ಸಂಚಾರ ನಿಯಂತ್ರಣಕ್ಕಾಗಿ ಡ್ರೋನ್ ಕ್ಯಾಮೆರಾ ಬಳಕೆ
Team Udayavani, Jun 20, 2023, 12:28 PM IST
ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸರು ಡ್ರೋನ್ ಕ್ಯಾಮೆರಾ ಮೊರೆ ಹೋಗಿದ್ದಾರೆ. ವಾಹನ ಸಂಚಾರ ದಟ್ಟಣೆ ಹೆಚ್ಚಿರುವ ಕೆಲ ಜಂಕ್ಷನ್‌ಗಳಲ್ಲಿ ಸೋಮವಾರ ಪ್ರಾಯೋಗಿಕವಾಗಿ ಎರಡು ಡ್ರೋನ್ ಕ್ಯಾಮೆರಾ ಹಾರಿಸಿ ಸಂಚಾರ ದಟ್ಟಣೆ ದೃಶ್ಯಾವಳಿ ಸೆರೆ ಹಿಡಿದು ಪರಿಶೀಲಿಸಿದ್ದಾರೆ.
ಸೇಫ್ ಸಿಟಿ ಯೋಜನೆಯಡಿ 8 ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಿದ್ದು, ಸಂಚಾರ ವಿಭಾಗಕ್ಕೆ 4 ಕ್ಯಾಮೆರಾ ಹಂಚಿಕೆ ಮಾಡಲಾಗಿದೆ. ಸೋಮವಾರ ಪ್ರಾಯೋಗಿಕವಾಗಿ ಕೆಲ ಜಂಕ್ಷನ್‌ಗಳಲ್ಲಿ ಎರಡು ಡ್ರೋನ್ ಕ್ಯಾಮೆರಾ ಬಳಸಲಾಗಿದೆ. ವಾಹನ ಸಂಚಾರ ದಟ್ಟಣೆ ಹೆಚ್ಚಿರುವ ಸಮಯ(ಪೀಕ್ ಅವರ್)ದಲ್ಲಿ ಈ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಸಂಚಾರ ದಟ್ಟಣೆ ದೃಶ್ಯಾವಳಿ ಸೆರೆ ಹಿಡಿದು ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಚರ್ಚಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಹೇಳಿದರು.
ನಗರದಲ್ಲಿ ಅತಿಹಚ್ಚು ವಾಹನ ಸಂಚಾರ ದಟ್ಟಣೆ ಇರುವ ಹೆಬ್ಟಾಳ ಮೇಲು ಸೇತುವೆ, ಸಿಲ್ಕ್ ಬೋರ್ಡ್ ಜಂಕ್ಷನ್, ಕೆ.ಆರ್.ಪುರ ಮೇಲು ಸೇತುವೆ, ಮಾರತಹಳ್ಳಿ, ಸಾರಕ್ಕಿ ಜಂಕ್ಷನ್, ಬನಶಂಕರಿ ಬಸ್ ನಿಲ್ದಾಣ, ಇಬ್ಬಲೂರು ಜಂಕ್ಷನ್, ಟ್ರಿನಿಟಿ ಜಂಕ್ಷನ್ ಸೇರಿ 20 ಜಂಕ್ಷನ್‌ಗಳನ್ನು ಗುರುತಿಸಲಾಗಿದೆ.
ಈ ಸ್ಥಳಗಳಲ್ಲಿ ಈ ಡ್ರೋನ್ ಕ್ಯಾಮರಾ ಬಳಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತದೆ. ನಗರ ಸಂಚಾರ ಪೊಲೀಸ್ ವಿಭಾಗದಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಕೆಲವು ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪೀಕ್ ಅವರ್‌ನಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅತಿಹೆಚ್ಚು ದಟ್ಟಣೆ ಇರುವ ಜಂಕ್ಷನ್‌ಗಳಲ್ಲಿ ಈ ಡ್ರೋನ್ ಕ್ಯಾಮೆರಾ ಹೆಚ್ಚು ಬಳಕೆ ಮಾಡುವುದಾಗಿ ಅವರು ಹೇಳಿದರು.
3 ತಿಂಗಳಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ ಸಾಧ್ಯತೆ: ನಗರದಲ್ಲಿ ಇತ್ತೀಚೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, “ಡ್ರೋನ್ ಸೇರಿದಂತೆ ಇನ್ನಿತರ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಕಪ್ಪು ಚುಕ್ಕೆಯಾಗಿರುವ ಸಂಚಾರ ದಟ್ಟಣೆಗೆ ಮುಂದಿನ ಮೂರು ತಿಂಗಳಿನಲ್ಲಿ ಮುಕ್ತಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದರು.
ದೇಶದಲ್ಲೇ ಮೊದಲ ಬಾರಿಗೆ ಈ ಯೋಜನೆ: ಕಳೆದ ವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿದ್ದ ಗೃಹ ಸಚಿವ ಡಾ|ಜಿ.ಪರಮೇಶ್ವರ್ ಅವರು, ಸಂಚಾರ ನಿಯಂತ್ರಣಕ್ಕೂ ಡ್ರೋನ್ ಬಳಸಲು ನಿರ್ಧರಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದ್ದರು. ಸಂಚಾರ ಪೊಲೀಸರು ನಿರ್ದಿಷ್ಟ ಜಂಕ್ಷನ್‌ಗಳಲ್ಲಿ ನಿಂತಿದ್ದರೆ ಅವರಿಗೆ ಹಿಂದಿನ ಜಂಕ್ಷನ್‌ಗಳಲ್ಲಿ ಎಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ ಎಂಬುದು ಗೊತ್ತಾಗುವುದಿಲ್ಲ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಪೊಲೀಸರು ಕೆಲಸ ಮಾಡುವ ಹಿಂದಿನ ಹಾಗೂ ಮುಂದಿನ ಜಂಕ್ಷನ್‌ಗಳಲ್ಲಿ ಡ್ರೋನ್ ಹಾರಾಡಿಸಿ ಅಲ್ಲಿನ ಸಂಚಾರ ದಟ್ಟಣೆ ಕುರಿತು ಪೊಲೀಸ್ ವಾಹನದೊಳಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು. ಯಾವುದರಿಂದಾಗಿ ಸಂಚಾರ ದಟ್ಟಣೆಗೆ ಆಗಿದೆ ಎಂಬುದನ್ನು ಪೊಲೀಸರು ತಿಳಿದುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.