ವಿ.ಭದ್ರೇಗೌಡ ಅವಿರೋಧ ಆಯ್ಕೆ
Team Udayavani, Dec 6, 2018, 11:43 AM IST
ಬೆಂಗಳೂರು: ಬಿಬಿಎಂಪಿಯ 54ನೇ ಉಪಮೇಯರ್ ಆಗಿ ನಾಗಪುರ ವಾರ್ಡ್‌ನ ವಿ.ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಜತೆಗೆ 12 ಸ್ಥಾಯಿ ಸಮಿತಿಗಳ 132 ಸದಸ್ಯ ಸ್ಥಾನಗಳ ಪೈಕಿ 130 ಸದಸ್ಯರು ಅವಿರೋಧವಾಗಿ ಆಯ್ಕೆಯಾದರು.
ರಮೀಳಾ ಉಮಾಶಂಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಉಪಮೇಯರ್ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಆದರೆ, ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.
ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ಅವರು ಬುಧವಾರ ಪಾಲಿಕೆಯ ಕೆಂಪೇಗೌಡ ಪೌರಸಭಾಂಗಣದಲ್ಲಿ ಉಪಮೇಯರ್ ಹಾಗೂ 12 ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳ ಆಯ್ಕೆಗೆ ಚುನಾವಣಾ ಸಭೆ ಕರೆದಿದ್ದರು. ಈ ವೇಳೆ ಉಪಮೇಯರ್ ಸ್ಥಾನಕ್ಕೆ ಭದ್ರೇಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಪ್ರಾದೇಶಿಕ ಆಯುಕ್ತರು ಕೇವಲ ಐದು ನಿಮಿಷಗಳಲ್ಲಿ ಭದ್ರೇಗೌಡ ಅವರು ಉಪಮೇಯರ್ ಎಂದು ಘೋಷಿಸಿದರು.
ನಂತರ 12 ಸ್ಥಾಯಿ ಸಮಿತಿಗಳಲ್ಲಿ 11 ಸಮಿತಿಗಳಿಗೆ ತಲಾ 11 ಸದಸ್ಯರಂತೆ 121 ಸದಸ್ಯರ ಆಯ್ಕೆ ಸುಸೂತ್ರವಾಗಿ ನಡೆಯಿತು. ಉಳಿದಂತೆ ನಗರ ಯೋಜನೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ವೇಳೆ ಹೈಡ್ರಾಮ ನಡೆದು ಕೊನೆಗೆ ಸಮಿತಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯೇ ನಾಮಪತ್ರ ವಾಪಸ್ ಪಡೆದರು. ಈವೇಳೆ ಕೇವಲ 9 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 2 ಸದಸ್ಯರ ಸ್ಥಾನಗಳಿಗೆ ಮತ್ತೆ ಚುನಾವಣೆ ನಡೆಯಲಿದೆ.
ಮುಖಭಂಗ ತಪ್ಪಿಸಿಕೊಂಡ ಬಿಜೆಪಿ: ಉಪಮೇಯರ್ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಹಿಂದೆ ತಿಳಿಸಿತ್ತು. ಅದರಂತೆ ರಾಮಮೂರ್ತಿ ನಗರ ವಾರ್ಡ್ ಪಾಲಿಕೆ ಸದಸ್ಯೆ ಪದ್ಮಾವತಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಮೇಯರ್ ಚುನಾವಣೆಯಂತೆ ಮತ್ತೂಮ್ಮೆ ಮುಖಭಂಗವಾಗಬಹುದು ಎಂಬ ಕಾರಣದಿಂದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಬಿಜೆಪಿ ಮುಖಂಡರು ನಿರ್ಧರಿಸಿದರಿಂದ ಪದ್ಮಾವತಿ ಅವರು ನಾಮಪತ್ರ ಸಲ್ಲಿಸಲಿಲ್ಲ.
ಹೈಡ್ರಾಮ ನಡುವೆ ಆಯ್ಕೆ: ಉಪಮೇಯರ್ ಹಾಗೂ ಸ್ಥಾಯು ಸಮಿತಿ ಸದಸ್ಯರ ಚುನಾವಣಾ ಪ್ರಕ್ರಿಯೆ ಆರಂಭವಾದರೂ, ಮೂರು ಸಮಿತಿಗಳಿಗೆ ಕೆಲವೇ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಕಾರಣದಿಂದ ಪ್ರಾದೇಶಿಕ ಆಯುಕ್ತರು ಚುನಾವಣೆ ಪ್ರಕ್ರಿಯೆಯನ್ನು 12.30ವರೆಗೆ ಮುಂದೂಡಿದರು.
ಚುನಾವಣೆ ಪ್ರಕ್ರಿಯೆ ಮತ್ತೆ ಆರಂಭವಾದಾಗ ಮೊದಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ 13 ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ಕಾಂಗ್ರೆಸ್‌ನ ಆರ್ಯ ಶ್ರೀನಿವಾಸ್ ಹಾಗೂ ಪಕ್ಷೇತರ ಲಕ್ಷ್ಮೀನಾರಾಯಣ್ ನಾಮಪತ್ರ ಹಿಂಪಡೆದು ಉಳಿದ 11 ಸದಸ್ಯರು ಅವಿರೋಧ ಆಯ್ಕೆಯಾದರು.
