ಹನೂರು ಕ್ಷೇತ್ರ ಬಿಟ್ಟುಕೊಟ್ಟ ವಿ.ಸೋಮಣ್ಣ
Team Udayavani, Apr 2, 2018, 12:32 PM IST
ಬೆಂಗಳೂರು: ಹನೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರದಲ್ಲಿ ಎದ್ದಿದ್ದ ಗೊಂದಲಕ್ಕೆ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ತೆರೆ ಎಳೆದಿದ್ದು, “ನಾನು ಹನೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ,’ ಎಂದು ಹೇಳಿದ್ದಾರೆ.
“ಯಡಿಯೂರಪ್ಪ ಅವರ ತೀರ್ಮಾನಕ್ಕೆ ತಲೆಬಾಗಿ ಹನೂರು ಕ್ಷೇತ್ರ ಪರಿಮಳಾ ನಾಗಪ್ಪ ಅವರ ಪುತ್ರ ಪ್ರೀತಮ್‌ಗೆ ಬಿಟ್ಟುಕೊಟ್ಟಿದ್ದೇನೆ. ನನ್ನ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದು ಮುಂದಿನ ನಾಲ್ಕು ದಿನಗಳಲ್ಲಿ ಗೊತ್ತಾಗುತ್ತದೆ,’ ಎಂದು ಅವರು ತಿಳಿಸಿದರು. ಈ ನಡುವೆ ಸೋಮಣ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ತಮ್ಮ ನಿವಾಸದಲ್ಲಿ ನಡೆದ ಸಂಧಾನದಲ್ಲಿ ಹನೂರು ಕ್ಷೇತ್ರವನ್ನು ಪರಿಮಳಾ ನಾಗಪ್ಪ ಅವರ ಕುಟುಂಬಕ್ಕೆ ಬಿಟ್ಟುಕೊಡಲು ಸೋಮಣ್ಣ ಅವರನ್ನು ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಆದರೆ, ಸೋಮಣ್ಣ ಅವರು ಟಿಕೆಟ್ ತಪ್ಪಿದ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
“ಐದು ವರ್ಷಗಳಿಂದ ಅಲ್ಲಿ ಕೆಲಸ ಮಾಡಿದ್ದೇನೆ, ನನಗೆ ಟಿಕೆಟ್ ಕೊಡುವುದಿಲ್ಲ ಎಂದರೆ ಹೇಗೆ’ ಎಂದು ಸೋಮಣ್ಣ ಪ್ರಶ್ನಿಸಿದರು ಎಂದು ಹೇಳಲಾಗಿದೆ. ಜತೆಗೆ ಯಡಿಯೂರಪ್ಪ ನಿವಾಸದ ಮುಂದೆಯೇ ತಮ್ಮ ಶಿಷ್ಯ ಶಿವಕುಮಾರ್‌ರನ್ನು ತರಾಟೆಗೆ ತೆಗೆದುಕೊಂಡ ಅವರು, “ನಿಮ್ಮಂಥವರಿಂದಲೇ ನನಗೆ ಹೀಗಾಯಿತು, ಮುಂದಿದೆ ನಿನಗೆ ಮಾರಿ ಹಬ್ಬ,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಗಿ ತಿಳಿದುಬಂದಿದೆ.
ವಿ.ಸೋಮಣ್ಣ ಅವರು ಬಯಸಿದ ಕ್ಷೇತ್ರದಲ್ಲಿ ಟಿಕೆಟ್ ಸಿಗುತ್ತಿಲ್ಲ. ಹೀಗಾಗಿ, ಬೇಸರಗೊಂಡಿರುವ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪರ್ಕಿಸಿದ್ದು ರಾಜಾಜಿನಗರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದಾರೆ.
ರಾಜಾಜಿನಗರದಲ್ಲಿ ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿ ಇಲ್ಲದ ಕಾರಣ ಸೋಮಣ್ಣ ಅವರನ್ನು ಸೆಳೆಯಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಭಾನುವಾರ ತುರ್ತು ಪತ್ರಿಕಾಗೋಷ್ಠಿ ಕರೆದ ಸೋಮಣ್ಣ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.