಲ್ಲಿ ಆಸ್ತಿ ದಾಖಲೆ ವಿತರಿಸಲಾಗಿದೆ. ಸದ್ಯ ಮಂಗಳೂರು ನಗರ ವ್ಯಾಪ್ತಿಯಲ್ಲಿ ಇದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಲವೇ ದಿನಗಳಲ್ಲಿ ಮೈಸೂರು ನಗರದಲ್ಲೂ ಆಸ್ತಿ ನೋಂದಣಿಗೆ ಇದೇ ಕ್ರಮ ಜಾರಿಗೊಳಿಸಲಾಗುವುದು. ಹೀಗೆ ರಾಜ್ಯದ ಎಲ್ಲ ನಗರಗಳಲ್ಲೂ ಯುಪಿಒಆರ್ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಭೂ ಕಂದಾಯ ನಿಯಮಾವಳಿ 1966ರ ನಮೂನೆ- 13ರ ಅನ್ವಯ ಈ ಆಸ್ತಿ ದಾಖಲೆಗಳನ್ನು ಮಾಲೀಕತ್ವದ ದಾಖಲೆಗಳೆಂದು ಪರಿಗಣಿಸಲಾಗುವುದು. ಹೀಗಾಗಿ ನಗರ ಪ್ರದೇಶಗಳಲ್ಲಿ ಆಸ್ತಿ ಹೊಂದಿರುವವರಿಗೆ ಇದು ಅತ್ಯವಶ್ಯಕ ದಾಖಲೆಯಾಗಲಿದೆ ಎಂದು ಹೇಳಿದರು.
ಯೋಜನೆಯ ಪ್ರಯೋಜನ
ಯುಪಿಒಆರ್ ಯೋಜನೆಯಿಂದಾಗಿ ಸರ್ಕಾರಿ ಆಸ್ತಿಗಳನ್ನು ಗುರುತಿಸಲು ಹಾಗೂ ಸಂರಕ್ಷಿಸಲು ನೆರವಾಗಲಿದೆ. ಜತೆಗೆ ಮಹಾನಗರ ಪಾಲಿಕೆಗಳು ಹಾಗೂ ನಗರ ಪಾಲಿಕೆಗಳು ಸೂಕ್ತ ಆಸ್ತಿ ತೆರಿಗೆ ಸಂಗ್ರಹಣೆಗೂ ನಿಖರ ಮಾಹಿತಿ (ಡೇಟಾಬೇಸ್) ಸಿದ್ಧವಾಗಲಿದೆ. ನಗರ ಪ್ರದೇಶಗಳಲ್ಲಿನ ಆಸ್ತಿಗಳ ಸ್ವರೂಪ, ಭೌಗೋಳಿಕ ಸ್ಥಿತಿ, ಪ್ರತಿ ಆಸ್ತಿಯ ನಿಖರ ವಿಸ್ತೀರ್ಣದ ಮಾಹಿತಿಯೂ ಸಿಗುತ್ತದೆ. ಜತೆಗೆ ಆಸ್ತಿಗಳಿಗೆ ಸಂಬಂಧಪಟ್ಟ ಅನಗತ್ಯ ವ್ಯಾಜ್ಯಗಳು ಕ್ರಮೇಣ ಕಡಿಮೆಯಾಗಲಿವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲೂ ಅನುಷ್ಠಾನ: ಬೆಂಗಳೂರಿನ 198 ವಾರ್ಡ್‌ಗಳ ಪೈಕಿ ಆಯ್ದ 50 ವಾರ್ಡ್‌ಗಳಲ್ಲಿ ಯುಪಿಒಆರ್ ಯೋಜನೆ ಜಾರಿಗೆ ಸರ್ಕಾರ ಅನುಮೋದನೆ ನೀಡಿದೆ. ಮೊದಲಿಗೆ ನಗರದ ಒಂದು ವಾರ್ಡ್‌ನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.