ನಂತರ ನಡೆದ ನಗರ ಯೋಜನೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಗೆ ಕಾಂಗ್ರೆಸ್‌ನಿಂದ 7 ಸದಸ್ಯರು ಹಾಗೂ ಬಿಜೆಪಿಯಿಂದ 6 ಮಂದಿ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಎರಡು ನಾಮಪತ್ರಗಳು ಹೆಚ್ಚಿಗೆ ಬಂದಿದ್ದರಿಂದ ಚುನಾವಣಾಧಿಕಾರಿಗಳು, ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಿದರು. ಈ ವೇಳೆ ಕಾಂಗ್ರೆಸ್‌ನ ರಾಜಣ್ಣ ಅವರು ನಾಮಪತ್ರ ವಾಪಸ್ ಪಡೆದರು. ಆದರೆ, ಬಿಜೆಪಿ ಸದಸ್ಯರು ನಾಮಪತ್ರ ಹಿಂಪಡೆಯದೆ ಚುನಾವಣೆ ನಡೆಸಿ ಎಂದು ಒತ್ತಾಯಿಸಿದರು.
ಬಿಜೆಪಿ ಸದಸ್ಯರು ನಾಮಪತ್ರ ವಾಪಸ್ ಪಡೆಯದಿದ್ದಾಗ ಶಿವಯೋಗಿ ಸಿ. ಕಳಸದ ಅವರು, ಸದಸ್ಯರ ಆಯ್ಕೆಗೆ ಮತದಾನ ನಡೆಸಲಾಗುವುದು. ಒಮ್ಮೆ ಮತದಾನ ಪ್ರಕ್ರಿಯೆ ಆರಂಭವಾದರೆ, ಪ್ರತಿಯೊಂದು ಸದಸ್ಯ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಈ ಪ್ರಕ್ರಿಯೆ ನಡೆಸಲು ಒಂದು ವಾರ ಬೇಕಾಗಬಹುದು ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಶಾಸಕರಾದ ರಾಮಲಿಂಗಾರೆಡ್ಡಿ, ಮುನಿರತ್ನ, ಬಿ.ಬಸವರಾಜು ಸೇರಿ ಇತರರು ಬಿಜೆಪಿ ಶಾಸಕರಾದ ಆರ್.ಅಶೋಕ್, ವಿಶ್ವನಾಥ್, ಸತೀಶ್‌ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದರು. ಆದರೆ, ವಿಶ್ವನಾಥ್ ಅವರು, ಚಂದ್ರಪ್ಪರೆಡ್ಡಿ ನಾಮಪತ್ರ ವಾಪಸ್ ಪಡೆದರೆ ಮಾತ್ರವೇ ನಮ್ಮ ಸದಸ್ಯರು ನಾಮಪತ್ರ ಹಿಂಪಡೆಯುತ್ತಾರೆ. ಇಲ್ಲವೇ ಚುನಾವಣೆ ನಡೆಯಲಿ ಎಂದು ಪಟ್ಟುಹಿಡಿದರು.
ಕೊನೆಗೆ ರಾಮಲಿಂಗಾರೆಡ್ಡಿ ಅವರು, ಚಂದ್ರಪ್ಪರೆಡ್ಡಿ ಅವರ ಮನವೊಲಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿದರು. ನಂತರ ಬಿಜೆಪಿಯ ನಾರಾಯಣರಾಜು ಮತ್ತು ಗುರುಮೂರ್ತಿರೆಡ್ಡಿ ನಾಮಪತ್ರ ವಾಪಾಸ್ ಪಡೆದರು. ಇದರಿಂದ ಸಮಿತಿಗೆ 9 ಸದಸ್ಯರು ಮಾತ್ರ ಆಯ್ಕೆಯಾಗಿದ್ದು, ನಗರ ಯೋಜನೆ ಸ್ಥಾಯಿ ಸಮಿಯ ಇಬ್ಬರು ಸದಸ್ಯರ ಆಯ್ಕೆಗೆ ಮತ್ತೂಮ್ಮೆ ಚುನಾವಣೆ ನಡೆಸುವುದಾಗಿ ಚುನಾವಣಾಧಿಕಾರಿ ತಿಳಿಸಿದರು.
ಸೇಡು ತೀರಿಸಿಕೊಂಡ ಬಿಜೆಪಿ?: ಮೇಯರ್ ಚುನಾವಣೆಯಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಮೊದಲು ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದ ಪಕ್ಷೇತರರು ಕೊನೆಯ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸಿದ್ದರು.
