Trafic: ಟ್ರಾಫಿಕ್‌ ತಗ್ಗಿಸಲು ಸಮೂಹ ಸಾರಿಗೆ ಬಳಸಿ: ಆಯುಕ್ತ

Team Udayavani, Nov 11, 2024, 11:08 AM IST

Trafic: ಟ್ರಾಫಿಕ್‌ ತಗ್ಗಿಸಲು ಸಮೂಹ ಸಾರಿಗೆ ಬಳಸಿ: ಆಯುಕ್ತ

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಪ್ರಯಾಣಕ್ಕೆ ಸಮೂಹ ಸಾರಿಗೆಯನ್ನು ಹೆಚ್ಚು ಬಳಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್‌ ವತಿಯಿಂದ ಮೆಜೆಸ್ಟಿಕ್‌ನಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಸಾರ್ವಜನಿಕ ಸಾರಿಗೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಗ್ಗಿಸಬೇಕಾದರೆ, ಸಾರ್ವಜನಿಕರು ಖಾಸಗಿ ವಾಹನಗಳ ಬಳಕೆ ಕಡಿಮೆ ಮಾಡಿ ಸಮೂಹ ಸಾರಿಗೆಗಳಾದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು, ಮೆಟ್ರೋ ರೈಲುಗಳ ಬಳಕೆ ಹೆಚ್ಚು ಮಾಡಬೇಕು. ಇಲ್ಲವಾದರೆ, ನಗರದಲ್ಲಿ ವಾಹನ ಸಂಚಾರ ದಟ್ಟಣೆ ಸಮಸ್ಯೆ ನಿಯಂತ್ರಣ ಕಷ್ಟವಾಗುತ್ತದೆ ಎಂದರು.

ನಗರದಲ್ಲಿರುವ ವಾಹನಗಳ ಪೈಕಿ ಸುಮಾರು ಶೇ.77ರಷ್ಟು ದ್ವಿಚಕ್ರ ವಾಹನಗಳಿವೆ. ಬಹಳಷ್ಟು ಜನರು ಪ್ರಯಾಣಕ್ಕೆ ಕಾರು, ದ್ವಿಚಕ್ರ ವಾಹನ ಸೇರಿ ಖಾಸಗಿ ವಾಹನಗಳನ್ನು ಅವಲಂಬಿಸಿ¨ªಾರೆ. ಬಡವರು ಬಹುತೇಕ ಪ್ರಯಾಣಕ್ಕೆ ಸಮೂಹ ಸಾರಿಗೆ ಬಳಸುತ್ತಾರೆ.  ಶ್ರೀಮಂತರು, ಸ್ಥಿತಿವಂತರು ತಮ್ಮ ಖಾಸಗಿ ವಾಹನಗಳ ಬದಲಾಗಿ ಸಮೂಹ ಸಾರಿಗೆ ಬಳಕೆ ಮಾಡಬೇಕು. ಖಾಸಗಿ ವಾಹನಗಳ ಬಳಕೆ ಕಡಿಮೆ ಮಾಡುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಮಾತ್ರವಲ್ಲದೆ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಕೂಡ ಕಡಿಮೆ ಆಗಲಿದೆ. ರಸ್ತೆ ಅಪಘಾತಗಳು ಕಡಿಮೆಯಾಗಲಿವೆ ಎಂದು ಹೇಳಿದರು.

ಇದೇ ವೇಳೆ ವಿಶ್ವ ಸಾರ್ವಜನಿಕ ಸಾರಿಗೆ ದಿನದ ಪ್ರಯುಕ್ತ ಸಮೂಹ ಸಾರಿಗೆ ಬಳಸುವ ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಶುಭ ಕೋರಲಾಯಿತು. ಅಂತೆಯೆ  ಕನ್ನಡ ಬಳಸಿ, ಕನ್ನಡ ಉಳಿಸಿ ಎಂಬ ಕನ್ನಡ ಜಾಗೃತಿ ಕರಪತ್ರ ವಿತರಿಸಲಾಯಿತು. ಖಾಸಗಿ ಸಂಚಾರ ಮಿತಗೊಳಿಸಿ, ಸಾರ್ವಜನಿಕ ಸಾರಿಗೆ ಉತ್ತೇಜಿಸಿ ಎಂದು ಪ್ರತಿಜ್ಞಾವಿಧಿ ಭೋದಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌, ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣನವರ್‌, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್‌ ಕುಮಾರ್‌, ಬಿಎಂಟಿಸಿ ಡಿಎಂಇ ವಿಲ್ಸನ್‌ ಹಾಗೂ ಇತರರು ಇದ್ದರು. ಬಳಿಕ ನಗರ ಪೊಲೀಸ್‌ ಆಯುಕ್ತರೂ ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಮೆಟ್ರೋದಲ್ಲಿ ಪ್ರಯಾಣಿಸಿ ಜಾಗೃತಿ ಮೂಡಿಸಿದರು.

ಟಾಪ್ ನ್ಯೂಸ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

palaniswami

AIADMK-BJP ಮರು ಮೈತ್ರಿ ಸುದ್ದಿ: ನಿರ್ಧಾರ ಬದಲಿಸುವರೇ ಪಳನಿಸ್ವಾಮಿ?

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

1-amit

Rahul Gandhi 4ನೇ ತಲೆಮಾರು ಬಂದರೂ ಮುಸ್ಲಿಂ ಕೋಟಾ ಇಲ್ಲ: ಅಮಿತ್ ಶಾ

1-nm

Nitish Kumar ; ವರ್ಷದೊಳಗೆ ಮೂರನೇ ಬಾರಿ ಪ್ರಧಾನಿ ಮೋದಿ ಕಾಲಿಗೆರಗಿದ ನಿತೀಶ್

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

palaniswami

AIADMK-BJP ಮರು ಮೈತ್ರಿ ಸುದ್ದಿ: ನಿರ್ಧಾರ ಬದಲಿಸುವರೇ ಪಳನಿಸ್ವಾಮಿ?

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

1-amit

Rahul Gandhi 4ನೇ ತಲೆಮಾರು ಬಂದರೂ ಮುಸ್ಲಿಂ ಕೋಟಾ ಇಲ್ಲ: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.