ಅಖಾಡದಲ್ಲಿ 2,655 ಹುರಿಯಾಳುಗಳು
Team Udayavani, Apr 29, 2018, 6:20 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಲೆಕ್ಕ ಪಕ್ಕಾ ಆಗಿದೆ. 2013ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಒಟ್ಟು ಅಭ್ಯರ್ಥಿಗಳ ಸಂಖ್ಯೆ ಇಳಿಮುಖವಾಗಿದೆ. ಇದೇ ವೇಳೆ, ಮಹಿಳಾ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
2018ರ ವಿಧಾನಸಭೆ ಚುನಾವಣೆಗೆ ಒಟ್ಟು 2,655 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. 2013ರಲ್ಲಿ ಒಟ್ಟು ಅಭ್ಯರ್ಥಿಗಳ ಸಂಖ್ಯೆ 2,948 ಇತ್ತು. ಅದರಂತೆ 293 ಅಭ್ಯರ್ಥಿಗಳು ಕಡಿಮೆಯಾಗಿ ದ್ದಾರೆ. ಇದೇ ವೇಳೆ ಕಳೆದ ಚುನಾವಣೆಯಲ್ಲಿ 170 ಮಹಿಳೆಯರು ಸ್ಪರ್ಧಿಸಿದ್ದರೆ, ಈ ಬಾರಿ ಅವರ ಸಂಖ್ಯೆ 219 ಆಗಿದೆ. ಈ ಬಾರಿ 49 ಮಹಿಳಾ ಅಭ್ಯರ್ಥಿಗಳ ಹೆಚ್ಚಾಗಿದ್ದಾರೆ.
ವಿಕಾಸಸೌಧದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, 2018ರ ವಿಧಾನಸಭಾ ಚುನಾವಣೆಗೆ 3,509 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ 271 ನಾಮಪತ್ರಗಳು ತಿರಸ್ಕೃತಗೊಂಡರೆ, 583 ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ತಿರಸ್ಕೃತ ಮತ್ತು ಹಿಂದಕ್ಕೆ ಪಡೆದ ಒಟ್ಟು ನಾಮಪತ್ರಗಳ ಸಂಖ್ಯೆ 854 ಆಗಿದೆ. 2013ರ ವಿಧಾನಸಭಾ ಚುನಾವಣೆಗೆ 3, 692 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ತಿರಸ್ಕೃತ ಮತ್ತು ವಾಪಸ್ ಪಡೆದ ನಾಮಪತ್ರಗಳ ಸಂಖ್ಯೆ 744 ಇತ್ತು ಎಂದು ತಿಳಿಸಿದರು.
2013ರಲ್ಲಿ 2,778 ಪುರುಷ ಅಭ್ಯರ್ಥಿಗಳು ಕಣಕ್ಕಿಳಿದಿದ್ದರೆ ಈ ಬಾರಿ 2,436 ಪುರುಷ ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.6ರಷ್ಟು ಮಹಿಳೆ ಕಣಕ್ಕಿಳಿದ್ದರೆ ಈ ಬಾರಿ ಶೇ.9ಕ್ಕೆ ಏರಿಕೆಯಾಗಿದೆ. 2013ರಲ್ಲಿ 170 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದರೆ, ಈ ಬಾರಿ 219 ಮಂದಿ ಸ್ಪರ್ಧೆಯಲ್ಲಿದ್ದಾರೆ ಎಂದರು.
ಮುಳಬಾಗಿಲಿನಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು:
ಮುಳಬಾಗಿಲು ಕ್ಷೇತ್ರದಲ್ಲಿ ಅತಿ ಹೆಚ್ಚು 61 ನಾಮಪತ್ರ ಸಲ್ಲಿಕೆಯಾಗಿದ್ದು, 17 ಮಂದಿ ನಾಮಪತ್ರ ವಾಪಸ್ ಪಡೆದಿದ್ದಾರೆ.ಅಂತಿಮವಾಗಿ 39 ಮಂದಿ ಕಣದಲ್ಲಿದ್ದಾರೆ. ಹೀಗಾಗಿ, ಮುಳಬಾಗಿಲು ಕ್ಷೇತ್ರದಲ್ಲಿ 3 ಬ್ಯಾಲೆಟ್ ಯೂನಿಟ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಹೆಚ್ಚು
ನಾಮಪತ್ರ ವಾಪಸ್ ಪಡೆದ ಕ್ಷೇತ್ರವೂ ಮುಳಬಾಗಿಲು ಆಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮೂರು ಬ್ಯಾಲೆಟ್ ಯೂನಿಟ್‌ಗಳನ್ನು ಬಳಸಲಾಗುತ್ತಿದೆ. 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಲ್ಲಿ ಅತಿ ಹೆಚ್ಚು 29 ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಎಂದರು.