ಆ ಹಿನ್ನೆಲೆಯಲ್ಲಿ ಪಕ್ಷೇತರ ಸದಸ್ಯ ಚಂದ್ರಪ್ಪರೆಡ್ಡಿ ಅವರಿಂದ ಒತ್ತಾಯ ಪೂರ್ವಕವಾಗಿ ನಾಮಪತ್ರ ಹಿಂಪಡೆಯುವಂತೆ ಮಾಡಿ ಅವರಿಗೆ ಅಧ್ಯಕ್ಷ ಸ್ಥಾನ ದೊರೆಯದಂತೆ ಮಾಡುವ ಮೂಲಕ ಬಿಜೆಪಿ ಸೇಡು ತೀರಿಸಿಕೊಂಡಿತು. ಕಳೆದ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ರ ಪತ್ನಿ ವಾಣಿಶ್ರೀ ಸೋಲಿಗೆ ಪಾಲಿಕೆ ಸದಸ್ಯ ಚಂದ್ರಪ್ಪ ರೆಡ್ಡಿ ಕಾರಣ ಎಂಬ ಸಿಟ್ಟಿನಿಂದ ಅವರು ನಾಮಪತ್ರ ವಾಪಸ್ ಪಡೆಯುವವರಿಗೆ ವಿಶ್ವನಾಥ್ ಅವರು ಪಟ್ಟು ಬಿಡಲಿಲ್ಲ ಎಂದು ಹೇಳಲಾಗಿದೆ.
ಬಿಜೆಪಿ ಶಾಸಕರ ವಿರುದ್ಧ ಗರಂ: ತಮ್ಮ ಕ್ಷೇತ್ರದ ಪಾಲಿಕೆ ಸದಸ್ಯರನ್ನು ಪ್ರಮುಖ ಸ್ಥಾಯಿ ಸಮಿತಿಗಳ ಸದಸ್ಯರನ್ನಾಗಿಸಬೇಕೆಂಬ ವಿಚಾರ ಬಿಜೆಪಿ ಶಾಸಕರಾದ ಆರ್.ಅಶೋಕ್ ಮತ್ತು ಸತೀಶ್‌ರೆಡ್ಡಿ ಕಿತ್ತಾಟಕ್ಕೆ ಕಾರಣವಾಯಿತು. ಬೆಳಗ್ಗೆ 9 ಗಂಟೆಗೆ ಬಿಬಿಎಂಪಿ ವಿರೋಧ ಪಕ್ಷ ನಾಯಕ ಕಚೇರಿಯಲ್ಲಿ ಸಭೆ ನಡೆಸಿದ ವೇಳೆ ತಮ್ಮ ಕ್ಷೇತ್ರದ ಪಾಲಿಕೆ ಸದಸ್ಯರಿಗೆ ಪ್ರಮುಖ ಸ್ಥಾಯಿ ಸಮಿತಿಗಳಿಗೆ ನೇಮಿಸಬೇಕೆಂದು ಸತೀಶ್‌ರೆಡ್ಡಿ ಪಟ್ಟು ಹಿಡಿದರು. ಅದಕ್ಕೆ ಆರ್.ಅಶೋಕ ಒಪ್ಪದಿದ್ದಾಗ, ಸತೀಶ್ ರೆಡ್ಡಿ ಗರಂ ಆದರು. ಈ ವೇಳೆ ಸಂಸದ ಪಿ.ಸಿ.ಮೋಹನ್ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನ ಪಡಿಸಿದರು.
ಮೀ ಟೂ ಆರೋಪ ಮಾಡಿದ ಬಿಜೆಪಿ ಸದಸ್ಯೆ: ತಮ್ಮನ್ನು ಯಾವುದೇ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಮಾಡದ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಟ್ಟೂರು ವಾರ್ಡ್‌ನ ಪಾಲಿಕೆ ಸದಸ್ಯೆ ನೇತ್ರಾ ಪಲ್ಲವಿ, ಬಿಜೆಪಿ ಮುಖಂಡರ ಮೇಲೆ ಮೀ ಟೂ ಆರೋಪ ಮಾಡಿದ್ದಾರೆ.
ಸ್ಥಾಯಿ ಸಮಿತಿ ಚುನಾವಣೆಗೂ ಮೊದಲು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಚೆನ್ನಾಗಿರುವ ಸದಸ್ಯೆಯರನ್ನು ಕರೆಯುತ್ತಾರೆ. ಆಗ ಹೋಗದಿದ್ದರೆ ಯಾವುದೇ ಸ್ಥಾನಮಾನ ನೀಡುವುದಿಲ್ಲ ಎಂದು ಕಣ್ಣೀರು ಹಾಕಿದರು. ಆದರೆ, ನೇತ್ರಾ ಪಲ್ಲವಿ ಅವರ ಆರೋಪದ ಬಗ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಮಾಜಿ ಡಿಸಿಎಂ ಆರ್.ಅಶೋಕ್ ಸೇರಿ ಬಿಜೆಪಿ ಮುಖಂಡರು ಯಾರೂ ಪ್ರತಿಕ್ರಿಯೆ ನೀಡಲಿಲ್ಲ.
* ಉಪಮೇಯರ್ ಚುಣಾವಣೆಗೆ ಹಾಜರಿದ್ದ ಮತದಾರರು: 219
* ಸ್ಥಾಯಿ ಸಮಿತಿ ಚುನಾವಣೆಗೆ ಹಾಜರಿದ್ದ ಮತದಾರರು: 200
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.