ದಮನಿತ ಮಹಿಳೆಯರು’ಎಂಬ ಪದ ಬಳಸಿ: ಸಚಿವೆ
Team Udayavani, Jun 12, 2018, 6:15 AM IST
ಬೆಂಗಳೂರು: “ಸೆಕ್ಸ್ ವರ್ಕರ್ಸ್ ಪದಕ್ಕೆ ಪರ್ಯಾಯವಾಗಿ ಇನ್ಮುಂದೆ ದಮನಿತ ಮಹಿಳೆಯರು’ ಎಂದು ಕರೆಯುವಂತೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಧಿಕಾರಿಗಳಿಗೆ
ಸೂಚಿಸಿದರು.
ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸೆಕ್ಸ್ ವರ್ಕರ್ಸ್ ಎಂಬ ಪದ ಬಳಕೆ ಒಂದು ರೀತಿಯಲ್ಲಿ ಅವಮಾನಕರ ಎಂಬಂತಿದೆ. ಹೀಗಾಗಿ, ದಮನಿತ ಮಹಿಳೆಯರು ಎಂದು ಬಳಕೆ ಮಾಡಿ ಎಂದು ನಿರ್ದೇಶನ ನೀಡಿದರು.
ಮುಂದಿನ ಐದು ವರ್ಷಗಳಲ್ಲಿ ಮಹಿಳೆಯರು ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸುವ ಬಗ್ಗೆ ಕಾರ್ಯಯೋಜನೆ ನೀಡಿ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಅವರು,ಕಲಾವಿದರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆಯೂ ಪ್ರಸ್ತಾವನೆ ಸಿದ್ಧಪಡಿಸುವಂತೆ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಚಕ್ರವರ್ತಿ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆಯ ನಿರ್ದೇಶಕಿ ದೀಪಾ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.