ಚಳ್ಳಕೆರೆ ಮತ್ತು ಸೇಡಂ ಕ್ಷೇತ್ರದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡು ಕ್ಷೇತ್ರದಲ್ಲಿ ತಲಾ 4 ಮಂದಿ ಸ್ಪರ್ಧಿಸಿದ್ದಾರೆ. 2013ರಲ್ಲಿ ಯಮಕನಮರಡಿ ಮತ್ತು ಮುಧೋಳ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ತಲಾ 5 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಬಾರಿ 25 ಕ್ಷೇತ್ರದಲ್ಲಿ 15ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಾರೆ. 2013ರಲ್ಲಿ 38 ಕ್ಷೇತ್ರಗಳಲ್ಲಿ 15ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ 222, ಬಿಜೆಪಿ 224, ಜೆಡಿಎಸ್‌ನಿಂದ 210, ಬಿಎಸ್‌ಪಿ 18, ಸಿಪಿಐ 2, ಎನ್‌ಸಿಪಿ 14 ಕ್ಷೇತ್ರದಲ್ಲಿ ಸ್ಪರ್ಧಿಸಿವೆ. ಕಳೆದ ಬಾರಿ ಕಾಂಗ್ರೆಸ್ 224, ಬಿಜೆಪಿ 223, ಜೆಡಿಎಸ್ 222, ಕೆಜೆಪಿ 204, ಬಿಎಸ್‌ಆರ್ ಕಾಂಗ್ರೆಸ್ ನ 176 ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಎಂದು ತಿಳಿಸಿದರು.
ನೋಟಾ’ ಸಂಖ್ಯೆ ಹೆಚ್ಚಿದ್ದರೆ ಮರು ಮತದಾನವಿಲ್ಲ
ಬೆಂಗಳೂರು: “ನೋಟಾ’ ಮತಗಳ ಸಂಖ್ಯೆ ಹೆಚ್ಚಿದ್ದಾಗ, ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡುವ ಬದಲು ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಮತ ಪಡೆದವರನ್ನು ಚುನಾಯಿತ ಅಭ್ಯರ್ಥಿಯನ್ನಾಗಿ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಭ್ಯರ್ಥಿಗಳಿಗೆ ದೊರೆತ ಮತಗಳಿಗಿಂತಲೂ ನೋಟಾ ಮತಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲಿ ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡುವುದಿಲ್ಲ. ಬದಲಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಮತಗಳಿಸಿದ ಅಭ್ಯರ್ಥಿಯನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸಲಾಗುವುದು ಎಂದು ಹೇಳಿದರು.
ಚುನಾವಣೆಗೆ ಸ್ಪರ್ಧಿಸಿರುವ ಯಾವುದೇ ಅಭ್ಯರ್ಥಿಗೂ ಮತ ಚಲಾಯಿಸಲು ಇಷ್ಟವಿಲ್ಲದ ಮತದಾರರು ತಮ್ಮ ಗೌಪ್ಯತೆಯ ಹಕ್ಕನ್ನು ಉಲ್ಲಂ ಸದಿರಲು ಸುಪ್ರೀಂಕೋರ್ಟ್ ಆದೇಶದನ್ವಯ ನೋಟಾ ಆಯ್ಕೆಯನ್ನು ಇಡಲಾಗಿದೆ. ಚುನಾವಣಾ ಆಯೋಗವು ನೋಟಾ ಚಿಹ್ನೆಯನ್ನು ಇವಿಎಂ ಮತ್ತು ಮತಪತ್ರಗಳ ಕೊನೆಯಲ್ಲಿ ಅಳವಡಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
CM Siddaramaiah: ಯತ್ನಾಳ್ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.