ಶೌಚಾಲಯ ನಿರ್ಮಾಣಕ್ಕೆ ದಂಡದ ಮೊತ್ತ ಬಳಕೆ
Team Udayavani, Jun 6, 2018, 12:19 PM IST
ಬೆಂಗಳೂರು: ಬಸ್ ನಿಲ್ದಾಣ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗಳಿಂದ ದಂಡದ ರೂಪದಲ್ಲೇ ಸುಮಾರು 62 ಲಕ್ಷ ರೂ. ಸಂಗ್ರಹವಾಗಿದ್ದು, ಹೀಗೆ ದಂಡದಿಂದ ಬಂದ ಹಣದಲ್ಲೇ ಕೆಎಸ್‌ಆರ್‌ಟಿಸಿ ಸುಮಾರು 25 ಶೌಚಾಲಯಗಳನ್ನು ನಿರ್ಮಿಸಲು ಮುಂದಾಗಿದೆ.
ಹೌದು, ಕಳೆದ ಎರಡು ವರ್ಷಗಳಲ್ಲಿ ಕೆಎಸ್‌ಆರ್‌ಟಿಸಿ ವ್ಯಾಪ್ತಿಯ ವಿವಿಧ ಬಸ್ ನಿಲ್ದಾಣಗಳ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ 61,779 ಪ್ರಯಾಣಿಕರಿಗೆ ದಂಡ ವಿಧಿಸಿದ್ದು, ಅದರಿಂದ 62 ಲಕ್ಷ ರೂ. ಸಂಗ್ರಹವಾಗಿದೆ. ಈ ಹಣದಲ್ಲಿ ಕನಿಷ್ಠ 25 ಶೌಚಾಲಯಗಳನ್ನು ನಿರ್ಮಿಸಬಹುದು ಎಂದು ನಿಗಮವು ಅಂದಾಜು ಮಾಡಿದೆ. ಮುಂದಿನ ದಿನಗಳಲ್ಲಿ ಈ ಹಣವನ್ನು ಶೌಚಾಲಯ ನಿರ್ಮಾಣಕ್ಕಾಗಿಯೇ ವಿನಿಯೋಗಿಸಲು ನಿರ್ಧರಿಸಿದೆ.
ದಂಡ ಸಂಗ್ರಹ: ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಶೌಚಾಲಯಗಳಿದ್ದೂ ಅದನ್ನು ಉಪಯೋಗಿಸದೆ, ಕಂಡಲ್ಲೆಲ್ಲಾ ಮೂತ್ರ ವಿಸರ್ಜನೆ ಮಾಡಿದವರ ವಿರುದ್ಧ ಸಾವಿರ ರೂ. ದಂಡ ವಸೂಲು ಮಾಡಲಾಗಿದೆ. ಒಟ್ಟಾರೆ ಸಂಗ್ರಹವಾದ ದಂಡದ ಮೊತ್ತದಲ್ಲಿ ಅರ್ಧಕ್ಕರ್ಧ 2016ರ ಜನವರಿಯಿಂದ 2017ರ ಮಾರ್ಚ್ ಅವಧಿಯಲ್ಲೇ ಸಂಗ್ರಹವಾಗಿದೆ. ಈ ಅವಧಿಯಲ್ಲಿ 30,594 ಪ್ರಯಾಣಿಕರಿಂದ 30.59 ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. 2017ರ ಏಪ್ರಿಲ್‌ನಿಂದ 2018ರ ಮಾರ್ಚ್‌ನಲ್ಲಿ 29.82 ಲಕ್ಷ ಹಾಗೂ 2018 ಏಪ್ರಿಲ್‌ನಲ್ಲಿ 1,35,900 ರೂ. ದಂಡ ಸಂಗ್ರಹವಾಗಿದೆ ಎಂದು ನಿಗಮ ತಿಳಿಸಿದೆ.
46 ಕಡೆ ಮಳೆ ನೀರು ಕೊಯ್ಲು: ಇನ್ನು ನಿಗಮದ ವ್ಯಾಪ್ತಿಯ ಘಟಕ/ ಕಾರ್ಯಾಗಾರ/ ಕಚೇರಿಗಳು ಸೇರಿದಂತೆ ಈಗಾಗಲೇ 46 ಸ್ಥಳಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಸಲಾಗಿದ್ದು, ಸುಮಾರು ಎಂಟು ಸ್ಥಳಗಳಲ್ಲಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಉಳಿದ ಸ್ಥಳಗಳಲ್ಲಿ ಕಾರ್ಯಗತಗೊಳಿಸಲಾಗುವುದು. ಜತೆಗೆ 28 ಘಟಕಗಳಲ್ಲಿ ನೀರು ಮರುಬಳಕೆ ಸ್ಥಾವರಗಳನ್ನು ನಿರ್ಮಿಸಲಾಗಿದ್ದು, ಪ್ರತಿ ವರ್ಷ 2 ಲಕ್ಷ ಲೀ. ನೀರನ್ನು ಸಂಸ್ಕರಿಸಿ, ಮರುಬಳಕೆ ಮಾಡಲಾಗುತ್ತಿದೆ. ಉಳಿದ 54 ಘಟಕಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಕೆಎಸ್‌ಆರ್‌ಟಿಸಿಯ ಕೇಂದ್ರೀಯ ವಿಭಾಗದ 2ನೇ ಘಟಕದಲ್ಲಿ ಸಾಲುಮರದ ತಿಮ್ಮಕ್ಕ ಅವರು ಸಸಿ ನೆಟ್ಟರು. ಇದಕ್ಕೆ ನಿರ್ದೇಶಕ (ಸಿಬ್ಬಂದಿ ಮತ್ತು ಪರಿಸರ) ಕೆ. ಶ್ರೀನಿವಾಸ್, ಮುಖ್ಯ ಮೆಕಾನಿಕಲ್ ಎಂಜಿನಿಯರ್ ಡಾ.ಕೆ. ರಾಮಮೂರ್ತಿ, ಪ್ರಧಾನ ವ್ಯವಸ್ಥಾಪಕ (ಸಿಬ್ಬಂದಿ) ಬಿ.ಸಿ. ರೇನುಕೇಶ್ವರ್, ಮುಖ್ಯ ಕಾನೂನು ಅಧಿಕಾರಿ ಎಸ್. ಮನೋಹರ್ ಮತ್ತಿತರರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.